Budget 2023: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2023-24 ಅನ್ನು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಹಣಕಾಸು ಸಚಿವೆ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.  ಬಜೆಟ್ ಮಂಡಿಸುವಾಗ ಹಣಕಾಸು ಸಚಿವರು ಮಹಿಳಾ ಸನ್ಮಾನ ಉಳಿತಾಯ ಪ್ರಮಾಣಪತ್ರ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಮಹಿಳೆಯರಿಗೆ 2 ಲಕ್ಷ ಉಳಿತಾಯದ ಮೇಲೆ ಶೇ.7.5 ಬಡ್ಡಿ ಸಿಗಲಿದೆ. ಈ ಘೋಷಣೆಯಿಂದ ಸರ್ಕಾರದ ಪ್ರತಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮಹಿಳಾ ಸಮ್ಮಾನ್ ಬಚತ್ ಪ್ರಮಾಣ ಪತ್ರ ಯೋಜನೆಯ ಮೂಲಕ ದೇಶದ ಮಹಿಳೆಯರು ಈಗ ಸಾಕಷ್ಟು ಉಳಿತಾಯ ಮಾಡಬಹುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ-Budget 2023: ಅಗ್ನಿ ವೀರರಿಗಾಗಿ ಬಜೆಟ್ ನಲ್ಲಿ ಮಹತ್ವದ ಘೋಷಣೆ, ತೆರಿಗೆಯಲ್ಲಿ ಭಾರಿ ವಿನಾಯಿತಿ


2 ಲಕ್ಷಗಳ ಉಳಿತಾಯದ ಮೇಲೆ ಶೇಕಡಾ 7.5 ರಷ್ಟು ಬಡ್ಡಿಯ ಲಾಭ
ಮಹಿಳೆಯರಿಗಾಗಿ ಇರುವ ಈ ವಿಶೇಷ ಯೋಜನೆಯಡಿ ಇದೀಗ ಮಹಿಳೆ ಅಥವಾ ಹುಡುಗಿಯ ಹೆಸರಿನಲ್ಲಿ 2 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಇದರ ಮೇಲೆ ವಾರ್ಷಿಕ ಶೇ.7.5 ಬಡ್ಡಿಯನ್ನು ನೀಡಲಾಗುವುದು ಮತ್ತು ಈ ಯೋಜನೆಯು ಮಾರ್ಚ್ 2025 ರವರೆಗೆ ಅನ್ವಯಿಸಲಿದೆ. ಈ ಯೋಜನೆಯಲ್ಲಿ ಭಾಗಶಃ ಹಿಂಪಡೆಯುವ ಸೌಲಭ್ಯವನ್ನು ಸಹ ಕಲ್ಪಿಸಲಾಗಿದೆ. ಬಜೆಟ್‌ನಲ್ಲಿ ಹಣಕಾಸು ಸಚಿವರು ಹಿರಿಯ ನಾಗರಿಕರಿಗಾಗಿಯೂ ಕೂಡ ಮಹತ್ವದ ಘೋಷಣೆಯನ್ನೂ ಮಾಡಿದ್ದಾರೆ. ಹಿರಿಯ ನಾಗರಿಕರಿಗೆ ಉಳಿತಾಯ ಯೋಜನೆಗಳಲ್ಲಿ ಗರಿಷ್ಠ ಠೇವಣಿ ಮಿತಿಯನ್ನು ಹೆಚ್ಚಿಸಲಾಗಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಗಳಲ್ಲಿ ಗರಿಷ್ಠ ಠೇವಣಿ ಮಿತಿಯನ್ನು 15 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಲಾಗಿದೆ. ಇದೇ ವೇಳೆ, ಜಂಟಿ ಖಾತೆಗಳಿಗೆ ಮಾಸಿಕ ಆದಾಯ ಯೋಜನೆಯ ಮಿತಿಯನ್ನು ದ್ವಿಗುಣಗೊಳಿಸಲಾಗಿದೆ. ಅದನ್ನು 9 ಲಕ್ಷ ದಿಂದ 15 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.


ಇದನ್ನೂ ಓದಿ-Budget 2023: ಮಾರುಕಟ್ಟೆಗೆ ಹಿಡಿಸದ ನಿರ್ಮಲಾ ಬಜೆಟ್, 1200 ಅಂಕಗಳಿಂದ ಗೋತಾ ಹೊಡೆದ ಸೆನ್ಸೆಕ್ಸ್


ಈ ಯೋಜನೆಯು ಮಾರ್ಚ್ 2025 ರವರೆಗೆ ಅನ್ವಯಿಸುತ್ತದೆ
'ಆಜಾದಿ ಕಾ ಅಮೃತ್ ಮಹೋತ್ಸವ್ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ'ವನ್ನು ಘೋಷಿಸಿದ ಸೀತಾರಾಮನ್, ಹೊಸ ಮತ್ತು  ಒಂದು ಬಾರಿಯ ಸಣ್ಣ ಉಳಿತಾಯ ಯೋಜನೆಯಾದ ಮಹಿಳಾ ಸಮ್ಮಾನ್ ಬಚತ್ ಪ್ರಮಾಣಪತ್ರವನ್ನು ಮಾರ್ಚ್ 2025 ರವರೆಗೆ ಎರಡು ವರ್ಷಗಳ ಅವಧಿಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಹೇಳಿದ್ದಾರೆ. ದೀನದಯಾಲ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ 81 ಲಕ್ಷ ಸ್ವಸಹಾಯ ಗುಂಪುಗಳನ್ನು ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮಹಿಳೆಯರನ್ನು ಒಟ್ಟುಗೂಡಿಸಿ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲಾಗಿದೆ ಎಂದು ಹಣಕಾಸು ಸಚಿವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ. ಇದಲ್ಲದೆ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸಣ್ಣ ರೈತರಿಗೆ 2.25 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಹಣಕಾಸು ಸಚಿವೆ ಹೇಳಿದ್ದಾರೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.