ನವದೆಹಲಿ : ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ  ಎಂಆರ್ ಪಿ ದರದಲ್ಲಿ ವಿತರಿಸಲು  ಆಹಾರ ಧಾನ್ಯಗಳನ್ನು ವಿತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ.


COMMERCIAL BREAK
SCROLL TO CONTINUE READING

ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳನ್ನು  ವಾಹನಗಳ ಮೂಲಕ ವಿತರಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಡಿಮೆ ದರದಲ್ಲಿ ವಿತರಣೆಯಾಗುವ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ನವದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.


ಇದನ್ನೂ ಓದಿ : ಬಂಗಾರದ ಬೆಲೆ ಇಳಿಸುವ ನಿಟ್ಟಿನಲ್ಲಿ ಬಹು ದೊಡ್ಡ ನಿರ್ಧಾರ !ಮುಗಿಲೆತ್ತರದಿಂದ ಪಾತಾಳಕ್ಕಿಳಿಯುವುದು ಚಿನ್ನದ ದರ


ಇಂತಿದೆ ಎಂಆರ್ ಪಿ ಬೆಲೆ: 
ದೆಹಲಿ/ಎನ್‌ಸಿಆರ್ ನಿವಾಸಿಗಳಿಗಾಗಿ ಭಾರತ್ ಕಡಲೆ ಬೇಳೆ ಕೆ.ಜಿಗೆ 70 ರೂ. ಭಾರತ್ ಹೆಸರುಬೇಳೆ ಕೆ.ಜಿಗೆ 107 ರೂ. ಭಾರತ್ ತೊಗರಿಬೇಳೆ ಕೆ.ಜಿಗೆ 89 ರೂ. ಬೆಲೆಯಲ್ಲಿ ಮಾರಟ ಮಾಡಲಾಗುತ್ತಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಇದೇ ವೇಳೆ ತಿಳಿಸಿದರು.


ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಕೈಗೊಂಡ ಈ ಯೋಜನೆ ನಾಗರಿಕರ ಮೇಲೆ ಹೆಚ್ಚುತ್ತಿರುವ ಆಹಾರ ಧಾನ್ಯ, ಬೇಳೆ-ಕಾಳು ಬೆಲೆ ಹೊರೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ ಎಂದು ಹೇಳಿದರು.


ಇದನ್ನೂ ಓದಿ : Arecanut Price Today: ಶಿವಮೊಗ್ಗ & ಚಿತ್ರದುರ್ಗದ ಅಡಿಕೆ ಧಾರಣೆ ಇನ್ನಷ್ಟು ಏರಿಕೆ


ಈ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸಚಿವರಾದ ಬಿ.ಎಲ್. ವರ್ಮಾ ಹಾಗೂ ಶ್ರೀಮತಿ ನಿಮುಬೇನ್ ಬಂಭಾನಿಯಾ ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.