Petrol and Diesel Price On December 28: ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ. ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವು ಸ್ವಲ್ಪಮಟ್ಟಿಗೆ ಕುಸಿಯುತ್ತಿದೆ ಮತ್ತು ಪ್ರತಿ ಬ್ಯಾರೆಲ್‌ಗೆ 74.06 ಡಾಲರ್‌ಗೆ ಮಾರಾಟ ಮಾಡಲಾಗುತ್ತಿದ್ದು, ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ $ 79.65 ತಲುಪಿ $ 1.42 ರಷ್ಟು ಕುಸಿದಿದೆ.  


COMMERCIAL BREAK
SCROLL TO CONTINUE READING

ಇಂದು ರಾಜ್ಯ ಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕಡಿಮೆ ಬದಲಾವಣೆಯಾಗಿದೆ. ಉತ್ತರಾಖಂಡ, ಗೋವಾ, ಜಾರ್ಖಂಡ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಏರಿಳಿತವಾಗಿದೆ. ಇತರ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.


ಇದನ್ನೂ ಓದಿ: ಸಿಲಿಂಡರ್ ಬೆಲೆ 450 ರೂಪಾಯಿಗೆ ಇಳಿಕೆ : ಬಡವರಿಗಾಗಿ ಸರ್ಕಾರದ ದಿಟ್ಟ ಕ್ರಮ


ಪ್ರಸ್ತುತ, ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 96.72 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 89.62 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಮಾರಾಟವಾಗುತ್ತಿದ್ದರೇ, ಮತ್ತೊಂದೆಡೆ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು 102.63 ರೂ ಮತ್ತು ಡೀಸೆಲ್ ರೂ 94.24 ಕ್ಕೆ ಮಾರಾಟ ಮಾಡಲಾಗುತ್ತಿದೆ. ಇತ್ತ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 101.94 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 87.89 ರೂ.ಗೆ ಮಾರಾಟವಾಗುತ್ತಿದೆ. 


ಭಾರತದಲ್ಲಿ, ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇದನ್ನು ಪ್ರತಿದಿನ ಮಾಡಲಾಗುತ್ತದೆ ಮತ್ತು ಪ್ರಪಂಚದಾದ್ಯಂತ ಕಚ್ಚಾ ತೈಲದ ಬೆಲೆಯನ್ನು ಅನುಸರಿಸಿ ದರಗಳನ್ನು ನಿರ್ಧರಿಸಲಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.