Karnataka Budget 2025 : ಕರ್ನಾಟಕ ಪಬ್ಲಿಕ್ ಶಾಲೆಗಳವಿಸ್ತರಣೆ ! ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣು ಆರು ದಿನವೂ ಲಭ್ಯ !

Karnataka Budget 2025 :ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. 

Written by - Ranjitha R K | Last Updated : Mar 7, 2025, 11:53 AM IST
  • ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ನಿರ್ಧಾರ
  • 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭ
  • ವಾರದ ಆರು ದಿನವೂ ಬಾಳೆಹಣ್ಣು ಮೊಟ್ಟೆ
Karnataka Budget 2025 : ಕರ್ನಾಟಕ ಪಬ್ಲಿಕ್ ಶಾಲೆಗಳವಿಸ್ತರಣೆ ! ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣು ಆರು ದಿನವೂ ಲಭ್ಯ  !

Karnataka Budget 2025 : ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು  ನಿರ್ಧರಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. 

Add Zee News as a Preferred Source

ವಾರದ ಆರು ದಿನವೂ ಬಾಳೆಹಣ್ಣು ಮೊಟ್ಟೆ :  
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ  ಮೊಟ್ಟೆ/ಬಾಳೆಹಣ್ಣನ್ನು ವಿತರಿಸಲಾಗುತ್ತಿದೆ. ಆದ್ರೆ ಇನ್ನು ಮುಂದೆ ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ಈ ಸೌಲಭ್ಯವನ್ನು ವಾರದ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.

ಇದನ್ನೂ ಓದಿ : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಗೌರವಧನ ಹೆಚ್ಚಳ: ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ

ರಾಗಿ ಹೆಲ್ತ್ ಮಿಕ್ಸ್ ಪುಡಿ ಐದು ದಿನಗಳಿಗೆ ವಿಸ್ತರಣೆ : 
ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಹಾಲಿನೊಂದಿಗೆ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ಓದಿ : ಎಸ್​ಸಿ ಎಸ್​ಟಿ ಸಮುದಾಯಕ್ಕೆ ಬಜೆಟ್‌ನಲ್ಲಿ ​ಭರ್ಜರಿ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News