ನೆದರ್ಲೆಂಡ್ಸ್ ಪ್ರಧಾನಿ ಜತೆ ಹೂಡಿಕೆ, ಸುಸ್ಥಿರ ಅಭಿವೃದ್ಧಿ, ನಾವೀನ್ಯತೆ ಕುರಿತು ವಿಸ್ತೃತ ಚರ್ಚೆ

ರಾಜ್ಯದಲ್ಲಿ ಡಚ್ ಕಂಪನಿಗಳ ಹೂಡಿಕೆಗೆ ಉತ್ತೇಜನ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ನೆದರ್ಲೆಂಡ್ಸ್‌ ಪ್ರಧಾನಿ ಶ್ರೀ ಮಾರ್ಕ್ ರುಟೆ ಅವರ ಸಮ್ಮುಖದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದುಂಡು ಮೇಜಿನ ಸಭೆ ನಡೆಯಿತು.

Written by - Manjunath N | Last Updated : Sep 11, 2023, 10:22 PM IST
  • “ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಮತ್ತು ಜೈವಿಕ ಇಂಧನಗಳ ಉತ್ಪಾದನೆಗೆ ಹೇರಳ ಅವಕಾಶಗಳಿವೆ.
  • ಡಚ್ ಕಂಪನಿಗಳು ಇದರತ್ತ ಗಮನ ಹರಿಸಬೇಕು.
  • ಹಂಪೆ, ಬಾದಾಮಿ, ವಿಜಯಪುರದಂಥ ಐತಿಹಾಸಿಕ ಸ್ಥಳಗಳು ನಮ್ಮಲ್ಲಿವೆ.
ನೆದರ್ಲೆಂಡ್ಸ್ ಪ್ರಧಾನಿ ಜತೆ ಹೂಡಿಕೆ, ಸುಸ್ಥಿರ ಅಭಿವೃದ್ಧಿ, ನಾವೀನ್ಯತೆ ಕುರಿತು ವಿಸ್ತೃತ ಚರ್ಚೆ title=

ಬೆಂಗಳೂರು: ರಾಜ್ಯದಲ್ಲಿ ಡಚ್ ಕಂಪನಿಗಳ ಹೂಡಿಕೆಗೆ ಉತ್ತೇಜನ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ನೆದರ್ಲೆಂಡ್ಸ್‌ ಪ್ರಧಾನಿ ಶ್ರೀ ಮಾರ್ಕ್ ರುಟೆ ಅವರ ಸಮ್ಮುಖದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದುಂಡು ಮೇಜಿನ ಸಭೆ ನಡೆಯಿತು.

ಇದನ್ನೂ ಓದಿ: "ಬಿಜೆಪಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ"

ಇದೆ ವೇಳೆ ಸಚಿವ ಎಂ.ಬಿ.ಪಾಟೀಲ್ “ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಮತ್ತು ಜೈವಿಕ ಇಂಧನಗಳ ಉತ್ಪಾದನೆಗೆ ಹೇರಳ ಅವಕಾಶಗಳಿವೆ. ಡಚ್ ಕಂಪನಿಗಳು ಇದರತ್ತ ಗಮನ ಹರಿಸಬೇಕು. ಹಂಪೆ, ಬಾದಾಮಿ, ವಿಜಯಪುರದಂಥ ಐತಿಹಾಸಿಕ ಸ್ಥಳಗಳು ನಮ್ಮಲ್ಲಿವೆ. ಅಪಾರ ಸಂಖ್ಯೆಯ ಸಕ್ಕರೆ ಕಾರ್ಖಾನೆಗಳಿವೆ.ಇಲ್ಲಿರುವ ಹೂಡಿಕೆ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು.  ಆಹಾರ ಸಂಸ್ಕರಣೆ, ಬಯೋಟೆಕ್, ಫಾರ್ಮಾ, ನಾವೀನ್ಯತೆ, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಹೂಡಿಕೆಯನ್ನು ವೃದ್ಧಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಯಚೂರು ಡೆಪ್ಯೂಟಿ ತಹಶೀಲ್ದಾರ್‌ ಲಂಚ ಪ್ರಕರಣ : ಕಚೇರಿಗೆ ಬಾರದ ಅಧಿಕಾರಿ

ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್, ಐಟಿ-ಬಿಟಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News