ಇ.ವಿ ಬ್ಯಾಟರಿ ಉತ್ಪಾದನೆ: ಐಬಿಸಿ ಜತೆ ಒಡಂಬಡಿಕೆ, 8 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು
Karnataka News : ಈ ಕಂಪನಿಯು ಇಂತಹ ಬ್ಯಾಟರಿಗಳನ್ನು ದಕ್ಷಿಣ ಕೊರಿಯಾದಲ್ಲಿ ಪರೀಕ್ಷಾರ್ಥವಾಗಿ ತಯಾರಿಸುವ ಘಟಕವನ್ನು ಹೊಂದಿದ್ದು, ಅದು ಕೂಡ ಸದ್ಯದಲ್ಲೇ ಕಾರ್‍ಯಾರಂಭ ಮಾಡಲಿದೆ.
ಬೆಂಗಳೂರು: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿ (ಐಬಿಸಿ) ಮತ್ತು ರಾಜ್ಯ ಸರಕಾರ 8,000 ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಮಂಗಳವಾರ ಇಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಸಮ್ಮುಖದಲ್ಲಿ ಅಂಕಿತ ಹಾಕಿದವು. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಸರಕಾರದಲ್ಲಿ ಪಾಟೀಲ ಅವರು ಈ ಖಾತೆಯ ಹೊಣೆ ವಹಿಸಿಕೊಂಡ ಮೇಲೆ ಬಂಡವಾಳ ಆಕರ್ಷಣೆಯಲ್ಲಿ ಇದೊಂದು ಮೈಲಿಗಲ್ಲಾಗಿದೆ. ಈ ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಐಬಿಸಿ ಇಂಡಿಯಾ ಪರವಾಗಿ ಅದರ ಭಾರತದ ವ್ಯವಹಾರಗಳ ಮುಖ್ಯಸ್ಥ ವೆಂಕಟೇಶ ವಲ್ಲೂರಿ ಸಹಿ ಹಾಕಿದರು.
ಇದನ್ನೂ ಓದಿ: ಕೇವಲ 1.65 ಲಕ್ಷ ರೂ.ಗಳಿಂದ ಆರಂಭಿಸಿ ಈ ಜಬರ್ದಸ್ತ್ ಬಿಸ್ನೆಸ್, ತಿಂಗಳಿಗೆ 60 ಸಾವಿರ ಆದಾಯ ಕೊಡುತ್ತೇ!
ಮರುಬಳಕೆಗೆ ಬರುವಂಥ ಲಿಥಿಯಾನ್ ಬ್ಯಾಟರಿಗಳ ಉತ್ಪಾದನೆಯನ್ನು ಈ ಕಂಪನಿಯು ಇನ್ನು ಒಂದು ವರ್ಷದಲ್ಲಿ ರಾಜ್ಯದಲ್ಲಿ ಪ್ರಾರಂಭಿಸಲಿದೆ. ಈ ಉದ್ದೇಶಕ್ಕಾಗಿ ಕಂಪನಿಯ ಕೋರಿಕೆಯಂತೆ ಬೆಂಗಳೂರು ಗ್ರಾಮಾಂತರ ವಲಯದಲ್ಲಿ 100 ಎಕರೆ ಜಮೀನನ್ನು ಕೊಡಲಿದೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಈ ಕಂಪನಿಯೊಂದಿಗೆ ಮೂರು ಸುತ್ತು ಮಾತುಕತೆ ನಡೆಸಿ, ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಮನದಟ್ಟು ಮಾಡಿಕೊಡಲಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.
ಈ ಕಂಪನಿಯು ಇಂತಹ ಬ್ಯಾಟರಿಗಳನ್ನು ದಕ್ಷಿಣ ಕೊರಿಯಾದಲ್ಲಿ ಪರೀಕ್ಷಾರ್ಥವಾಗಿ ತಯಾರಿಸುವ ಘಟಕವನ್ನು ಹೊಂದಿದ್ದು, ಅದು ಕೂಡ ಸದ್ಯದಲ್ಲೇ ಕಾರ್‍ಯಾರಂಭ ಮಾಡಲಿದೆ. ಅತ್ಯುತ್ತಮ ಬ್ಯಾಟರಿಗಳ ಉತ್ಪಾದನೆಗೆ ಡ್ರೈರೂಮ್ ಮತ್ತು ಕ್ಲೀನ್ ರೂಮ್‌ಗಳನ್ನು ಕಂಪನಿ ಸ್ಥಾಪಿಸಲಿದೆ. ಇದು ರಾಜ್ಯದಲ್ಲಿ ಇಂತಹ ಎರಡನೇ ಘಟಕವಾಗಿದ್ದು, ಈ ಕ್ಷೇತ್ರದಲ್ಲಿ ರಾಜ್ಯವು ಇಡೀ ದೇಶಕ್ಕೇ ಅಗ್ರಸ್ಥಾನದಲ್ಲಿದೆ ಎಂದು ಅವರು ವಿವರಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಂಸ್ಥಾಪಕ ಮತ್ತು ಸಿಇಒ ಡಾ.ಪ್ರಿಯದರ್ಶಿ ಪಾಂಡಾ, ಕಂಪನಿಯ ಸಿಒಒ ಶಶಿ ಕುಪ್ಪಣ್ಣಗಾರಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಕಾಲೇಜು ಮುಗಿಯುತ್ತಲೇ ಈ ಕೆಲಸ ಮಾಡಿ, ನೌಕರಿಯ ಅವಶ್ಯಕತೆ ಬೀಳುವುದಿಲ್ಲ, ಪ್ರತಿ ತಿಂಗಳು ಕೈತುಂಬಾ ಸಂಪಾದನೆ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.