ಯುವಕರಿಗೊಂದು ಭಾರಿ ಸಂತಸದ ಸುದ್ದಿ! ಏಪ್ರಿಲ್ 1 ರಿಂದ ಸಿಗಲಿದೆ ನಿರುದ್ಯೋಗ ಭತ್ಯೆ, ಎಷ್ಟು?
Chattisgarh Government: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ, ತಿಂಗಳಿಗೆ 2500 ರೂಪಾಯಿಗಳನ್ನು ನಿರುದ್ಯೋಗ ಭತ್ಯೆ ರೂಪದಲ್ಲಿ ನೀಡಲಾಗುವುದು ಎಂದು ಘೋಷಿಸಲಾಗಿದೆ. ಪ್ರಸ್ತುತ ಸರ್ಕಾರವು ಈ ಕುರಿತಾದ ಮಾನದಂಡಗಳು, ಮೊತ್ತ ಮತ್ತು ಬಜೆಟ್ ಹಂಚಿಕೆಯ ಮೇಲೆ ಕಾರ್ಯನಿರ್ವಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
Allowance To Unemployed Youths: ನಿರುದ್ಯೋಗಿಗಳ ಪಾಲಿಗೆ ಒಂದು ಭಾರಿ ಸಂತಸದ ಸುದ್ದಿ ಪ್ರಕಟವಾಗಿದೆ, ಗಣರಾಜ್ಯೋತ್ಸವದ ಅಂಗವಾಗಿ ಛತ್ತಿಸ್ಗಡ್ ಸರ್ಕಾರ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಿಸಿದೆ. ಪ್ರತಿ ತಿಂಗಳು ರಾಜ್ಯದ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಬಗ್ಗೆ ರಾಜ್ಯ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮಾತನಾಡಿದ್ದಾರೆ. ಮುಂದಿನ ಆರ್ಥಿಕ ವರ್ಷದಿಂದ ಈ ಭತ್ಯೆ ನೀಡಲಾಗುವುದು ಎಂದು ಬಘೇಲ್ ಟ್ವೀಟ್ ಮಾಡಿದ್ದಾರೆ. 2018 ರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ನಿರುದ್ಯೋಗ ಭತ್ಯೆ ನೀಡುವುದಾಗಿ ಹೇಳಿತ್ತು.
ಇದನ್ನೂ ಓದಿ-ಬ್ಯಾಂಕ್ ಗ್ರಾಹಕರಿಗೊಂದು ಪ್ರಮುಖ ಮಾಹಿತಿ! ಗ್ರಾಹಕರ ಜೇಬಿಗೆ ನೇರ ಹೊಡೆತ ಬೀಳಲಿದೆಯಾ?
15 ವರ್ಷಗಳ ಬಳಿಕ ಅಧಿಕಾರಕ್ಕೆ ಮರಳಿದ ಕಾಂಗ್ರೆಸ್
ಈ ಚುನಾವಣೆಯ ಭರವಸೆಯ ಆಧಾರದ ಮೇಲೆ, ಕಾಂಗ್ರೆಸ್ ಪಕ್ಷವು 15 ವರ್ಷಗಳ ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿತ್ತು. ಹೀಗಾಗಿ ಮುಂದಿನ ಆರ್ಥಿಕ ವರ್ಷದಿಂದ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವುದಾಗಿ ಪಕ್ಷ ಘೋಷಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ, ಪ್ರತಿ ತಿಂಗಳು ನಿರುದ್ಯೋಗ ಭತ್ಯೆ 2500 ರೂಪಾಯಿಗಳನ್ನು ನೀಡುವುದಾಗಿ ಘೋಷಿಸಲಾಗಿದೆ. ಪ್ರಸ್ತುತ ಸರ್ಕಾರವು ಈ ಕುರಿತಾದ ಮಾನದಂಡಗಳು, ಮೊತ್ತ ಮತ್ತು ಬಜೆಟ್ ಹಂಚಿಕೆಯ ಮೇಲೆ ಕಾರ್ಯನಿರ್ವಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ-Car Sale: 10 ರಿಂದ 18 ಲಕ್ಷ ಬೆಲೆ ಬಾಳುವ ಈ ಕಾರನ್ನು ಕೇವಲ 7.5 ಲಕ್ಷಕ್ಕೆ ಮನೆಗೆ ತನ್ನಿ!
ಸರ್ಕಾರಿ ಅಧಿಕಾರಿಗಳು ಪ್ರಸ್ತುತ ನಿರುದ್ಯೋಗ ಭತ್ಯೆಗಾಗಿ ರಾಜಸ್ಥಾನ ಮಾದರಿಯ ಅಧ್ಯಯನ ನಡೆಸುತ್ತಿದ್ದಾರೆ. ರಾಜಸ್ಥಾನ ಸರ್ಕಾರವು 'ಮುಖಮಂತ್ರಿ ಯುವ ಸಾಂಬಲ್ ಯೋಜನೆ' ಅಡಿಯಲ್ಲಿ 2019 ರಿಂದ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುತ್ತಿದೆ. ಛತ್ತಿಸ್ಗಡದ ಮೇಲೆ ಜಿಡಿಪಿಯ ಶೇ.26.2 ರಷ್ಟು ಸಾಲದ ಹೊರೆ ಇದೆ ಎಂಬುದು ಇಲ್ಲಿ ಉಲ್ಲೇಖನೀಯ. ಇದರ ಹೊರತಾಗಿಯೂ ಅಲ್ಲಿನ ಮುಖ್ಯಮಂತ್ರಿಗಳು ಕಾರ್ಮಿಕರು ಮತ್ತು ಮಹಿಳೆಯರಿಗಾಗಿ ಹಲವಾರು ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.