Budget 2024: ಸತತ ಏಳನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (FM Nirmala Sitharaman), ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುವ ದೃಷ್ಟಿಯಿಂದ ಎಲ್ಲರಿಗೂ ಸಾಕಷ್ಟು ಅವಕಾಶಗಳನ್ನು ಸೃಷ್ಟಿಸಲು ಉತ್ಪಾದಕತೆ, ಉದ್ಯೋಗಗಳು, ಸಾಮಾಜಿಕ ನ್ಯಾಯ ಸೇರಿದಂತೆ 9 ಆದ್ಯತೆಗಳ ಮೇಲೆ ನಿರಂತರ ಪ್ರಯತ್ನ ನಡೆಸಲಾಗುವುದು ಎಂದು ಬಣ್ಣಿಸಿದರು.
2024-25 ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ (Union Budget 2024) ಕೇಂದ್ರ ಸರ್ಕಾರದ 9 ಆದ್ಯತೆಗಳನ್ನು ಪಟ್ಟಿ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(FM Nirmala Sitharaman), ಕೃಷಿ, ಉದ್ಯೋಗ ಮತ್ತು ಕೌಶಲ್ಯ, ಸುಧಾರಿತ ಮಾನವ ಸಂಪನ್ಮೂಲಗಳು, ಸಾಮಾಜಿಕ ನ್ಯಾಯ, ಉತ್ಪಾದನೆ ಮತ್ತು ಸೇವೆಗಳು, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲಸೌಕರ್ಯ, ನಾವೀನ್ಯತೆಗಳಲ್ಲಿ ಸರ್ಕಾರವು ನಿರಂತರ ಪ್ರಯತ್ನಗಳನ್ನು ಮಾಡುತ್ತದೆ ಎಂದು ತಿಳಿಸಿದರು.
The Union Budget 2024-25 envisages sustained efforts on 9 priorities for generating ample opportunities for all.#Budget2024 #BudgetForViksitBharat pic.twitter.com/HkqXAeafX4
— Ministry of Finance (@FinMinIndia) July 23, 2024
ಅಷ್ಟೇ ಅಲ್ಲದೆ, ತಮ್ಮ ಬಜೆಟ್ ಭಾಷಣದಲ್ಲಿ (Budget Speech) ಉದ್ಯೋಗ, ಶಿಕ್ಷಣ ಮತ್ತು ಕೌಶಲ್ಯದ ಮೇಲೆ ಗಮನವನ್ನು ಪುನರುಚ್ಚರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಉತ್ಪಾದನಾ ವಲಯದಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪ್ರಾಥಮಿಕವಾಗಿ ಗಮನ ಹರಿಸಲಾಗಿದೆ ಎಂದು ವಿವರಿಸಿದರು.
ಐದು ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ ಐದು ಯೋಜನೆಗಳು ಮತ್ತು ಉಪಕ್ರಮಗಳ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಪರಿಚಯಿಸಿದ ಸೀತಾರಾಮನ್, ಇದಕ್ಕಾಗಿ ₹2 ಸಾವಿರ ಕೋಟಿ ಮೀಸಲಿಸಿರುವುದಾಗಿ ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.