PM Kisan FPO Scheme 2023 : ರೈತರಿಗೆ ಕೇಂದ್ರ ಸರ್ಕಾರದಿಂದ 18 ಲಕ್ಷ ರೂ. ಸಿಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ದೇಶದಾದ್ಯಂತ ಕೋಟಿಗಟ್ಟಲೆ ರೈತರು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರ ಅಡಿಯಲ್ಲಿ ಸರ್ಕಾರವು ವಾರ್ಷಿಕವಾಗಿ 6000 ರೂಪಾಯಿಗಳನ್ನು ರೈತರ ಖಾತೆಗಳಿಗೆ ವರ್ಗಾಯಿಸುತ್ತಿದೆ. ಇದೀಗ ಸರ್ಕಾರ ರೈತರಿಗಾಗಿ ಮತ್ತೊಂದು ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರಿಗೆ 18 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುತ್ತಿದೆ.
ಯಾವ ರೈತರ ಖಾತೆಗೆ ಸೇರುತ್ತದೆ ಈ ಹಣ :
ಪಿಎಂ ಕಿಸಾನ್ ಎಫ್‌ಪಿಒ ಯೋಜನೆಯಡಿ, ಕೇಂದ್ರ ಸರ್ಕಾರವು ಕೃಷಿಗೆ ಸಂಬಂಧಿಸಿದ ಉದ್ಯಮವನ್ನು ಪ್ರಾರಂಭಿಸಲು ರೈತರಿಗೆ 18 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುತ್ತದೆ. ಇದಕ್ಕಾಗಿ ಕನಿಷ್ಠ 11 ರೈತರು ಸೇರಿ ಒಂದು ಸಂಘಟನೆಯನ್ನು ಮಾಡಬೇಕಾಗುತ್ತದೆ. ಇದರೊಂದಿಗೆ ರಸಗೊಬ್ಬರ, ಬೀಜಗಳು, ರಾಸಾಯನಿಕಗಳು ಮತ್ತು ಕೃಷಿ ಯಂತ್ರೋಪಕರಣಗಳಂತಹ ಅಗತ್ಯ ವಸ್ತುಗಳನ್ನು ಕೈಗೆಟುಕುವ ದರದಲ್ಲಿ ಖರೀದಿಸಲು ಸರ್ಕಾರವು ರೈತರಿಗೆ ಸಹಾಯ ಮಾಡುತ್ತದೆ.
ಇದನ್ನೂ ಓದಿ : FD Interest Rate: ಈ ಬ್ಯಾಂಕ್ FD ಮೇಲೆ ಶೇ.9ರಷ್ಟು ಬಡ್ಡಿ ನೀಡುತ್ತಿದೆ
ಹೆಚ್ಚಾಗುತ್ತದೆ ರೈತರ ಆದಾಯ :
ಈ ಯೋಜನೆಯಡಿ ರೈತರು ಕಡಿಮೆ ದರದಲ್ಲಿ ಬ್ಯಾಂಕ್‌ಗಳಿಂದ ಸಾಲವನ್ನು ಪಡೆಯುವುದು ಸಾಧ್ಯವಾಗುತ್ತದೆ. ರೈತರಿಗೆ ಆರ್ಥಿಕವಾಗಿ ಸಹಾಯ ಮಾಡಲು, ಮೋದಿ ಸರ್ಕಾರವು 'ಪಿಎಂ ಕಿಸಾನ್ ಎಫ್‌ಪಿಒ ಯೋಜನೆ'ಯನ್ನು ಪ್ರಾರಂಭಿಸಿದೆ. ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗೆ 18 ಲಕ್ಷ ರೂ. ನೀಡಲಾಗುವುದು. ಈ ಯೋಜನೆ ಮೂಲಕ ಹೊಸ ಕೃಷಿ ಉದ್ಯಮ ಆರಂಭಿಸಲು ದೇಶದಾದ್ಯಂತ ರೈತರಿಗೆ ಆರ್ಥಿಕ ನೆರವು ನೀಡಲಾಗುವುದು. ಈ ಯೋಜನೆಯ ಲಾಭ ಪಡೆಯಲು 11 ರೈತರು ಒಟ್ಟಾಗಿ ಸಂಘಟನೆಯನ್ನು ರಚಿಸಬೇಕು. ಇದರೊಂದಿಗೆ, ರೈತರಿಗೆ ಕೃಷಿ ಉಪಕರಣಗಳು ಅಥವಾ ರಸಗೊಬ್ಬರಗಳು, ಬೀಜಗಳು ಅಥವಾ ಔಷಧಿಗಳನ್ನು ಖರೀದಿಸಲು ಸುಲಭವಾಗುತ್ತದೆ.
ಈ ಯೋಜನೆಗಾಗಿ ನೋಂದಾಯಿಸಿಕೊಳ್ಳುವುದು ಹೇಗೆ ? :
1.ಮೊದಲನೆಯದಾಗಿ ನೀವು ರಾಷ್ಟ್ರೀಯ ಕೃಷಿ ಮಾರುಕಟ್ಟೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಬೇಕು.
2. ಮುಖಪುಟದಲ್ಲಿ ನೀಡಿರುವ FPO ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
3. ಇಲ್ಲಿ 'ರಿಜಿಸ್ಟ್ರೆಶನ್ ' ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇಷ್ಟರಲ್ಲಿ ನಿಮ್ಮ ಮುಂದೆ ಫಾರ್ಮ್ ತೆರೆದುಕೊಳ್ಳುತ್ತದೆ.
4. ಈ ಫಾರ್ಮ್ ನಲ್ಲಿ ಕೇಳಿದ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ನಮೂದಿಸಿ.
5. ಇದರ ನಂತರ ಪಾಸ್‌ಬುಕ್ ಅಥವಾ ಕ್ಯಾನ್ಸೆಲ್ಡ್ ಚೆಕ್ ಅಥವಾ ಐಡಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
6. ಅಂತಿಮವಾಗಿ ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ : ಐಶಾರಾಮಿ 8 ಸೀಟರ್ ಕಾರು! ಆದರೂ ಬೆಲೆ ಮಾತ್ರ ತೀರಾ ಕಡಿಮೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.