Ed Raid over Excise Policy: ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತಂಡ ದೇಶಾದ್ಯಂತ ಸುಮಾರು 6 ರಾಜ್ಯಗಳ 40 ಠಿಕಾಣಿಗಳ ಮೇಲೆ ದಾಳಿ ನಡೆಸಿದೆ. ದೆಹಲಿ-ಎನ್ಸಿಆರ್, ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 


COMMERCIAL BREAK
SCROLL TO CONTINUE READING

ಇದಕ್ಕೂ ಮುನ್ನ, ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೆಪ್ಟೆಂಬರ್ 6 ರಂದು ಹಲವು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ 30 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿತ್ತು.


ಇದನ್ನೂ ಓದಿ-2024 ರ ಲೋಕಸಭೆ ಚುನಾವಣೆಗೆ ಮುನ್ನ ಸಿಎಂ ನಿತೀಶ್ ಕುಮಾರ್ ಭರ್ಜರಿ ಘೋಷಣೆ

ಹೈದರಾಬಾದ್ ಒಂದರಲ್ಲೇ 25 ಕಡೆ ರೇಡ್ ನಡೆಸಲಾಗಿದೆ. ಈ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನೂ ಕೂಡ ಇಡಿ ಇಂದು ವಿಚಾರಣೆ ನಡೆಸಲಿದೆ. ಗುರುವಾರವೇ ಸಿಬಿಐ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಸತ್ಯೇಂದ್ರ ಜೈನ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದ್ದರು. ಜೈನ್ ಅವರನ್ನು ತಿಹಾರ್ ಜೈಲಿನಲ್ಲಿಯೇ ವಿಚಾರಣೆಗೆ ಒಳಪಡಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಆದರೆ ಅದಕ್ಕೂ ಮುನ್ನವೇ ಇಡಿ ಇಂದು ಈ ಮಹತ್ವದ ಕಾರ್ಯಾಚರಣೆ ನಡೆಸಿದೆ.


ಇದನ್ನೂ ಓದಿ-ಭಾರೀ ಮಳೆ ಅವಾಂತರ: ಲಕ್ನೋದಲ್ಲಿ ಗೋಡೆ ಕುಸಿದು ಮೂರು ಮಕ್ಕಳು ಸೇರಿದಂತೆ 9 ಮೃತ, ಉನ್ನಾವೊದಲ್ಲಿ ಮೂವರ ಮರಣ

ಮತ್ತೊಂದೆಡೆ ಸಿಬಿಐ ಕೂಡ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋದಿಯಾ ಅವರ ಮನೆ ಮತ್ತು ಬ್ಯಾಂಕ್ ಲಾಕರ್ ಕುರಿತು ಕೂಡ ಸಿಬಿಐ ತನಿಖೆ ನಡೆಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಮುಖಾಮುಖಿಯಾಗಿವೆ. ಒಂದೆಡೆ ಈ ವಿವಾದಿತ ಅಬಕಾರಿ ನೀತಿಯ ಅಡಿಯಲ್ಲಿ ವರ್ತಕರಿಗೆ ಕಮಿಷನ್ ನೀಡುವ ಹಗರಣ ನಡೆದಿದೆ ಎಂದು ಕೇಸರಿ ಪಡೆ ವಾದಿಸುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ಬಲವಂತವಾಗಿ ವಿಷಯವನ್ನು ಕೆದಕುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸುತ್ತಿದೆ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.