e-Passport: ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ವಿತರಣೆ ಎಂದಿನಿಂದ ಪ್ರಾರಂಭ?

e-Passport: ಇ-ಪಾಸ್‌ಪೋರ್ಟ್ ನಾಗರಿಕರ ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸುತ್ತದೆ. ಭದ್ರತೆಯನ್ನು ಹೆಚ್ಚಿಸುತ್ತದೆ ಮತ್ತು ಸುಗಮ ಅಂತರಾಷ್ಟ್ರೀಯ ಪ್ರಯಾಣಕ್ಕೆ ಸಹಾಯಕವಾಗಿದೆ ಎಂದು ತಜ್ಞರು ಹೇಳುತ್ತಾರೆ.

Edited by - Chetana Devarmani | Last Updated : Feb 2, 2022, 12:51 PM IST
  • ನಾಗರಿಕರಿಗೆ ಅನುಕೂಲವಾಗುವಂತೆ ಇ-ಪಾಸ್‌ಪೋರ್ಟ್‌ಗಳನ್ನು ಹೊರತರಲಿದೆ
  • ಇ-ಪಾಸ್‌ಪೋರ್ಟ್ ನಾಗರಿಕರ ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸುತ್ತದೆ
  • ಭದ್ರತೆಯನ್ನು ಹೆಚ್ಚಿಸುತ್ತದೆ ಮತ್ತು ಸುಗಮ ಅಂತರಾಷ್ಟ್ರೀಯ ಪ್ರಯಾಣಕ್ಕೆ ಸಹಾಯಕವಾ
e-Passport: ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ವಿತರಣೆ ಎಂದಿನಿಂದ ಪ್ರಾರಂಭ?  title=
ಇ-ಪಾಸ್‌ಪೋರ್ಟ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ನಾಗರಿಕರಿಗೆ ಅನುಕೂಲವಾಗುವಂತೆ ಸರ್ಕಾರವು 2022-23 ರಿಂದ ಇ-ಪಾಸ್‌ಪೋರ್ಟ್‌ಗಳನ್ನು ಹೊರತರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Stock Market After Budget 2022: ಭಾರಿ ಉತ್ಸಾಹದ ಮೂಲಕ 848 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದ Sensex

ಇ-ಪಾಸ್‌ಪೋರ್ಟ್ (e-Passport) ಅನ್ನು ಪರಿಚಯಿಸುವ ಕ್ರಮವು ಒಟ್ಟಾರೆ ನಾಗರಿಕರ ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸುತ್ತದೆ. ಭದ್ರತೆಯನ್ನು ಹೆಚ್ಚಿಸುತ್ತದೆ ಮತ್ತು ಸುಗಮ ಅಂತರಾಷ್ಟ್ರೀಯ ಪ್ರಯಾಣಕ್ಕೆ ಸಹಕಾರಿಯಾಗಿದೆ ಎಂದು ತಜ್ಞರು ಹೇಳುತ್ತಾರೆ.

ಲೈವ್‌ಮಿಂಟ್ ವರದಿಯ ಪ್ರಕಾರ, ವ್ಯಕ್ತಿಗಳ ಗುರುತನ್ನು ಖಚಿತಪಡಿಸಿಕೊಳ್ಳಲು ಇ-ಪಾಸ್‌ಪೋರ್ಟ್‌ಗಳು ರೇಡಿಯೊ-ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (RFID) ಮತ್ತು ಬಯೋಮೆಟ್ರಿಕ್‌ಗಳನ್ನು ಬಳಸುತ್ತವೆ. ಚಿಪ್ ಎಂಬೆಡೆಡ್ ಇ-ಪಾಸ್‌ಪೋರ್ಟ್‌ಗಳು ಪಾಸ್‌ಪೋರ್ಟ್ ಹೊಂದಿರುವವರ ವೈಯಕ್ತಿಕ ಡೇಟಾ - ಹೆಸರು, ಬಯೋಮೆಟ್ರಿಕ್ ವಿವರಗಳನ್ನು ಒಳಗೊಂಡಿರುತ್ತದೆ. ಒಂದು ವೇಳೆ ಚಿಪ್‌ನಲ್ಲಿ ಟ್ಯಾಂಪರಿಂಗ್ ಆಗಿದ್ದರೆ, ಸಿಸ್ಟಮ್ ಅದನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ ಮತ್ತು ಅಂತಹ ಸಂದರ್ಭದಲ್ಲಿ ಪಾಸ್‌ಪೋರ್ಟ್ ಅನ್ನು ದೃಢೀಕರಿಸಲಾಗುವುದಿಲ್ಲ.

ಇದನ್ನೂ ಓದಿ: Bank New Rules: ಈ ಬ್ಯಾಂಕಿನ Cheque ಪಾವತಿ ವ್ಯವಸ್ಥೆಯಲ್ಲಿ ಬದಲಾವಣೆ! ಇಲ್ಲಿದೆ ಮಹತ್ವದ ಮಾಹಿತಿ

ಎಂಇಎ ಕಾರ್ಯದರ್ಶಿ ಸಂಜಯ್ ಭಟ್ಟಾಚಾರ್ಯ ಈ ಹಿಂದೆ ತಮ್ಮ ಟ್ವೀಟ್‌ನಲ್ಲಿ ಇ-ಪಾಸ್‌ಪೋರ್ಟ್ ಬಗ್ಗೆ ಪ್ರಸ್ತಾಪಿಸಿದ್ದರು. 

 

 

ನಾಸಿಕ್ ಮೂಲದ ಇಂಡಿಯಾ ಸೆಕ್ಯುರಿಟಿ ಪ್ರೆಸ್ ಪಾಸ್‌ಪೋರ್ಟ್ (Passport) ಜಾಕೆಟ್‌ಗಳಿಗೆ ಐಸಿಎಒ-ಕಂಪ್ಲೈಂಟ್ ಎಲೆಕ್ಟ್ರಾನಿಕ್ ಚಿಪ್ ಇನ್‌ಲೇಗಳ ಉತ್ಪಾದನೆಗೆ ಗುತ್ತಿಗೆ ನೀಡುವ ಪ್ರಕ್ರಿಯೆಯಲ್ಲಿದೆ. ಚಿಪ್-ಚಾಲಿತ ಇ-ಪಾಸ್‌ಪೋರ್ಟ್‌ಗಳ ವಿತರಣೆಗೆ ಈ ಸಂಪರ್ಕರಹಿತ ಒಳಹರಿವು ಅಗತ್ಯವಿದೆ. ಖರೀದಿ ಪ್ರಕ್ರಿಯೆ ಮುಗಿದ ನಂತರ ಪಾಸ್‌ಪೋರ್ಟ್‌ಗಳ ವಿತರಣೆ ಪ್ರಾರಂಭವಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News