Reserve Bank of India : ರಿಸರ್ವ್ ಬ್ಯಾಂಕ್ ದೇಶದ ಎಲ್ಲಾ ಬ್ಯಾಂಕುಗಳನ್ನು ಮೇಲ್ವಿಚಾರಣೆ ಮಾಡುತ್ತದೆ.ಬ್ಯಾಂಕ್ ವೊಂದಕ್ಕೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.ಆರ್‌ಬಿಐ ಇದೀಗ ಈ ಬ್ಯಾಂಕ್‌ಗೆ ಹಲವು ನಿರ್ಬಂಧಗಳನ್ನು ಹೇರಿದೆ. ಆರ್ ಬಿಐ ತೆಗೆದುಕೊಂಡಿರುವ ಈ ಕ್ರಮ ಬ್ಯಾಂಕ್‌ನ ಗ್ರಾಹಕರ ಮೇಲೆ ನೇರ ಪರಿಣಾಮ ಬೀರಲಿದೆ. 


COMMERCIAL BREAK
SCROLL TO CONTINUE READING

ಮಹಾರಾಷ್ಟ್ರದ ಶಿರ್ಪುರ್ ಮರ್ಚೆಂಟ್ಸ್ ಕೋಆಪರೇಟಿವ್ ಬ್ಯಾಂಕ್ ವಿರುದ್ಧ RBI  ಮಹತ್ವದ ಹೆಜ್ಜೆ ಇಟ್ಟಿದೆ. ಮಹಾರಾಷ್ಟ್ರ ಮೂಲದ ಶಿರ್ಪುರ್ ಮರ್ಚೆಂಟ್ಸ್ ಕೋಆಪರೇಟಿವ್ ಬ್ಯಾಂಕಿನ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರಿಸರ್ವ್ ಬ್ಯಾಂಕ್ (RBI ) ಹಲವಾರು ನಿರ್ಧಾರಗಳನ್ನು ತೆಗೆದುಕೊಂಡಿದೆ. 


ಇದನ್ನೂ ಓದಿ : Gold And Silver Price: ಯುಗಾದಿ ಹಬ್ಬದಂದು ಚಿನ್ನ ಹಾಗೂ ಬೆಳ್ಳಿಯ ಬೆಲೆ ಭಾರೀ ಹೆಚ್ಚಳ!


 ಸಾಲ ನೀಡಲು ಸಾಧ್ಯವಾಗುವುದಿಲ್ಲ ಈ ಬ್ಯಾಂಕ್ : 
ಬ್ಯಾಂಕ್‌ನಿಂದ ಹಣ ಹಿಂಪಡೆಯುವುದು ಸೇರಿದಂತೆ ಹಲವು ಸೇವೆಗಳಿಗೆ ಆರ್‌ಬಿಐ ನಿರ್ಬಂಧ ಹೇರಿದೆ. ಸೋಮವಾರದ ವಹಿವಾಟಿನ ಮುಕ್ತಾಯದ ನಂತರ, ಈ ಸಹಕಾರಿ ಬ್ಯಾಂಕ್ ಯಾವುದೇ ಹೊಸ ಸಾಲವನ್ನು ನೀಡಲು ಸಾಧ್ಯವಾಗುವುದಿಲ್ಲ ಅಥವಾ ಯಾವುದೇ ಹೂಡಿಕೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. 


ಆರ್‌ಬಿಐ ಅನುಮತಿ ಅಗತ್ಯ :
ಇದರೊಂದಿಗೆ, ಕೇಂದ್ರ ಬ್ಯಾಂಕ್‌ನ ಅನುಮತಿಯಿಲ್ಲದೆ ಬ್ಯಾಂಕ್ ತನ್ನ ಆಸ್ತಿಯನ್ನು ವರ್ಗಾಯಿಸಲು ಅಥವಾ ವಿಲೇವಾರಿ ಮಾಡಲು ಕೂಡಾ ಸಾಧ್ಯವಾಗುವುದಿಲ್ಲ. ಶಿರ್ಪುರ್ ಮರ್ಚೆಂಟ್ಸ್ ಕೋಆಪರೇಟಿವ್ ಬ್ಯಾಂಕ್ ನ ಪ್ರಸ್ತುತ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಿಸರ್ವ್ ಬ್ಯಾಂಕ್ ಈ ಕ್ರಮ ಕೈಗೊಂಡಿದೆ. 


ಖಾತೆಯಿಂದ ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ :
ಇದರಲ್ಲಿ,ಎಲ್ಲಾ ಉಳಿತಾಯ ಬ್ಯಾಂಕ್ ಅಥವಾ ಚಾಲ್ತಿ ಖಾತೆಗಳು ಅಥವಾ ಠೇವಣಿದಾರರ ಯಾವುದೇ ಖಾತೆಯಲ್ಲಿನ ಒಟ್ಟು ಬ್ಯಾಲೆನ್ಸ್‌ನಿಂದ ಯಾವುದೇ ಮೊತ್ತವನ್ನು ಹಿಂಪಡೆಯಲು ಅನುಮತಿ ಇರುವುದಿಲ್ಲ. ಆದರೆ, ರಿಸರ್ವ್ ಬ್ಯಾಂಕ್‌ನ ಈ ನಿಯಮಗಳು ಮತ್ತು ಷರತ್ತುಗಳ ಅಡಿಯಲ್ಲಿ ಬ್ಯಾಂಕ್ ಗ್ರಾಹಕರು ತಮ್ಮ ಖಾತೆಯಲ್ಲಿ ಠೇವಣಿ ಮಾಡಿದ ಮೊತ್ತದಿಂದ ಸಾಲವನ್ನು ಪಾವತಿಸುವುದು ಸಾಧ್ಯವಾಗುತ್ತದೆ.


ಇದನ್ನೂ ಓದಿ : Ayushman Bharat Health Account: ಏನಿದು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ? ಇದರ ಲಾಭವೇನು?


5 ಲಕ್ಷದವರೆಗಿನ ಮೊತ್ತವನ್ನು ಪಡೆಯುವ ಅರ್ಹತೆ :
ಅರ್ಹ ಠೇವಣಿದಾರರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ಡಿಐಸಿಜಿಸಿ) ನಿಂದ 5 ಲಕ್ಷದವರೆಗಿನ ಠೇವಣಿ ವಿಮಾ ಕ್ಲೈಮ್ ಮೊತ್ತವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಆರ್‌ಬಿಐ ಹೇಳಿದೆ. 


6 ತಿಂಗಳವರೆಗೆ ಜಾರಿಯಲ್ಲಿರುತ್ತವೆ ನಿರ್ಬಂಧಗಳು :
ಏಪ್ರಿಲ್ 8, 2024 ರಂದು ವ್ಯವಹಾರವನ್ನು ಮುಚ್ಚುವುದರಿಂದ ಶಿರ್ಪುರ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ ವಿಧಿಸಲಾದ ನಿರ್ಬಂಧಗಳು ಆರು ತಿಂಗಳವರೆಗೆ ಜಾರಿಯಲ್ಲಿರುತ್ತವೆ.ಆದರೆ, ಈ ಸೂಚನೆಗಳನ್ನು ಬ್ಯಾಂಕಿನ ಪರವಾನಗಿ ರದ್ದತಿ ಎಂದು ಅರ್ಥೈಸಬಾರದು ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.ಬ್ಯಾಂಕ್ ತನ್ನ ಆರ್ಥಿಕ ಸ್ಥಿತಿ ಸುಧಾರಿಸುವವರೆಗೆ ಈ ನಿರ್ಬಂಧಗಳೊಂದಿಗೆ ಬ್ಯಾಂಕಿಂಗ್ ವ್ಯವಹಾರವನ್ನು ಮುಂದುವರಿಸುತ್ತದೆ ಎಂದು ಹೇಳಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.