Budget 2023: 2023 ರ ಬಜೆಟ್‌ನಲ್ಲಿ ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಳ ಸಾಧ್ಯತೆ!

Budget 2023: 2023ರ ಕೇಂದ್ರ ಬಜೆಟ್‌ನಲ್ಲಿ ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಕೃಷಿ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಯೋಜನೆಯಲ್ಲಿ ನೀಡಲಾಗುತ್ತಿರುವ ಆರ್ಥಿಕ ಸಹಾಯವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

Written by - Yashaswini V | Last Updated : Feb 1, 2023, 02:29 PM IST
  • ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಉತ್ತೇಜಿಸುವ ಅಗತ್ಯವಿದೆ.
  • ಇದಕ್ಕಾಗಿ ಪಿಎಂ-ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ ನೀಡುವ ಆರು ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ಹೆಚ್ಚಿಸುವ ಅಗತ್ಯವಿದೆ.
  • ಇದರಿಂದ ರೈತರು ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರಗಳು, ಬೀಜಗಳು ಮತ್ತು ಕೀಟನಾಶಕಗಳನ್ನು ಖರೀದಿಸಬಹುದು- ಕೃಷಿ ರಸಾಯನ ಕಂಪನಿಯ ಅಧ್ಯಕ್ಷ ಆರ್.ಜಿ.ಅಗರ್ವಾಲ್
Budget 2023: 2023 ರ ಬಜೆಟ್‌ನಲ್ಲಿ ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಳ ಸಾಧ್ಯತೆ! title=
Budget 2023- PM Kisan Yojana

Budget 2023: ದೇಶಾದ್ಯಂತ ಎಲ್ಲಾ ರೈತರು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಮುಂದಿನ ಕಂತಿನ ಬಿಡುಗಡೆಗೂ ಮೊದಲು ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಈ ಬಾರಿ 2023ರ ಬಜೆಟ್‌ನಲ್ಲಿ ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್ ದೊರೆಯುವ ಸಾಧ್ಯತೆ ಇದೆ. ವಾಸ್ತವವಾಗಿ, ದಿನದಿಂದ ದಿನಕ್ಕೆ ಕೃಷಿ ವೆಚ್ಚಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ರೈತರಿಗೆ ನೀಡುವ ಪಿಎಂ ಕಿಸಾನ್ ಸಮೃದ್ಧಿ ಯೋಜನೆಯ ಮೊತ್ತವನ್ನು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ. 

ವಾಸ್ತವವಾಗಿ, ಪ್ರಸ್ತುತ ರಸಗೊಬ್ಬರಗಳ ಬೆಲೆ ಹೆಚ್ಚಳದಿಂದಾಗಿ ರೈತರ ಕೃಷಿ ಚಟುವಟಿಕೆಗಳ ವೆಚ್ಚ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಪಿಎಂ-ಕಿಸಾನ್ ಯೋಜನೆಯಡಿ ರೈತರಿಗೆ ನೀಡಲಾಗುವ ಆರ್ಥಿಕ ನೆರವಿನ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ಈ ಕುರಿತಂತೆ ಮಾತನಾಡಿರುವ, ಕೃಷಿ ರಸಾಯನ ಕಂಪನಿಯ ಅಧ್ಯಕ್ಷ ಆರ್.ಜಿ.ಅಗರ್ವಾಲ್,  ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಉತ್ತೇಜಿಸುವ ಅಗತ್ಯವಿದೆ. ಇದಕ್ಕಾಗಿ ಪಿಎಂ-ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ ನೀಡುವ ಆರು ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ಹೆಚ್ಚಿಸುವ ಅಗತ್ಯವಿದೆ. ಇದರಿಂದ ರೈತರು ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರಗಳು, ಬೀಜಗಳು ಮತ್ತು ಕೀಟನಾಶಕಗಳನ್ನು ಖರೀದಿಸಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ- Budget 2023: ಕೇಂದ್ರ ಬಜೆಟ್‌ ಗೆ ಸಂಬಂಧಿಸಿದ ಕೆಲವು ಕುತೂಹಲಕರ ಸಂಗತಿಗಳು

ರಾಷ್ಟ್ರೀಯ ಮಿಷನ್ ಆರಂಭಿಸಬೇಕು:
ಭಾರತದ ಸಾಲ್ವೆಂಟ್ ಎಕ್ಸ್‌ಟ್ರಾಕ್ಟರ್ಸ್ ಅಸೋಸಿಯೇಷನ್ ​​(ಎಸ್‌ಇಎ) ಅಧ್ಯಕ್ಷ ಅಜಯ್ ಜುಂಜುನ್‌ವಾಲಾ ಅವರು ಮಾತನಾಡಿ, ಎಣ್ಣೆಬೀಜ ಉತ್ಪಾದನೆಗೆ ಉತ್ತೇಜನ ನೀಡಬೇಕಾದರೆ ಸಾಕಷ್ಟು ಆರ್ಥಿಕ ನೆರವು ನೀಡುವ ಅಗತ್ಯವಿದೆ. ಇದಲ್ಲದೆ, ವಿದೇಶದಿಂದ ಖಾದ್ಯ ತೈಲ ಆಮದು ಕಡಿಮೆ ಮಾಡುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರೀಯ ಮಿಷನ್ ಆರಂಭಿಸಬೇಕಿದೆ ಎಂದು ಭಾರತದ ಸಾಲ್ವೆಂಟ್ ಎಕ್ಸ್‌ಟ್ರಾಕ್ಟರ್ಸ್ ಅಸೋಸಿಯೇಷನ್ ​​(ಎಸ್‌ಇಎ) ಆಗ್ರಹಿಸಿರುವುದಾಗಿ ತಿಳಿಸಿದರು.

ಇದನ್ನೂ ಓದಿ- Budget 2023: ಈ ಮೂರು ಮಹತ್ವದ ಘೋಷಣೆಗಳ ಬಳಿಕ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಹೆಚ್ಚಳ!

ಪ್ರಸ್ತುತ, ಭಾರತವು ಒಂದು ವರ್ಷದಲ್ಲಿ ಸುಮಾರು 140 ಲಕ್ಷ ಟನ್ ಗಳಷ್ಟು ಖಾದ್ಯ ತೈಲವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ. 2026 ರ ವೇಳೆಗೆ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ತೈಲದ ಅವಲಂಬನೆಯನ್ನು ಕಡಿಮೆ ಮಾಡಬೇಕಾಗಿದೆ. ಈ ಕಾರ್ಯಾಚರಣೆಗೆ ವಾರ್ಷಿಕ 25 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಬೇಕಾಗುತ್ತದೆ. ಇದಕ್ಕಾಗಿ ಸರ್ಕಾರ ನೆರವು ನೀಡಿದರೆ, ರೈತರಿಗೆ ಸಹಾಯವಾಗುವ ಜೊತೆಗೆ ವಿದೇಶಿ ಅವಲಂಬನೆಯೂ ಕಡಿಮೆ ಆಗುತ್ತದೆ. ಇದಕ್ಕಾಗಿ ಸರ್ಕಾರವು ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ನೀಡಲಾಗುವ ಹಣದ ಮೊತ್ತವನ್ನು ಹೆಚ್ಚಿಸಬೇಕು ಎಂದು  ಸಿಂಜೆಂಟಾ ಇಂಡಿಯಾದ ಮುಖ್ಯ ಸುಸ್ಥಿರತೆ ಅಧಿಕಾರಿ (ಸಿಎಸ್‌ಒ) ಕೆ.ಸಿ.ರವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News