Reserve Bank of India: ಸ್ಲಿಪ್ ಭರ್ತಿ ಮಾಡದೆ ಮತ್ತು ಗುರುತಿನ ಪುರಾವೆ ಇಲ್ಲದೆ 2,000 ರೂಪಾಯಿ ನೋಟುಗಳನ್ನು ಬದಲಾಯಿಸುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸತೀಶ್ ಕುಮಾರ್ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಅವರಿದ್ದ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸ್ಲಿಪ್ ಇಲ್ಲದೆ ಮತ್ತು ಗುರುತಿನ ಪುರಾವೆ ಇಲ್ಲದೆ 2,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಅಧಿಸೂಚನೆಯನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ-Economy: ಯಾವ ದಿಕ್ಕಿನತ್ತ ಸಾಗುತ್ತಿದೆ ದೇಶದ ಆರ್ಥಿಕತೆ? ಅಪಾಯ ಎಲ್ಲಿದೆ? ವಿತ್ತ ಸಚಿವಾಲಯದ ವರದಿ ಹೇಳಿದ್ದೇನು?


ಅಧಿಸೂಚನೆಯನ್ನು ಸಮರ್ಥಿಸಿಕೊಂಡ ಆರ್‌ಬಿಐ
ಈ ಕುರಿತು ವಾದ ಮಂಡಿಸಿದ ಅರ್ಜಿದಾರ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು, ಈ ನೋಟುಗಳಲ್ಲಿ ಹೆಚ್ಚಿನ ಸಂಖ್ಯೆಯ ನೋಟುಗಳು ಯಾವುದೇ ವ್ಯಕ್ತಿಯ ತಿಜೋರಿಗಳಲ್ಲಿ ತಲುಪಿವೆ ಅಥವಾ ಪ್ರತ್ಯೇಕತಾವಾದಿಗಳು, ಭಯೋತ್ಪಾದಕರು, ಮಾವೋವಾದಿಗಳು, ಮಾದಕವಸ್ತು ಕಳ್ಳಸಾಗಣೆದಾರರು, ಗಣಿಗಾರಿಕೆ ಮಾಫಿಯಾ ಮತ್ತು ಭ್ರಷ್ಟರ ಬಳಿ ಇವೆ ಎಂದು ವಾದಿಸಿದ್ದಾರೆ. ಸದರಿ ಅಧಿಸೂಚನೆಯು ಅನಿಯಂತ್ರಿತ, ತರ್ಕಬದ್ಧವಲ್ಲದ ಮತ್ತು ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಇದು ನೋಟು ಅಮಾನ್ಯೀಕರಣವಲ್ಲ, ಶಾಸನಬದ್ಧ ಕ್ರಮ ಎಂದು ಆರ್‌ಬಿಐ ತನ್ನ ಅಧಿಸೂಚನೆಯನ್ನು ಹೈಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದೆ.


ಇದನ್ನೂ ಓದಿ-Dhoom Machaale...! ಪಲ್ಸರ್-ಅಪಾಚೆಗೆ ಭಾರಿ ಪೈಪೋಟಿ ನೀಡಲು ಬಿಡುಗಡೆಯಾಗಿದೆ ಯಮಾಹ ಕಂಪನಿಯ ಈ 150 ಸಿಸಿ ಬೈಕ್


2000 ನೋಟುಗಳು ಆಯಾ ಬ್ಯಾಂಕ್ ಖಾತೆಗಳಿಗೆ ಮಾತ್ರ ಜಮೆಯಾಗುವಂತೆ ರಿಸರ್ವ್ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಗೆ ಆದೇಶಿಸಬೇಕು ಎಂದು ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಬೇಡಿಕೆ ಇತ್ತು. ಇದರೊಂದಿಗೆ ಕಪ್ಪುಹಣ ಮತ್ತು ಅಕ್ರಮ ಆಸ್ತಿ ಹೊಂದಿರುವವರನ್ನು ಗುರುತಿಸಬಹುದು. ಕಳೆದ ಮೇ 23ರಿಂದ ಬ್ಯಾಂಕ್‌ಗಳಲ್ಲಿ 2000 ರೂಪಾಯಿ ನೋಟು ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ. ಇದಕ್ಕೂ ಮುನ್ನ ಮೇ 19ರಂದು ರಿಸರ್ವ್ ಬ್ಯಾಂಕ್ 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಘೋಷಿಸಿತ್ತು. ಸೆಪ್ಟೆಂಬರ್ 30 ರವರೆಗೆ ನಿಮಗೆ ಬ್ಯಾಂಕ್ ಗಳಿಂದ ಈ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. 


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.