Ration Card Updates: ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದಿರುವ ಪಡಿತರ ಚೀಟಿದಾರರು ಇದೇ ಡಿ.31ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ e-KYC ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.


COMMERCIAL BREAK
SCROLL TO CONTINUE READING

e-KYC ಮಾಡಿಸಿಕೊಳ್ಳಲು ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ (e-KYC) ಮಾಡಿಸದಿರುವ ಫಲಾನುಭವಿಗಳಿಗೆ ಡಿಸೆಂಬರ್ ತಿಂಗಳಿನಲ್ಲಿ ಪಡಿತರ ನೀಡವುದನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ e-KYC ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣಿ (e-KYC) ಮಾಡಿಸಿಕೊಳ್ಳಬೇಕು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 


ಇದನ್ನೂ ಓದಿ: ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ!ಇನ್ನು ಫೈನಲ್ ಚಾರ್ಟ್ ರೆಡಿಯಾದ ಮೇಲೂ ಸುಲಭವಾಗಲಿದೆ ಕನ್ಫರ್ಮ್ ಟಿಕೆಟ್ ಪಡೆಯುವ ಪ್ರಕ್ರಿಯೆ


ಪಡಿತರ ಚೀಟಿ e-KYC ಮಾಡಿಸಲು ಬೇಕಾಗುವ ದಾಖಲೆಗಳು


* ನಿಮ್ಮ ಪಡಿತರ ಚೀಟಿಯ ಅಸಲಿ ಪ್ರತಿ 
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋ ಕಾಪಿ 
* ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ 
* ಬ್ಯಾಂಕ್ ಪಾಸ್‌ಬುಕ್‌ನ ಫೋಟೋ ಕಾಪಿ
* ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ 


ಪಡಿತರ ಚೀಟಿ ಮತ್ತು ಆಧಾ‌ರ್ ಆನ್‌ಲೈನ್‌ನಲ್ಲಿ ಲಿಂಕ್‌ ಮಾಡುವುದು ಹೇಗೆ?


* ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಪೋರ್ಟಲ್‌ಗೆ ಭೇಟಿ ನೀಡಿ
* ಸಕ್ರಿಯ ಕಾರ್ಡೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿರಿ 
* ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ. 
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. 
* Proceed / Submit ಬಟನ್ ಆಯ್ಕೆ ಮಾಡಿ. 
* ಈಗ ನಿಮ್ಮ ಮೊಬೈಲ್ ಫೋನ್ OTPಯನ್ನು ಸ್ವೀಕರಿಸುತ್ತೀರಿ.
* ಆಧಾ‌ರ್ ಪಡಿತರ ಲಿಂಕ್ ಪುಟದಲ್ಲಿ OTPಯನ್ನು ನಮೂದಿಸಿ. ಈಗ ನಿಮ್ಮ requestಅನ್ನು submit ಮಾಡಿರಿ. 


ಇದನ್ನೂ ಓದಿ: Income Tax ಸ್ಲ್ಯಾಬ್‌ನಲ್ಲಿ ಬರದವರೂ ಐ‌ಟಿ‌ಆರ್ ಫೈಲ್ ಮಾಡಬಹುದು, ಸಿಗುತ್ತೆ ಈ 10 ಪ್ರಯೋಜನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.