Schemes For Women : ಇಂದು ಭಾರತ ಆರ್ಥಿಕತೆಯತ್ತ ಸಾಗುತ್ತಿದೆ.ದೇಶದ ಈ ಅಭಿವೃದ್ಧಿಯ ಹಿಂದೆ ಮಹಿಳೆಯರ ಪಾತ್ರ ದೊಡ್ಡದಿದೆ. ಒಂದು ಕಾಲದಲ್ಲಿ ಮಹಿಳೆಯರು ನಾಲ್ಕು ಗೋಡೆಯಿಂದ ಹೊರಗೆ ಬರುವುದು ತುಂಬಾ ಕಷ್ಟಕರವಾಗಿತ್ತು.ಆದರೆ ಈಗ ಕಾಲ ಬದಲಾಗಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಸ್ಪರ್ಧೆಗಿಳಿದು ಬೆಳೆಯುತ್ತಿದ್ದಾರೆ. ವ್ಯಾಪಾರ, ಶಿಕ್ಷಣ, ಮನರಂಜನೆಯಿಂದ ಹಿಡಿದು ಐಟಿ ಹೀಗೆ ಹಲವು ಕ್ಷೇತ್ರಗಳಲ್ಲಿ ಮಹಿಳೆಯರು ಛಾಪು ಮೂಡಿಸುತ್ತಿದ್ದಾರೆ.  ಮತ್ತೊಂದೆಡೆ, ದೇಶದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇನ್ನೂ ಇದ್ದಾರೆ.ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಮಹಿಳೆಯರ ಅಭಿವೃದ್ದಿಗಾಗಿ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಈ ಯೋಜನೆಗಳ ಉದ್ದೇಶವು ದೇಶದ ಮಹಿಳೆಯರನ್ನು ಸ್ವ ಉದ್ಯೋಗಕ್ಕಾಗಿ ಉತ್ತೇಜಿಸುವುದು ಮತ್ತು ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು. 


COMMERCIAL BREAK
SCROLL TO CONTINUE READING

ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಯೋಜನೆಗಳು  :
ಉಚಿತ ಹೊಲಿಗೆ ಯಂತ್ರ ಯೋಜನೆ : 

ದೇಶದಲ್ಲಿ ಹೆಚ್ಚಿನ ಜನಸಂಖ್ಯೆಯು ಬಡ ಮತ್ತು ಕಾರ್ಮಿಕ ಮಹಿಳೆಯರನ್ನು ಒಳಗೊಂಡಿದೆ. ಈ ಮಹಿಳೆಯರು ತಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮಹಿಳೆಯರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರವು ಬಡ ಮತ್ತು ಕೂಲಿ ಕಾರ್ಮಿಕರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆಯನ್ನು ಪ್ರಾರಂಭಿಸಿದೆ.ಈ ಯೋಜನೆಯಡಿ, ದೇಶದ ಪ್ರತಿ ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಸರ್ಕಾರ ನೀಡುತ್ತದೆ. ಸರ್ಕಾರದ ನೆರವಿನಿಂದ ಮಹಿಳೆಯರು ಉಚಿತ ಹೊಲಿಗೆ ಯಂತ್ರಗಳನ್ನು ಪಡೆದು ಸ್ವಂತ ಉದ್ಯೋಗ ಆರಂಭಿಸಲು ಸಾಧ್ಯವಾಗುತ್ತದೆ.


ಇದನ್ನೂ ಓದಿ : ಭಾರತದಲ್ಲಿ ಜನವರಿ 9 ರಂದು ಚಿನ್ನದ ದರ ಏರಿಕೆ: ನಿಮ್ಮ ನಗರದ ಬೆಲೆ ತಿಳಿಯಿರಿ!


ಸುಕನ್ಯಾ ಸಮೃದ್ಧಿ ಯೋಜನೆ : 
ಇದೊಂದು ಸಣ್ಣ ಉಳಿತಾಯ ಯೋಜನೆ.ಹೆಣ್ಣು ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯ ಪ್ರಯೋಜನವನ್ನು ಪಡೆಯಲು, ಹೆಣ್ಣು ಮಗುವಿಗೆ 10 ವರ್ಷ ವಯಸ್ಸಾಗುವ ಮೊದಲು ಅವರ ಹೆಸರಿನಲ್ಲಿ ಖಾತೆಯನ್ನು ತೆರೆಯಬೇಕಾಗುತ್ತದೆ.ಈ ಯೋಜನೆಯಲ್ಲಿ ಕನಿಷ್ಟ  250 ರೂಪಾಯಿ ಹೂಡಿಕೆ ಮಾಡಬೇಕಾಗುತ್ತದೆ. ಇನ್ನು ಈ ಯೋಜನೆಯಲ್ಲಿ ಗರಿಷ್ಠ 1.5 ಲಕ್ಷ ರೂಪಾಯಿ ಹೂಡಿಕೆ ಮಾಡಬಹುದು.
ಈ ಯೋಜನೆಯಲ್ಲಿ ಹೂಡಿಕೆ ಮಾಡಿದ ನಂತರ, ನಿಮ್ಮ ಮಗಳ ಮದುವೆ ಅಥವಾ ಅವಳ ಶಿಕ್ಷಣದ ಬಗ್ಗೆ ಚಿಂತಿಸಬೇಕಾಗಿಲ್ಲ. ಹೆಣ್ಣು ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸಲು ಈ ಯೋಜನೆ ಅತ್ಯುತ್ತಮ ಆಯ್ಕೆಯಾಗಿದೆ.ಈ ಯೋಜನೆಯು ಮಗಳು ಮತ್ತು ಆಕೆಯ ಪೋಷಕರಿಗೆ ಸಹಾಯ ಮಾಡುತ್ತದೆ.


ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ : 
ಈ ಯೋಜನೆಯನ್ನು ಭಾರತ ಸರ್ಕಾರವು 2015 ರಲ್ಲಿ ಪ್ರಾರಂಭಿಸಿತು. ಹೆಣ್ಣು ಲಿಂಗ ಅನುಪಾತದಲ್ಲಿನ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಮತ್ತು ದೇಶದಲ್ಲಿ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಉದೇಶದಿಂದ ಈ ಯೋಜನೆ ಜಾರಿಗೆ ತರಲಾಯಿತು. ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಹಾಯ ಮಾಡುತ್ತಿದೆ.


ಇದನ್ನೂ ಓದಿ : Ration Card ನಲ್ಲಿ ಮಕ್ಕಳ ಹೆಸರು ಸೇರಿಸಬೇಕೆ? ಸರ್ಕಾರಿ ಕಚೇರಿಗೆ ಹೋಗುವ ಅವಶ್ಯಕತೆ ಇಲ್ಲ, ಇಲ್ಲಿದೆ ಡೀಟೈಲ್ಸ್!


ಮಹಿಳಾ ಶಕ್ತಿ ಕೇಂದ್ರ ಯೋಜನೆ : 
ಮಹಿಳೆಯರ ಸಬಲೀಕರಣ ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯನ್ನು 2017 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ದೇಶಾದ್ಯಂತ ಸಾಮಾಜಿಕ ಸಹಭಾಗಿತ್ವದ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಕೆಲಸ ಮಾಡಲಾಗುತ್ತಿದೆ.


ಪ್ರಧಾನಮಂತ್ರಿ ಉಜ್ವಲಾ ಯೋಜನೆ :
ದೇಶದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳಿಲ್ಲದ ಮನೆಯಿದೆ. ಇಲ್ಲಿ ಇಂದಿಗೂ ಮಹಿಳೆಯರು ಅಡುಗೆಗೆ ಸೌದೆ, ಭರಣಿ, ಇತರ ವಸ್ತುಗಳನ್ನು ಬಳಸುತ್ತಾರೆ.  ಹೀಗೆ ಅಡುಗೆ ಮಾಡುವಾಗ ಅಡುಗೆಮನೆಯಲ್ಲಿ ಸಾಕಷ್ಟು ಹೊಗೆ ಏಳುತ್ತದೆ. ಇದರಿಂದ ಅಡುಗೆ ಮಾಡುವಾಗ ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ.  ಇದಲ್ಲದೆ, ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಕೂಡಾ ಎದುರಿಸಬೇಕಾಗುತ್ತದೆ.   ಮಹಿಳೆಯರ ಈ ಸಮಸ್ಯೆಯನ್ನು ಪರಿಗಣಿಸಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಆರಂಭಿಸಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ