ನವದೆಹಲಿ: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಮಾನದಂಡಗಳನ್ನು ಪಾಲಿಸದ ಪ್ರೆಶರ್ ಕುಕ್ಕರ್‌ಗಳನ್ನು ಮಾರಾಟ ಮಾಡಿದ್ದಕ್ಕಾಗಿ ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ ಮಾಲ್ ಸೇರಿದಂತೆ 5 ಇ-ಕಾಮರ್ಸ್(E-Commerce) ಕಂಪನಿಗಳು ಮತ್ತು ಹಲವಾರು ಮಾರಾಟಗಾರರಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ಕಳುಹಿಸಿದೆ.


COMMERCIAL BREAK
SCROLL TO CONTINUE READING

7 ದಿನಗಳಲ್ಲಿ ಉತ್ತರಿಸುವಂತೆ ನೋಟಿಸ್ ಜಾರಿ


ನವೆಂಬರ್ 18ರಂದು CCPA ಈ ಇ-ಕಾಮರ್ಸ್ ಕಂಪನಿಗಳು ಮತ್ತು ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರೆಶರ್ ಕುಕ್ಕರ್‌(Pressure Cookers)ಗಳನ್ನು ಮಾರಾಟ ಮಾಡುವ ಮಾರಾಟಗಾರರಿಗೆ ನೋಟಿಸ್‌ ಜಾರಿ ಮಾಡಿದೆ. ಬಿಐಎಸ್ ಮಾನದಂಡ(BIS Norms)ಗಳನ್ನು ಪಾಲಿಸದ ಕುಕ್ಕರ್‌ಗಳನ್ನು ಮಾರಾಟ ಮಾಡಿದ ಆರೋಪ ಇವರ ಮೇಲಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಈ ವಿಚಾರದ ಬಗ್ಗೆ ಮಾತನಾಡಿದ್ದು, ‘ಸಿಸಿಪಿಎ ಈ ವಿಷಯದ ಬಗ್ಗೆ ಸ್ವಯಂಪ್ರೇರಿತವಾಗಿ ಗಮನಹರಿಸಿದ್ದು, ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿದೆ. 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: Digital Life Certificate: ನವೆಂಬರ್ 30 ರೊಳಗೆ ಈ ಮಹತ್ವದ ಕೆಲಸವನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ದೊಡ್ಡ ನಷ್ಟವಾಗುತ್ತದೆ


75ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯ ಸಂದರ್ಭದಲ್ಲಿ ದೋಷಯುಕ್ತ, ಗುಣಮಟ್ಟವಿಲ್ಲದ ನಕಲಿ ಉತ್ಪನ್ನ(Counterfeit Goods)ಗಳ ವಿರುದ್ಧ CCPA ರಾಷ್ಟ್ರವ್ಯಾಪಿ ಅಭಿಯಾನವನ್ನು ನಡೆಸಿತ್ತು. ಇ-ಕಾಮರ್ಸ್ ಕಂಪನಿಗಳು ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಹೇಗೆ ಮಾರಾಟ ಮಾಡುತ್ತಾರೆ? ಇದು ಜನಿರಗೆ ಮೋಸ ಮಾಡಿದಂತೆ ಅಲ್ಲವೇ ಎಂದು ಅಧಿಕಾರಿಯೊಬ್ಬರು ಪ್ರಶ್ನಿಸಿದ್ದಾರೆ. ಗುಣಮಟ್ಟ ಮಾನದಂಡಗಳನ್ನು ಪಾಲಿಸಿದ ನಂತರವೇ ಇ-ಕಾಮರ್ಸ್ ಕಂಪನಿಗಳು ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾರಾಟಗಾರರಿಗೆ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಬೇಕು. ತಮ್ಮ ವ್ಯವಹಾರವನ್ನು ಜವಾಬ್ದಾರಿಯುತವಾಗಿ ನಡೆಸಬೇಕು. ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ನೀಡಿ ಜನರಿಗೆ ಮೋಸ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.  


ನಕಲಿ ಉತ್ಪನ್ನಗಳ ವಿರುದ್ಧ ಅಭಿಯಾನ


ಈ ಕುರಿತು ಈಗಾಗಲೇ ಸಿಸಿಪಿಎಯಿಂದ ದೇಶದ ಎಲ್ಲ ಜಿಲ್ಲೆಗಳಿಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಯಾವುದೇ ರೀತಿಯ ಅಕ್ರಮ ಉತ್ಪನ್ನಗಳ ಮಾರಾಟ(Violate Quality) ಮತ್ತು ಗ್ರಾಹಕರ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳನ್ನು ಕೂಲಂಕುಷವಾಗಿ ತನಿಖೆ ಮಾಡಬೇಕು ಎಂದು ಹೇಳಲಾಗಿದೆ. ಇದರೊಂದಿಗೆ ಗ್ರಾಹಕರಿಗೆ ಅರಿವು ಮೂಡಿಸಲು ಮತ್ತು ISI ಗುಣಮಟ್ಟದ ಉತ್ಪನ್ನಗಳನ್ನು ಖರೀದಿಸಲು ಪ್ರೇರೇಪಿಸಲು CCPA ಹಲವು ಅಭಿಯಾನಗಳನ್ನು ಹಮ್ಮಿಕೊಂಡಿದೆ.  


ಇದನ್ನೂ ಓದಿ: SBI Alert: ಕಸ್ಟಮರ್ ಕೇರ್ ಅಧಿಕಾರಿಗಳ ಹೆಸರಿನಲ್ಲಿ ಕ್ಷಣದಲ್ಲಿ ಖಾಲಿಯಾಗುತ್ತೆ ಖಾತೆ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.