ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನೆ

ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ (Green-Hydrogen) ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು

Written by - Yashaswini V | Last Updated : Jul 19, 2024, 04:34 PM IST
  • ಓಮಿಯಂ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ.
  • ಇಲ್ಲಿ ಸದ್ಯಕ್ಕೆ ವರ್ಷಕ್ಕೆ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ ಉತ್ಪಾದನೆ ಅಗಲಿದ್ದು, ಹಂತಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು.
  • ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿವೆ.
ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನೆ title=

ಬೆಂಗಳೂರು: ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ (Minister MB Patila) ಹೇಳಿದ್ದಾರೆ.

ದೊಡ್ಡಬಳ್ಳಾಪುರದ ಸಮೀಪ ಅಮೆರಿಕಾ ಮೂಲದ ಓಮಿಯಮ್ ಕಂಪನಿಯು (Omium Company) ಸ್ಥಾಪಿಸಿರುವ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ (Green Hydrogen Electrolyzer Giga Factory) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಕೇಂದ್ರದ ನವೀಕರಿಸಬಹುದಾದ ಇಂಧನ ಇಲಾಖೆ ಸಚಿವ ಪ್ರಹ್ಲಾದ ಜೋಷಿ (Energy Minister Prahlada Joshi) ಅವರು ಘಟಕಕ್ಕೆ ಚಾಲನೆ ನೀಡಿದರು.

ಓಮಿಯಂ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿ ಸದ್ಯಕ್ಕೆ ವರ್ಷಕ್ಕೆ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ ಉತ್ಪಾದನೆ (Green Hydrogen Production) ಆಗಲಿದ್ದು, ಹಂತಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು.  ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿವೆ ಎಂದರು.

ಇದನ್ನೂ ಓದಿ- ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ !ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ ಆದೇಶ !

ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ (Green-Hydrogen) ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು ಎಂದು ಅವರು ವಿವರಿಸಿದರು.

ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದರು.

ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಪರಿಸರಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆ ಭರದಿಂದ ನಡೆಯುತ್ತಿದೆ. ಇದನ್ನು ನಾವು ಪ್ರಮುಖ ವಲಯವಾಗಿ ಗುರುತಿಸಿದ್ದೇವೆ ಎಂದು ಅವರು ನುಡಿದರು.

ಇದನ್ನೂ ಓದಿ- ಅಂಬಾನಿ-ಅದಾನಿಗೆ ಟಕ್ಕರ್ ನೀಡಲು ಮುಂದಾದ ಟಾಟಾ: ಈ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಸಜ್ಜು!

ರಚನಾತ್ಮಕ ಉಪಕ್ರಮಗಳ ಫಲವಾಗಿ ರಾಜ್ಯವು 2016ರಿಂದಲೂ ಹೂಡಿಕೆ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಅವರು ವಿವರಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ ಭಾರತವು ಆದ್ಯತೆ ನೀಡಿದ್ದು, ಈ ಕ್ಷೇತ್ರದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿದೆ. ಟಾಟಾ ಸಮೂಹ ಮತ್ತು ಎನ್ಟಿಪಿಸಿ ಕೂಡ ಇದರ ಲಾಭವನ್ನು ಮನಗಂಡಿವೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಧೀರಜ್ ಮುನಿರಾಜು, ಶಾಸಕರೂ ಆದ ಕ್ರೆಡೆಲ್ ಅಧ್ಯಕ್ಷ ರಾಜೇಗೌಡ, ಕಂಪನಿಯ ಉನ್ನತ ಅಧಿಕಾರಿಗಳಾದ ಅಮಿ ಬಾಲಟೈನ್, ಅಶ್ವಿನ್ ವರ್ಮಾ ಮುಂತಾದವರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News