ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 81.3 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸುವ ಸಮಯವನ್ನು ಇನ್ನೂ 1 ವರ್ಷಕ್ಕೆ ವಿಸ್ತರಿಸಿದೆ. ಶುಕ್ರವಾರ ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬಡವರಿಗೆ ಉಚಿತ ಪಡಿತರ ನೀಡಲು ಸುಮಾರು 2 ಲಕ್ಷ ಕೋಟಿ ರೂ. ವೆಚ್ಚವಾಗಲಿದ್ದು, ಇದು ಸರ್ಕಾರಕ್ಕೆ ಹೆಚ್ಚುವರಿ ಹೊರೆಯಾಗಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಶುಕ್ರವಾರ ಮಹತ್ವದ ನಿರ್ಧಾರ ಕೈಗೊಂಡಿರುವ ಸರ್ಕಾರ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿ 81.35 ಕೋಟಿ ಬಡವರಿಗೆ 1 ವರ್ಷಕ್ಕೆ ಉಚಿತ ಪಡಿತರ ನೀಡಲು ನಿರ್ಧರಿಸಿತು.
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಗೆ ಸಂಬಂಧಿಸಿದ ಐವರು ಉಗ್ರರ ಬಂಧನ
ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆಯಲ್ಲಿ 81.3 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ವಿತರಿಸಲು ಖರ್ಚು ಮಾಡಿದ 2 ಲಕ್ಷ ಕೋಟಿ ರೂ.ಗಳ ಆರ್ಥಿಕ ಹೊರೆಯನ್ನು ಕೇಂದ್ರ ಸರ್ಕಾರ ಭರಿಸಲು ನಿರ್ಧರಿಸಲಾಯಿತು. NFSA ಅಡಿಯಲ್ಲಿ ಬಡವರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ನೀಡಲಾಗುವುದು ಎಂದು ಸಂಪುಟ ಸಭೆಯ ನಂತರ ಆಹಾರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಆದರೆ ಡಿಸೆಂಬರ್ 31ರಂದು ಮುಕ್ತಾಯಗೊಳ್ಳಲಿರುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಗಡುವನ್ನು ವಿಸ್ತರಿಸಲು ಸರ್ಕಾರ ನಿರಾಕರಿಸಿದೆ.
ಇದನ್ನೂ ಓದಿ: Sania Mirza : ದೇಶದ ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್ ಈ ಸಾನಿಯಾ ಮಿರ್ಜಾ!
ಈ ಯೋಜನೆಯಡಿ ಇದುವರೆಗೆ ಸರ್ಕಾರ 81.35 ಕೋಟಿ ಜನರಿಗೆ ಉಚಿತ ಪಡಿತರವನ್ನು ನೀಡುತ್ತಿದೆ. ಈ ಯೋಜನೆಯಡಿ ಲಭ್ಯವಿರುವ ಧಾನ್ಯವು NFSA ಅಡಿಯಲ್ಲಿ ಲಭ್ಯವಿರುವ ಸಬ್ಸಿಡಿ ಧಾನ್ಯಕ್ಕಿಂತ ಭಿನ್ನವಾಗಿದೆ. ಈ ಹಿಂದೆ ಎನ್‌ಎಫ್‌ಎಸ್‌ಎ ಅಡಿಯಲ್ಲಿ ಬಡವರು ಪಡಿತರ ಅಂಗಡಿಯಿಂದ ಕೆಜಿಗೆ 2 ರಿಂದ 3 ರೂ.ಗೆ ಖರೀದಿಸುತ್ತಿದ್ದ ಆಹಾರ ಧಾನ್ಯಗಳನ್ನು ಈಗ 1 ವರ್ಷಕ್ಕೆ ಉಚಿತವಾಗಿ ನೀಡಲಾಗಿದೆ.
NFSA ಅಡಿಯಲ್ಲಿ ಬಡವರಿಗೆ ಕೆಜಿಗೆ 3 ರೂ.ಗೆ ಅಕ್ಕಿ ಮತ್ತು ರೂ.2 ಗೆ ಗೋಧಿ ಸಿಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಬಡವರಿಗೆ ಹೊಸ ವರ್ಷದ ಉಡುಗೊರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಈ ಯೋಜನೆಯಡಿ ಈಗ ಫಲಾನುಭವಿಗಳು ಯಾವುದೇ ರೀತಿಯ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.