ಬೆಂಗಳೂರು : ಪ್ರತಿ ತಿಂಗಳ ಮೊದಲನೇ ತಾರೀಕಿನಂದು ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಬದಲಾಯಿಸುತ್ತವೆ. ಜೂನ್ 1ರಂದು ಕೂಡಾ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 83 ರೂಪಾಯಿ ಇಳಿಕೆಯಾಗಿದ್ದು, ಜನಸಾಮಾನ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಈ ಬಾರಿ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. ಈ ಬಾರಿ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್‌ಗೆ 7 ರೂ. ಹೆಚ್ಚಳ ಮಾಡಿದೆ. ಈ ಬಾರಿ ಜುಲೈ 1 ರಂದು ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ ಬದಲಾಗಿ ದರ ಬದಲಾವಣೆ ಇಂದು ಜಾರಿಗೆ ಬಂದಿದೆ.
ನಾಲ್ಕು ತಿಂಗಳ ನಂತರ 7 ರೂಪಾಯಿ ಹೆಚ್ಚಳ :
ತೈಲ ಮಾರುಕಟ್ಟೆ ಕಂಪನಿಗಳು ಕಳೆದ ನಾಲ್ಕು ತಿಂಗಳಿನಿಂದ ನಿರಂತರವಾಗಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಗ್ರಾಹಕರಿಗೆ ಪರಿಹಾರ ನೀಡುತ್ತಿವೆ. ಆದರೆ ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಾರ್ಚ್ 1, 2023 ರಂದು ಸಿಲಿಂಡರ್ ಬೆಲೆ ರೂ.2119.50 ಆಗಿತ್ತು. ನಂತರ ಏಪ್ರಿಲ್ ನಲ್ಲಿ 2028 ರೂ.ಗೆ ಇಳಿಕೆಯಾಗಿದ್ದು, ಮೇ ತಿಂಗಳಲ್ಲಿ 1856.50 ರೂ., ಜೂನ್ 1ಕ್ಕೆ 1773 ರೂ.ಯಷ್ಟಾಗಿತ್ತು. ಇದೀಗ ನಾಲ್ಕು ತಿಂಗಳ ನಂತರ ಸಿಲಿಂಡರ್ ಬೆಲೆ ರೂ.7ರಷ್ಟು ಏರಿಕೆಯಾಗಿದೆ.
ಇದನ್ನೂ ಓದಿ : 2,000 ರೂ. ಮುಖಬೆಲೆಯ ಶೇ.76ರಷ್ಟು ನೋಟುಗಳು ಬ್ಯಾಂಕ್‌ಗಳಿಗೆ ವಾಪಸ್: ಆರ್‌ಬಿಐ
ಜೂನ್ 1 ರ ಅನುಸಾರ ಪ್ರಮುಖ ಮೆಟ್ರೋ ನಗರ ದೆಹಲಿಯಲ್ಲಿ ಗ್ಯಾಸ್ ಸಿಲಿಂಡರ್ ದರ
ದೆಹಲಿ - 1773 ರೂ.
ಕೋಲ್ಕತ್ತಾ - 1895.50 ರೂ.
ಮುಂಬೈ - 1733.50 ರೂ.
ಚೆನ್ನೈ - 1945 ರೂ.
ಸುದ್ದಿ ಸಂಸ್ಥೆ ANI ವರದಿ ಪ್ರಕಾರ, 19 ಕೆಜಿ ವಾಣಿಜ್ಯ LPG ಸಿಲಿಂಡರ್ ರಾಜಧಾನಿ ದೆಹಲಿಯಲ್ಲಿ 1,773 ರೂ ಬದಲಿಗೆ 1,780 ರೂಗೆ ಲಭ್ಯವಿರುತ್ತದೆ. ಅಂದರೆ, ಈಗ ಇದಕ್ಕಾಗಿ ನೀವು ಮೊದಲಿಗಿಂತ 7 ರೂಪಾಯಿ ಹೆಚ್ಚು ಪಾವತಿಸಬೇಕಾಗುತ್ತದೆ. ಸುದ್ದಿ ಬರೆಯುವ ತನಕ, ಹೊಸ ಬೆಲೆಯನ್ನು ಇಂಡಿಯನ್ ಆಯಿಲ್ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿಲ್ಲ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ : Mahindra Best Selling Car: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ SUV
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.