Budget: ಗಡಿಜಿಲ್ಲೆ ಚಾಮರಾಜನಗರದ ಮೇಲೆ ವಿಶೇಷ ಅಕ್ಕರೆ, ಆಸ್ಥೆ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಚಾಮರಾಜನಗರಕ್ಕೆ ಭರಪೂರ ಕೊಡುಗೆ ಕೊಡುತ್ತಾರೆ ಎಂದು ಜನರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ, ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗಲಿದೆ ಎಂಬ ಮೌಢ್ಯ ಅಳಿಸಿ ಹಾಕಿ ಸಾವಿರಾರು ಕೋಟಿ ರೂ. ಅನುದಾನದ ಹೊಳೆ ಹರಿಸಿದ್ದರು. ಈಗ ಎರಡನೇ ಬಾರಿ ಸಿಎಂ ಆಗಿ ಫೆ.16 ರಂದು ಪೂರ್ಣಪ್ರಮಾಣದ ಬಜೆಟ್ ಮಂಡಿಸುತ್ತಿರುವ ಹಿನ್ನೆಲೆ ಗ್ಯಾರಂಟಿಗಳ ನಡುವೆ ಚಾಮರಾಜನಗರಕ್ಕೆ ಸಾಕಷ್ಟು ಕೊಡುಗೆ ಕೊಡಲಿದ್ದಾರೆ ಎಂಬ ನಿರೀಕ್ಷೆ ಜನರದ್ದಾಗಿದೆ.


ಎರಡನೇ ಹಂತದ ಕುಡಿಯುವ ನೀರು, ಮೇಕೆದಾಟು ಯೋಜನೆ: 
ಎರಡನೇ ಹಂತದ ಕುಡಿಯುವ ನೀರಿನ ಯೋಜನೆ ಆಗಬೇಕೆಂಬ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದು ಈ ಬಾರಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡುತ್ತಾರೆ ಎಂದು ಜನರು ಭರವಸೆ ಇಟ್ಟುಕೊಂಡಿದ್ದಾರೆ. ಈ ಕುರಿತು, ಶಾಸಕ ಸಿ‌.ಪುಟ್ಟರಂಗಶೆಟ್ಟಿ ಕೂಡ ಸಿದ್ದರಾಮಯ್ಯಗೆ ಮನವಿ ಮಾಡಿದ್ದು ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಹಾಗೂ ಚಾಮರಾಜನಗರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣವನ್ನು ಬಜೆಟ್ ನಲ್ಲಿ ಅನುದಾನ ಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.


ಕುಡಿಯುವ ನೀರಿನ‌ ಬವಣೆಯನ್ನು ಹೋಗಲಾಡಿಸುವ ಮೇಕೆದಾಟು ಯೋಜನೆ ಜಾರಿಯಾಗಬೇಕು ಎಂಬುದು ಜನರ ಒತ್ತಾಯವಾಗಿದೆ. ಹನೂರು ಭಾಗವೂ ಯೋಜನೆಯಿಂದ ಅಭಿವೃದ್ಧಿ ಹೊಂದಲಿದ್ದು ಈ ಬಜೆಟ್ ನಲ್ಲಿ ಅನುದಾನ ಬಿಡುಗಡೆಗೊಳಿಸಿ ಯೋಜನೆ ಆರಂಭಿಸಬೇಕು ಎಂದು ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದ್ದಾರೆ.


ಇದನ್ನೂ ಓದಿ- ಬರಪೀಡಿತ ರೈತರಿಗೆ ಕೊಡಲು ಹಣವಿಲ್ಲ, ಸಂಪುಟ ದರ್ಜೆ ಭಾಗ್ಯಕ್ಕೆ ಹಣವಿದೆ: ಸಿಎಂಗೆ ಕುಟುಕಿದ ಕುಮಾರಸ್ವಾಮಿ


ರೇಷ್ಮೆ, ಪ್ರವಾಸೋದ್ಯಮಕ್ಕೆ ಉತ್ತೇಜನ: 
ಒಂದು ಕಾಲದಲ್ಲಿ ರೇಷ್ಟೆಗೆ ಹೆಸರುವಾಸಿಯಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಕೃಷಿ ಇಳಿಮುಖವಾಗುತ್ತಿದ್ದು ರೇಷ್ಮೆಗೆ ಉತ್ತೇಜನ ನೀಡುವ ಯೋಜನೆ ಘೋಷಣೆ ಮಾಡಬೇಕು, ಜಿಲ್ಲೆಯಲ್ಲಿ ಸಿಲ್ಕ್ ಪಾರ್ಕ್ ತೆರೆಯಬೇಕು ಎಂಬುದು ಜನರ ಒತ್ತಾಯವಾಗಿದ್ದು ಸಿದ್ದರಾಮಯ್ಯ ಈ ಸಾಲಿನ ಬಜೆಟ್ ನಲ್ಲಿ ಗಡಿಜಿಲ್ಲೆಯಲ್ಲಿ ರೇಷ್ಮೆಗೆ ಉತ್ತೇಜನ ಕೊಡುವ ಕಾರ್ಯಕ್ರಮ ತರುತ್ತಾರೆ ಎಂಬ ನಿರೀಕ್ಷೆ ಇದೆ. 


ಗಡಿಜಿಲ್ಲೆ ಚಾಮರಾಜನಗರದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು ಪ್ರವಾಸಿ ತಾಣಗಳನ್ನು ಬೆಸೆಯುವ ಕಾರ್ಯ ಆಗಬೇಕು, ಪ್ರವಾಸೋದ್ಯಮಕ್ಕೆ ಉತ್ತೇಜ‌ನ ಕೊಡುವ ಯೋಜನೆ, ಪ್ಯಾಕೇಜ್ ನೀಡಬೇಕು, ಉತ್ತರ ಕರ್ನಾಕಟ ಮಾದರಿಯಲ್ಲಿ ಚಾಮರಾಜನಗರದ ಎಲ್ಲಾ ಪ್ರವಾಸಿ ಸ್ಥಳಗಳನ್ನು ಬೆಸೆದು ಸ್ಥಳೀಯರಿಗೆ ಉದ್ಯೋಗವಕಾಶ ದೊರಕಿಸಿಕೊಡಬೇಕು ಎನ್ನುತ್ತಾರೆ ಚಾಮರಾಜನಗರದ ಚಿಂತಕ ಲಕ್ಷ್ಮಿನರಸಿಂಹ.


ವಿವಿಗೆ ಕೊಡುವರೇ ಅಭಿವೃದ್ಧಿ ಭಾಗ್ಯ..? 
ಹಿಂದಿನ ಬಿಜೆಪಿ ಸರ್ಕಾರ ಜಿಲ್ಲೆಯಲ್ಲಿ ಪ್ರತ್ಯೇಕ ವಿವಿ ಸ್ಥಾಪನೆ ಮಾಡಿದೆ. ಆದರೆ, ಹೆಚ್ಚು ಅನುದಾನ ನೀಡಿಲ್ಲ. ಕೊಠಡಿಗಳಂತಹ ಮೂಲ ಸೌಕರ್ಯಗಳ ಕೊರತೆ ಕಾಡುತ್ತಿದೆ. ಹಾಗಾಗಿ, ಹೆಚ್ಚಿನ ಅನುದಾನ ಬೇಕು, ಈ ಹಿನ್ನೆಲೆಯಲ್ಲಿ ಚಾಮರಾಜನಗರ ವಿವಿಗೆ ಅಭಿವೃದ್ಧಿ ಭಾಗ್ಯವನ್ನು ಸಿದ್ದರಾಮಯ್ಯ ಕೊಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ ಇಲ್ಲಿನ ವಿದ್ಯಾರ್ಥಿಗಳು, ಸ್ಥಳೀಯರು. 


ಇದನ್ನೂ ಓದಿ- ನಮ್ಮ ಅವಧಿಯ ಕೆಲಸಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ


ಕಬ್ಬು ಬಾಕಿ ಹಣ, ಸಾಲಮನ್ನಾ: 
ಆಗ ಅತಿವೃಷ್ಠಿ ಈಗ ಅನಾವೃಷ್ಠಿಯಿಂದ ರೈತರು ತತ್ತರಿಸಿದ್ದು ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಕಬ್ಬು ಬಾಕಿ ಹಣವನ್ನು ಬಜೆಟ್ ನಲ್ಲಿ ಘೋಷಿಸಿ ಸರ್ಕಾರವೇ ನೀಡಬೇಕು ಹಾಗೂ 60 ವರ್ಷ ಮೇಲ್ಪಟ್ಟ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಕಬ್ಬು ಬೆಳೆಗಾರರ ಸಂಘದ ಸತೀಶ್ ಮತ್ತು ಸುಂದರಪ್ಪ ಒತ್ತಾಯಿಸಿದ್ದಾರೆ.


ಕೈಗಾರಿಕಾ ಪ್ರದೇಶ ಅಭಿವೃದ್ಧಿ, ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಗೆ ವಿಶೇಷ ಕಾರ್ಯಕ್ರಮ, ಜಿಲ್ಲಾಕೇಂದ್ರದಲ್ಲಿ ಉಪನಗರ ಸ್ಥಾಪನೆ, ಕೊಳ್ಳೇಗಾಲದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪನೆ, ಹನೂರು ತಾಲೂಕಿನ ಚಂಗಡಿ ಗ್ರಾಮ ಸ್ಥಳಾಂತರಕ್ಕೆ ಅನುದಾನ, ಗುಂಡ್ಲುಪೇಟೆಯಲ್ಲಿ ಜನರು ಗುಳೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಸೃಷ್ಟಿಗೆ ವಿಶೇಷ ಯೋಜನೆ ರೂಪಿಸಬೇಕು ಎಂಬುದು ಜನರ ಒತ್ತಾಸೆಯಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.