Minimum Pension Scheme: ಕೇಂದ್ರ ನೌಕರರಿಗೆ ಕನಿಷ್ಠ ಪಿಂಚಣಿ ನೀಡುವ ಕುರಿತಾದ ವರದಿಗಳನ್ನು ಕೇಂದ್ರ ಹಣಕಾಸು ಸಚಿವಾಲಯ ತಳ್ಳಿಹಾಕಿದೆ. ಎನ್‌ಪಿಎಸ್ ಅಡಿಯಲ್ಲಿ ತನ್ನ ಉದ್ಯೋಗಿಗಳಿಗೆ ಕನಿಷ್ಠ ಪಿಂಚಣಿ ನೀಡುವ ಪ್ರಸ್ತಾಪವನ್ನು ಸರ್ಕಾರವು ಹೊರತರಬಹುದು ಎಂದು ಹಲವಾರು ಪತ್ರಿಕೆಗಳಲ್ಲಿ ವರದಿಯಾಗಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ. ಈ ಸುದ್ದಿ ಸಂಪೂರ್ಣ ತಪ್ಪು ಎಂದು ಹಣಕಾಸು ಸಚಿವಾಲಯ ಹೇಳಿದೆ.

COMMERCIAL BREAK
SCROLL TO CONTINUE READING

ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ಹಣಕಾಸು ಸಚಿವರ ಘೋಷಣೆಯ ನಂತರ, ಹಣಕಾಸು ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಎನ್‌ಪಿಎಸ್ ಕುರಿತು ಸಮಿತಿಯನ್ನು ರಚಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಇದು ಪ್ರಸ್ತುತ ವಿವಿಧ ಮಧ್ಯಸ್ಥಗಾರರೊಂದಿಗೆ ನಿರಂತರವಾಗಿ ಚರ್ಚಿಸುತ್ತಿದೆ. ಸಮಿತಿಯು ಇನ್ನೂ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ವಾಸ್ತವದಲ್ಲಿ, ಬುಧವಾರ, ಹಳೆಯ ಪಿಂಚಣಿ ಯೋಜನೆಗೆ ಹೆಚ್ಚುತ್ತಿರುವ ಬೇಡಿಕೆಯ ನಡುವೆ, ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಕನಿಷ್ಠ ಪಿಂಚಣಿ ನೀಡುವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ನೌಕರರ ಕೊನೆಯ ವೇತನದ ಶೇ. 40 ರಿಂದ ಶೇ. 45 ರಷ್ಟನ್ನು  ಕನಿಷ್ಠ ಪಿಂಚಣಿಯಾಗಿ ಖಾತರಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು.


ಇದನ್ನೂ ಓದಿ-Stock Market Update: ಎಲ್ಲಾ ಕಡೆಗಳಿಂದ ಮಾರಾಟದ ಹಿನ್ನೆಲೆ 285 ಅಂಕಗಳಿಂದ ಕುಸಿದ ಸೆನ್ಸೆಕ್ಸ್, ನಿಫ್ಟಿಯಲ್ಲಿಯೂ ಕೂಡ 86 ಅಂಕಗಳ ಕುಸಿತ


ರಾಷ್ಟ್ರೀಯ ಪಿಂಚಣಿ ಯೋಜನೆಗೆ ಹೆಚ್ಚುತ್ತಿರುವ ವಿರೋಧದ ನಡುವೆ, ಹಳೆಯ ಪಿಂಚಣಿ ಯೋಜನೆಯ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಹಣಕಾಸು ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದೆ, ಇದು ಎನ್‌ಪಿಎಸ್ ಅನ್ನು ಆಕರ್ಷಕವಾಗಿಸಲು ಪರಿಗಣಿಸುತ್ತಿದೆ. ಕೇಂದ್ರ ಸರ್ಕಾರವು ಎನ್‌ಪಿಎಸ್ ಅನ್ನು ನೌಕರರಿಗೆ ಆಕರ್ಷಕವಾಗಿಸಬಹುದು, ಇದರಿಂದ ಕೇಂದ್ರ ನೌಕರರಲ್ಲಿನ ಅಸಮಾಧಾನವನ್ನು ಕಡಿಮೆ ಮಾಡಬಹುದು ಎಂದು ನಂಬಲಾಗಿದೆ.


ಇದನ್ನೂ ಓದಿ-Fitch Ratings: 2023-24 ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಮುನ್ಸೂಚನೆಯನ್ನು ಮತ್ತೊಮ್ಮೆ ಅಂದಾಜಿಸಿದ ಫೀಚ್


ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳ ನಡುವೆ ಜಟಾಪಟಿ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ವಿರೋಧಿಸಿ ಕೇಂದ್ರ ಸರ್ಕಾರ ಸೇರಿದಂತೆ ರಾಜ್ಯ ಸರ್ಕಾರದ ನೌಕರರು ಹಳೆ ಪಿಂಚಣಿ ಯೋಜನೆ ಮರುಸ್ಥಾಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ