Petrol-Diesel Price Today : ಭಾರತದಲ್ಲಿ ಬಹಳ ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಕಂಡು ಬಂದಿಲ್ಲ. ಆದರೆ ಕಚ್ಚಾ ತೈಲ ಬೆಲೆಯಲ್ಲಿ ಅನೇಕ ಬಾರಿ ಏರಿಳಿತ ಕಂಡು ಬಂದಿದೆ. ಆದರೂ ಕೂಡಾ ದೇಶೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿರಲಿಲ್ಲ. ಇನ್ನು ಮುಂದೆ ಕೂಡಾ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.  ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆ ಇರುವುದರಿಂದ  ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಬಹಳ ಕಡಿಮೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್‌ನ ವರದಿಯಲ್ಲಿ  ಈ ಬಗ್ಗೆ ಉಲ್ಲೇಖಿಸಲಾಗಿದೆ. 


COMMERCIAL BREAK
SCROLL TO CONTINUE READING

18 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಸತತ 18 ತಿಂಗಳುಗಳವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸ್ಥಿರವಾಗಿರಿಸಿದೆ. ಈ ಕಂಪನಿಗಳು ಮಾರುಕಟ್ಟೆಯ ಸುಮಾರು 90 ಪ್ರತಿಶತವನ್ನು ನಿಯಂತ್ರಿಸುತ್ತವೆ.


ಇದನ್ನೂ ಓದಿ : ಪಿಎಂ ಕಿಸಾನ್ 15ನೇ ಕಂತಿನ ಹಣ ಖಾತೆಗೆ ವರ್ಗಾಯಿಸಲು ಫಿಕ್ಸ್ ಆಯ್ತು ಮುಹೂರ್ತ, ಈ ದಿನ ಬರಲಿದೆ ಹಣ!


ಕಳೆದ ವರ್ಷ ಭಾರೀ ನಷ್ಟ ಅನುಭವಿಸಿದ ಸರ್ಕಾರಿ ಕಂಪನಿಗಳು : 
ಕಳೆದ ವರ್ಷ ಕಚ್ಚಾ ತೈಲ ಬೆಲೆಯಲ್ಲಿ ಹೆಚ್ಚಳದ ಹೊರತಾಗಿಯೂ ಪೆಟ್ರೋಲ್ ಡಿಸೇಲ್ ಬೆಲೆಯನ್ನು ಏರಿಸಿರಲಿಲ್ಲ. ಇದರಿಂದಾಗಿ ಈ ಕಂಪನಿಗಳು 2022-23 ರ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಭಾರೀ ನಷ್ಟವನ್ನು ಅನುಭವಿಸಿದ್ದವು. 


ಮೂಡೀಸ್ ಬಿಡುಗಡೆ ಮಾಡಿದ ವರದಿ  : 
ಮೂಡೀಸ್ ವರದಿಯ ಪ್ರಕಾರ, ಹೆಚ್ಚಿನ ಕಚ್ಚಾ ತೈಲ ಬೆಲೆಗಳು ಭಾರತದ ಮೂರು ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಾದ IOC, BPCL ಮತ್ತು HPCL ಲಾಭವನ್ನು ದುರ್ಬಲಗೊಳಿಸುತ್ತವೆ ಎಂದು ಹೇಳಿದೆ. 
2024ರ ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಮಾರಾಟ ಬೆಲೆಯನ್ನು ಹೆಚ್ಚಿಸಲು ಮೂರು ಕಂಪನಿಗಳಿಗೆ ಸೀಮಿತ ಅವಕಾಶಗಳಿವೆ ಎಂದು ವರದಿ ಹೇಳಿದೆ. ಆದರೂ ದುರ್ಬಲ ಜಾಗತಿಕ ಬೆಳವಣಿಗೆಯಿಂದಾಗಿ, ದೀರ್ಘ ಕಾಲದವರೆಗೆ ತೈಲ ಬೆಲೆ ಏರಿಕೆ ಮಾಡಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ.  


ಇದನ್ನೂ ಓದಿ : ಬ್ಯಾಂಕ್ ಗ್ರಾಹಕರೆ ಎಚ್ಚರ! ಅಕ್ಟೋಬರ್ 31 ರಿಂದ ಈ ಸರ್ಕಾರಿ ಬ್ಯಾಂಕ್ ಡೆಬಿಟ್ ಕಾರ್ಡ್ ಗಳು ನಿಸ್ಪ್ರಯೋಜಕವಾಗಲಿವೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ