Gold in Bank Locker: ನಿಸ್ಸಂಶಯವಾಗಿ ಚಿನ್ನ ಸಹ ಆಸ್ತಿಯೇ. ಬಡವರಿಗೆ ಕಷ್ಟ ಕಾಲದಲ್ಲಿ ಕೈ ಹಿಡಿಯುವ ಆಪತ್ಪಾಂದವನಂತೆ ಕಾಪಾಡುವ ಚಿನ್ನವನ್ನು ಸುರಕ್ಷತೆಯ ದೃಷ್ಟಿಯಿಂದ ಬ್ಯಾಂಕಿನಲ್ಲಿ ಇಡಲಾಗುತ್ತದೆ. ಆದರೆ, ಚಿನ್ನವನ್ನು ಬ್ಯಾಂಕ್ ಲಾಕರ್ನಲ್ಲಿ ಇಡುವುದು ನಿಜಕ್ಕೂ ಸುರಕ್ಷಿತವೇ....?

Gold in Bank Locker Rules: ಚಿನ್ನಕ್ಕೆ ಸದಾ ಹೆಚ್ಚಿನ ಬೇಡಿಕೆ ಇದ್ದೇ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ದಾಖಲೆ ಮುಟ್ಟುತ್ತಿದ್ದರೂ ಸಹ ಚಿನ್ನ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಜೊತೆ ಚಿನ್ನವನ್ನು ಸುರಕ್ಷಿತವಾಗಿರಿಸುವ ಬಗ್ಗೆಯೂ ಜನ ಚಿಂತಿತರಾಗಿರುತ್ತಾರೆ. ಮನೆಯಲ್ಲಿದ್ದರೆ ಚಿನ್ನ ಕಳುವಾಗಬಹುದು ಎಂಬ ಭಯದಿಂದಾಗಿ ಬಹುತೇಕ ಮಂದಿ ಚಿನ್ನ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್ಗಳಲ್ಲಿ ಇಡುತ್ತಾರೆ. ಆದರೆ, ಬ್ಯಾಂಕ್ ಲಾಕರ್ಗಳಲ್ಲಿ ಚಿನ್ನ ಇಡುವುದು ಸೇಫಾ.... ಈ ಬಗ್ಗೆ ಆರ್ಬಿಐ ಮಾರ್ಗಸೂಚಿಗಳು ಏನು ಹೇಳುತ್ತೇ ಗೊತ್ತಾ...
ಚಿನ್ನವನ್ನು ಸುರಕ್ಷಿತವಾಗಿಡಲು ಜನ ಬ್ಯಾಂಕ್ ಲಾಕರ್ಗಳ ಮೊರೆ ಹೋಗುತ್ತಾರೆ. ಬ್ಯಾಂಕ್ ಲಾಕರ್ನಲ್ಲಿದ್ದರೆ ಚಿನ್ನ ಸೇಫ್ ಎಂದು ಭಾವಿಸುತ್ತಾರೆ. ಆದರೆ, ಚಿನ್ನವನ್ನು ಲಾಕರ್ನಲ್ಲಿ ಇಡುವ ಮೊದಲು ಇದಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ತಿಳಿಯುವುದು ಅವಶ್ಯಕವಾಗಿದೆ.
ಗಮನಾರ್ಹವಾಗಿ, ಈ ಹಿಂದೆ ಬ್ಯಾಂಕ್ ಲಾಕರ್ಗಳಲ್ಲಿ ಇರಿಸಿದ್ದ ವಸ್ತುಗಳು ಅಥವಾ ಇತರ ವಸ್ತುಗಲಿಗೆ ಹಾನಿ ಸಂಭವಿಸಿದಲ್ಲಿ ಬ್ಯಾಂಕುಗಳು ಹೊಣೆಗಾರಿಕೆ ಹೊಂದಿರುವುದಿಲ್ಲ ಎಂಬ ನಿಯಮವಿತ್ತು. ಇತ್ತೀಚಿನ ವರ್ಷಗಳಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ- ಆರ್ಬಿಐ ಈ ನಿಯಮವನ್ನು ಬದಲಾಯಿಸಿದೆ.
ಬ್ಯಾಂಕ್ ಲಾಕರ್ಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬ್ಯಾಂಕುಗಳು ಅಗತ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಗ್ರಾಹಕರ ಲಾಕರ್ಗಳಲ್ಲಿ ಇಟ್ಟಿರುವ ವಸ್ತುಗಳಿಗೆ ನಿರ್ಲಕ್ಷ್ಯದಿಂದ ಉಂಟಾಗುವ ಯಾವುದೇ ನಷ್ಟಕ್ಕೆ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಮಾರ್ಗಸೂಚಿಯನ್ನು ಹೊರಡಿಸಿದೆ.
ಆರ್ಬಿಐ ನಿಯಮಗಳ ಪ್ರಕಾರ, ಬ್ಯಾಂಕ್ ಸಿಬ್ಬಂದಿ ನಿರ್ಲಕ್ಷದಿಂದ ಗ್ರಾಹಕರಿಗೆ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿರುವ ಬೆಲೆಬಾಳುವ ವಸ್ತುಗಳು ನಷ್ಟವಾದರೆ ಬ್ಯಾಂಕ್ ಲಾಕರ್ನ ವಾರ್ಷಿಕ ಬಾಡಿಗೆಯ 100 ಪಟ್ಟು ಪರಿಹಾರವನ್ನು ಗ್ರಾಹಕರಿಗೆ ಪಾವತಿಸಬೇಕು ಎಂದು ಆರ್ಬಿಐ ತಿಳಿಸಿದೆ.
ಇಂತಹ ಸಂದರ್ಭದಲ್ಲಿ ಸಿಗಲ್ಲ ಯಾವುದೇ ಪರಿಹಾರ:
ಆದಾಗ್ಯೂ, ಭೂಕಂಪ, ಪ್ರವಾಹದಂತಹ ನೈಸರ್ಗಿಕ ವಿಕೋಪಗಳಿಂದಾಗಿ ಗ್ರಾಹಕರ ಚಿನ್ನದ ನಷ್ಟಕ್ಕೆ ಬ್ಯಾಂಕ್ ಜವಾಬ್ದಾರರಾಗಿರುವುದಿಲ್ಲ ಎಂದು ಆರ್ಬಿಐ ಸ್ಪಷ್ಟಪಡಿಸಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.