ಈ ಯೋಜನೆಯಲ್ಲಿ ಸರ್ಕಾರ ಮಹಿಳೆಯರಿಗೆ ಉಚಿತವಾಗಿ ನೀಡುತ್ತಿದೆ ಹೊಲಿಗೆ ಯಂತ್ರ
Pradhan Mantri sewing Machine Scheme: ಯೋಜನೆಯಡಿ ಕೇಂದ್ರ ಸರಕಾರದಿಂದ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. ಈ ಯೋಜನೆಯ ಮೂಲಕ ಮಹಿಳೆಯರು ಹೊಲಿಗೆ ಯಂತ್ರದೊಂದಿಗೆ ಮನೆಯಲ್ಲೇ ಕುಳಿತು ಉದ್ಯೋಗ ಆರಂಭಿಸಬಹುದು.
ನವದೆಹಲಿ : Pradhan Mantri sewing Machine Scheme : ಮನೆಯಲ್ಲಿ ಕುಳಿತು ಹೊಲಿಗೆ ಕೆಲಸ ಮಾಡುವ ಮೂಲಕ ಆದಾಯವನ್ನು ಗಳಿಸಲು ಬಯಸಿದರೆ, ಈ ಯೋಜನೆಯ ಲಾಭವನ್ನು ನೀವೂ ಪಡೆದುಕೊಳ್ಳಬಹುದು. 'ಉಚಿತ ಹೊಲಿಗೆ ಯಂತ್ರ ಯೋಜನೆ 2022' ಅನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ದೇಶದ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಈ ಯೋಜನೆ ಆರಂಭಿಸಲಾಗಿದೆ.
ಯಂತ್ರಕ್ಕೆ ಅರ್ಜಿ ಸಲ್ಲಿಸಬೇಕು :
ಯೋಜನೆಯಡಿ ಕೇಂದ್ರ ಸರಕಾರದಿಂದ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. ಈ ಯೋಜನೆಯ ಮೂಲಕ ಮಹಿಳೆಯರು ಹೊಲಿಗೆ ಯಂತ್ರದೊಂದಿಗೆ ಮನೆಯಲ್ಲೇ ಕುಳಿತು ಉದ್ಯೋಗ ಆರಂಭಿಸಬಹುದು. ಹೊಲಿಗೆ ಯಂತ್ರವನ್ನು ಪಡೆಯಲು ಅರ್ಜಿ ಸಲ್ಲಿಸಬೇಕು. ಪ್ರತಿ ರಾಜ್ಯದ 50,000 ಮಹಿಳೆಯರೂ ಈ ಯೋಜನೆಯಿಂದ ಲಾಭ ಪಡೆಯಬಹುದು.
ಇದನ್ನೂ ಓದಿ : Gold Price Today:ಬಂಗಾರ ಪ್ರಿಯರಿಗೆ ಶಾಕ್ , ಗಗನ ಮುಖಿಯಾದ ಬಂಗಾರದ ಬೆಲೆ , ಬೆಳ್ಳಿಯನ್ನಂತೂ ಮುಟ್ಟುವಂತೆಯೂ ಇಲ್ಲ
ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುವ ಅವಕಾಶ :
ಪ್ರಧಾನಮಂತ್ರಿ 'ಉಚಿತ ಹೊಲಿಗೆ ಯಂತ್ರ ಯೋಜನೆಯೊಂದಿಗೆ ದೇಶದ ಮಹಿಳೆಯರಿಗೆ ಆರ್ಥಿಕವಾಗಿ ಸ್ವತಂತ್ರರಾಗುವ ಅವಕಾಶವನ್ನು ಕಲ್ಪಿಸಲಾಗುತ್ತಿದೆ. 20 ರಿಂದ 40 ವರ್ಷ ವಯಸ್ಸಿನ ಮಹಿಳೆಯರು ಉಚಿತ ಹೊಲಿಗೆ ಯಂತ್ರ ಯೋಜನೆ 2022 ರ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಒಂದು ರೂಪಾಯಿ ಕೂಡಾ ಖರ್ಚು ಮಾಡುವ ಅಗತ್ಯವಿಲ್ಲ.
ಸಂಪೂರ್ಣವಾಗಿ ಉಚಿತ ಹೊಲಿಗೆ ಯಂತ್ರ :
ಸರ್ಕಾರದ ಈ ಯೋಜನೆಯಡಿ ಗ್ರಾಮ ಮತ್ತು ನಗರಗಳ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಯೋಜನೆಯ ಅಡಿಯಲ್ಲಿ ಹೊಲಿಗೆ ಯಂತ್ರವನ್ನು ಪಡೆಯಲು, ಕೆಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಆಧಾರ್ ಕಾರ್ಡ್, ಜನ್ಮ ದಿನಾಂಕ ಪ್ರಮಾಣಪತ್ರ, ಆದಾಯ ಪುರಾವೆ, ಪಾಸ್‌ಪೋರ್ಟ್ ಗಾತ್ರದ ಫೋಟೋ ಮತ್ತು ಮೊಬೈಲ್ ಸಂಖ್ಯೆ ಇತ್ಯಾದಿ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಅರ್ಜಿದಾರರು ಅಂಗವಿಕಲರಾಗಿದ್ದರೆ ಅಥವಾ ವಿಧವೆಯಾಗಿದ್ದರೆ, ಅವರು ಸಂಬಂಧಿತ ಪ್ರಮಾಣಪತ್ರವನ್ನು ಹೊಂದಿರಬೇಕು.
ಇದನ್ನೂ ಓದಿ : Pension Scheme : ಸರ್ಕಾರದ ಈ ಯೋಜನೆಯಲ್ಲಿ ಪಡೆಯಿರಿ ₹60,000 ಪಿಂಚಣಿ!
ಈ ರೀತಿ ಅರ್ಜಿ ಸಲ್ಲಿಸಬೇಕು :
ಇದಕ್ಕಾಗಿ ಮೊದಲು www.india.gov.in ವೆಬ್‌ಸೈಟ್‌ಗೆ ಹೋಗಿ . ಇಲ್ಲಿಂದ ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ನೀಡಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ. ಇದರ ನಂತರ ಈ ಅರ್ಜಿ ನಮೂನೆಯಲ್ಲಿ ನಿಮ್ಮ ವಿವರಗಳನ್ನು ಭರ್ತಿ ಮಾಡಿ. ಕೊನೆಯಲ್ಲಿ, ಕೇಳಲಾದ ನಿಮ್ಮ ಡಾಕ್ಯುಮೆಂಟ್‌ಗಳ ಫೋಟೋ ಸ್ಟೇಟ್ ಅಟ್ಯಾಚ್ ಮಾಡಿ.
ನಡೆಯುತ್ತದೆ ಅರ್ಜಿ ನಮೂನೆಯ ಪರಿಶೀಲನೆ :
ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಕಚೇರಿಗೆ ಸಲ್ಲಿಸಿದ ನಂತರ, ನಿಮ್ಮ ಅರ್ಜಿಯನ್ನು ಪರಿಶೀಲಿಸಲಾಗುತ್ತದೆ. ನಂತರ ನಿಮ್ಮ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಕಚೇರಿಯ ಅಧಿಕಾರಿ ಪರಿಶೀಲಿಸುತ್ತಾರೆ. ಇದರ ನಂತರ ನಿಮಗೆ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುವುದು.
ಅರ್ಹತೆ :
ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ 2022 ಅಡಿಯಲ್ಲಿ ಅರ್ಜಿ ಸಲ್ಲಿಸುವ ಮಹಿಳೆಯರ ವಯಸ್ಸು 20 ರಿಂದ 40 ವರ್ಷಗಳ ನಡುವೆ ಇರಬೇಕು. ಯೋಜನೆಯಡಿ ಕಾರ್ಮಿಕ ಮಹಿಳೆಯರ ಪತಿಯ ಆದಾಯ 12,000 ರೂ. ಮೀರಬಾರದು. ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.