PM Kisan: ಪಿಎಂ ಕಿಸಾನ್ ಯೋಜನೆಯ ಪ್ರಯೋಜನೆಯಲ್ಲಿ ನೋಂದಾಯಿಸದ ರೈತರಿಗೆ ಇಲ್ಲಿದೆ ಹಂತ-ಹಂತದ ಪ್ರಕ್ರಿಯೆ
PM Kisan: ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೋ. ಆರ್ಥಿಕ ನೆರವನ್ನು ನೀಡುತ್ತದೆ. ನೀವು ರೈತರಾಗಿದ್ದು, ಇನ್ನೂ ಕೂಡ ಈ ಯೋಜನೆಯ ಫಲಾನುಭವಿ ಆಗದಿದ್ದರೆ, ಈಗಲೇ ಇದರಲ್ಲಿ ನೋಂದಾಯಿಸಿಕೊಳ್ಳಿ. ಇದಕ್ಕಾಗಿ, ಇಲ್ಲಿದೆ ಸುಲಭ ಪ್ರಕ್ರಿಯೆ.
PM Kisan Scheme: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರವು ದೇಶದ ಕೋಟ್ಯಾಂತರ ರೈತರೈಗೆ ಪ್ರತಿ ವರ್ಷ ₹ 6000 ಆರ್ಥಿಕ ನೆರವು ನೀಡುತ್ತದೆ. ವಾರ್ಷಿಕ ಮೂರು ಕಂತುಗಳಲ್ಲಿ ಎರಡು ಸಾವಿರ ರೂ.ಗಳಂತೆ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ರೈತರು ಈ ಹಣವನ್ನು ತಮ್ಮ ಕೃಷಿ ವೆಚ್ಚಗಳಿಗಾಗಿ ವಿನಿಯೋಗಿಸಬಹುದು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan Samman Nidhi Scheme) ಇದುವರೆಗೂ 16 ನೇ ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಈ ಯೋಜನೆಯಡಿ ಡಿಬಿಟಿ ಮೂಲಕ ರೈತರ ಖಾತೆಗೆ ನೇರವಾಗಿ ಹಣವನ್ನು ಕಳುಹಿಸಲಾಗುತ್ತದೆ. ಪ್ರತಿ 4 ತಿಂಗಳ ಅಂತರದಲ್ಲಿ ತಲಾ 2,000 ರೂ.ಗಳಂತೆ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಕಳುಹಿಸಲಾಗುತ್ತದೆ.
ಇದನ್ನೂ ಓದಿ- ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಆರ್‌ಬಿಐ ಮಹತ್ವದ ಬದಲಾವಣೆ, ಗ್ರಾಹಕರಿಗೆ ಬಂಪರ್ ಲಾಭ
ನೀವು ರೈತರಾಗಿದ್ದು, ಇನ್ನೂ ಕೂಡ ಈ ಯೋಜನೆಯ ಪ್ರಯೋಜನವನ್ನು ಪಡೆಯದಿದ್ದರೆ, ಇದರಲ್ಲಿ ನೋಂದಾಯಿಸಿಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿದರೆ ಅಷ್ಟೇ ಸಾಕು. ಅವುಗಳೆಂದರೆ...
ಇದನ್ನೂ ಓದಿ- EPFO: ಫಾರ್ಮ್ 10C, 10Dಯ ಪ್ರಯೋಜನಗಳೇನು? ಇಪಿಎಫ್ಒ ಸದಸ್ಯರು ಇದನ್ನು ತಿಳಿದಿರಲೇಬೇಕು!
ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಳ್ಳಲು ಈ ಸುಲಭ ಹಂತಗಳನ್ನು ಅನುಸರಿಸಿ :-
>> ಮೊದಲನೆಯದಾಗಿ, pmkisan.gov.in ನ ಪೋರ್ಟಲ್‌ನಲ್ಲಿ 'ಫಾರ್ಮರ್ಸ್ ಕಾರ್ನರ್' ಅನ್ನು ಕ್ಲಿಕ್ ಮಾಡಿ .
>> 'ಹೊಸ ರೈತ ನೋಂದಣಿ' ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
>> ಇದರ ಬಳಿಕ ನಿಗದಿತ ಜಾಗದಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ರಾಜ್ಯವನ್ನು ಆಯ್ಕೆ ಮಾಡಿ.
>> ನಿಮ್ಮ ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸುವ ಓಟಿಪಿ ಅನ್ನು ನಮೂದಿಸಿ ಮತ್ತು 'ನೋಂದಣಿಗಾಗಿ ಮುಂದುವರಿಯಿರಿ' ಆಯ್ಕೆಯನ್ನು ಆರಿಸಿ.
>> ಇದರಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಮತ್ತು ಆಧಾರ್ ದೃಢೀಕರಣ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
>> ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಲಾದ ಒಟಿಪಿ ಅನ್ನು ನಮೂದಿಸಿ ಮತ್ತು ಜಮೀನಿಗೆ ಸಂಬಂಧಿಸಿದ ವಿವರಗಳು ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.
>> ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ, ನಿಮ್ಮ ನೋಂದಣಿ ಪೂರ್ಣಗೊಂಡ ಸಂದೇಶವು ಮೊಬೈಲ್ ಪರದೆಯಲ್ಲಿ ಗೋಚರಿಸುತ್ತದೆ. ನಂತರ ದಾಖಲೆಗಳ ಪರಿಶೀಲನೆ ಬಳಿಕ ಮುಂದಿನ ಕಂತಿನಿಂದ ನಿಮ್ಮ ಖಾತೆಗೂ ಹಣ ಜಮಾ ಆಗುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.