ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯಮಿದಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 2750.55 ಕೋಟಿ ರೂ. ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಚಾರ್ಟ್ ಸಿದ್ಧವಾದ ನಂತರ ಟಿಕೆಟ್ ಕ್ಯಾನ್ಸಲ್ ಮಾಡಿದರೂ ಸಿಗುವುದು ರಿಫಂಡ್ .! ರೈಲ್ವೆಯ ಈ ನಿಯಮವನ್ನು ತಿಳಿಯಿರಿ


ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಶನಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ನೇತೃತ್ವದಲ್ಲಿ ನಡೆದ 134 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು.


ಒಟ್ಟು 53 ಯೋಜನೆಗಳಿಂದ  2750.55 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.


50 ಕೋಟಿ ರೂ. ಗೂ ಹೆಚ್ಚು ಬಂಡವಾಳ ಹೂಡಿಕೆಯ ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ರೂ. 1670.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 4000 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಹೇಳಿದರು.


ಇದೇ ರೀತಿ 15 ಕೋಟಿ ರೂ. ಯಿಂದ ರೂ.50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 41 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ 1062.01 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 4311 ಜನರಿಗೆ ಉದ್ಯೋಗಗಳು ಸೃಜನೆಯಾಗಲಿವೆ.


ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ 17.85 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಒಟ್ಟು 53 ಯೋಜನೆಗಳಿಂದ ರೂ. 2750.55 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ.


ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಹೂಡಿಕೆ ಹಾಗೂ ಉದ್ಯೋಗಗಳು:


ಉಕೇಮ್ ಅಗ್ರೀ ಇನ್ಪಾ ಲಿ. 497.95 ಕೋಟಿ ರೂ. ಹೂಡಿಕೆ, ಉದ್ಯೋಗ - 425


ಸುಂದರಿ ಶುಗರ್ಸ್ ಲಿಮಿಟೆಡ್ - 402.24 ಕೋಟಿ ರೂ. ಹೂಡಿಕೆ, ಉದ್ಯೋಗ-270


ಎವರೆಸ್ಟ್ ಇಂಡಸ್ಟ್ರೀಸ್ ಲಿಮಿಟೆಡ್ 187  ಕೋಟಿ ರೂ. ಹೂಡಿಕೆ, ಉದ್ಯೋಗ-120


ಕೊಪ್ಪಳ ಟಾಯ್ಸ್ ಮೋಲ್ಡಿಂಗ್ ಕೋ ಪ್ರೈವೇಟ್ ಲಿಮಿಟೆಡ್-131.94 ಕೋಟಿ ರೂ.ಹೂಡಿಕೆ, ಉದ್ಯೋಗ-800


 ಅಕ್ವೀಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್-118.27 ಕೋಟಿ ರೂ. ಹೂಡಿಕೆ,  ಉದ್ಯೋಗ-485


ಕೆಆರ್ ಬಿಎಲ್  ಲಿಮಿಟೆಡ್-110.25 ಕೋಟಿ ರೂ. ಹೂಡಿಕೆ, ಉದ್ಯೋಗ-140


ಅಕ್ವೀಸ್ ಟಾಯ್ಸ್ ಪ್ರೈವೇಟ್ ಲಿಮಿಟೆಡ್ ಡಿಟಿಎ ಯುನಿಟ್- 72.58 ಕೋಟಿ ರೂ. ಹೂಡಿಕೆ, ಉದ್ಯೋಗ-550


ಹೆಲ್ಲಾ ಇನ್ಫ್ರಾ ಮಾರ್ಕೆಟ್ ಪ್ರೈವೇಟ್ ಲಿಮಿಟೆಡ್-71.66 ಕೋಟಿ ರೂ. ಹೂಡಿಕೆ, ಉದ್ಯೋಗ -1500 


ಸಾವಿತ್ರಿ ಪ್ಲೈಬೋರ್ಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್- 49.86 ಕೋಟಿ ರೂ. ಹೂಡಿಕೆ, ಉದ್ಯೋಗ-515


ಇದನ್ನೂ ಓದಿ: Free Ration: ಉಚಿತ ಪಡಿತರ ಯೋಜನೆಯಲ್ಲಿ ಭಾರೀ ಬದಲಾವಣೆ, ಈ ತಿಂಗಳಿನಿಂದಲೇ ನಿಯಮ ಜಾರಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.