Petrol-Diesel Price: ಕೇಂದ್ರದಿಂದ ವಾಹನ ಸವಾರರಿಗೆ ಸಿಹಿ ಸುದ್ದಿ: ತೈಲ ಬೆಲೆಯಲ್ಲಿ ಭಾರೀ ಇಳಿಕೆ

ಕಳೆದ ದಿನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, "ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ ಮತ್ತು ಡೀಸೆಲ್‌ಗೆ 6 ರೂಪಾಯಿಯಷ್ಟು ಕಡಿತಗೊಳಿಸಲಾಗುತ್ತಿದೆ. ಈ ಮೂಲಕ ಪ್ರತಿ ಲೀಟರ್‌ ಪೆಟ್ರೋಲ್‌ ದರದಲ್ಲಿ ರೂ. 9.5 ಮತ್ತು ಡೀಸೆಲ್‌ ದರದಲ್ಲಿ ರೂ. 7 ಕಡಿಮೆಯಾಗಲಿದೆ" ಎಂದು ಘೋಷಿಸಿದ್ದರು. 

Written by - Bhavishya Shetty | Last Updated : May 22, 2022, 09:52 AM IST
  • ತೈಲ ಬೆಲೆಯಲ್ಲಿ ದಿಢೀರ್‌ ಕುಸಿತ
  • ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ
  • ಪೆಟ್ರೋಲ್‌ ಮೇಲಿನ ಅಬಕಾರಿ ಸುಂಕ ಕಡಿತ
Petrol-Diesel Price: ಕೇಂದ್ರದಿಂದ ವಾಹನ ಸವಾರರಿಗೆ ಸಿಹಿ ಸುದ್ದಿ: ತೈಲ ಬೆಲೆಯಲ್ಲಿ ಭಾರೀ ಇಳಿಕೆ  title=
Fuel Price

ಕಳೆದ ಕೆಲ ದಿನಗಳಿಂದ ಸ್ಥಿರವಾಗಿ ಮುಂದುವರೆದಿದ್ದ ತೈಲ ಬೆಲೆ ಇದೀಗ ದಿಢೀರ್‌ ಕುಸಿತ ಕಂಡಿದ್ದು, ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕೇಂದ್ರ ಸರ್ಕಾರ ಕಳೆದ ದಿನ ಸುಂಕ ಕಡಿತಗೊಳಿಸಿ ಆದೇಶ ಹೊರಡಿಸಿತ್ತು. ಈ ಘೋಷಣೆಯು ದೇಶದಲ್ಲಿ ಕಂಡುಬರುತ್ತಿರುವ ಹಣದುಬ್ಬರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಬಹುದು. 

ಇದನ್ನು ಓದಿ: SRH vs PBK: ಪ್ಲೇ ಆಫ್‌ನಿಂದ ಹೊರಬಿದ್ದರೂ ಜಿದ್ದಾಜಿದ್ದಿ ನಡೆಸಲು ಹೈದರಾಬಾದ್‌-ಪಂಜಾಬ್‌ ತಯಾರಿ!

ಕಳೆದ ದಿನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, "ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ ಮತ್ತು ಡೀಸೆಲ್‌ಗೆ 6 ರೂಪಾಯಿಯಷ್ಟು ಕಡಿತಗೊಳಿಸಲಾಗುತ್ತಿದೆ. ಈ ಮೂಲಕ ಪ್ರತಿ ಲೀಟರ್‌ ಪೆಟ್ರೋಲ್‌ ದರದಲ್ಲಿ ರೂ. 9.5 ಮತ್ತು ಡೀಸೆಲ್‌ ದರದಲ್ಲಿ ರೂ. 7 ಕಡಿಮೆಯಾಗಲಿದೆ" ಎಂದು ಘೋಷಿಸಿದ್ದರು. 

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌-ಡೀಸೆಲೆ ಬೆಲೆ ಇಂತಿದೆ.

ನಗರ ಪೆಟ್ರೋಲ್‌ ಡೀಸೆಲ್‌
ನವದೆಹಲಿ 96.72 ರೂ 89.62 ರೂ.
ಕೊಲ್ಕತ್ತಾ 106.03 ರೂ. 92.76 ರೂ
ಮುಂಬೈ 111.35 ರೂ 97.28 ರೂ 
ಚೆನ್ನೈ 102.63 ರೂ. 94.24 ರೂ.
ಗುರುಗಾಂ 97.18 ರೂ 90.05 ರೂ.
ಹೈದರಾಬಾದ್‌ 109.66 ರೂ 97.82 ರೂ 
ಬೆಂಗಳೂರು 101.94 ರೂ 87.89 ರೂ.

ಎಸ್‌ಎಂಎಸ್‌ ಮೂಲಕ ದರ ಪರಿಶೀಲಿಸಬಹುದು :
ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸಹ ತಿಳಿಯಬಹುದು ಇಂಡಿಯನ್ ಆಯಿಲ್ ಗ್ರಾಹಕರು RSP ಅನ್ನು 9224992249 ಸಂಖ್ಯೆಗೆ ಕಳುಹಿಸುವ ಮೂಲಕ ಮತ್ತು BPCL ಗ್ರಾಹಕರು RSP ಅನ್ನು 9223112222 ಸಂಖ್ಯೆಗೆ ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಇದೆ ವೇಳೆ, HPCL ಗ್ರಾಹಕರು HPPrice ಅನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು. 

ಇದನ್ನು ಓದಿ: ಬಿಜೆಪಿಗೆ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವುದು ಚಾಳಿಯಾಗಿದೆ: ಎಚ್‌ಡಿಕೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News