Petrol Diesel Price: 6 ದಿನಗಳಲ್ಲಿ 5 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಇಂದು ಎಷ್ಟು ಹೆಚ್ಚಳ ಗೊತ್ತಾ?

ಪೆಟ್ರೋಲ್ ಮತ್ತು ಡೀಸೆಲ್ ದರ: ಭಾನುವಾರ ಮತ್ತೊಮ್ಮೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದೆ. 6 ದಿನಗಳಲ್ಲಿ ಐದನೇ ಬಾರಿಗೆ ತೈಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ.

Written by - Puttaraj K Alur | Last Updated : Mar 27, 2022, 09:21 AM IST
  • ಭಾನುವಾರ ಬೆಳಗ್ಗೆ ಮತ್ತೆ ಪೆಟ್ರೋಲ್-ಡಿಸೇಲ್ ದರ ಹೆಚ್ಚಳ
  • ಮಾ.22ರಿಂದ ಇದುವರೆಗೆ 5ನೇ ಬಾರಿಗೆ ತೈಲ ಬೆಲೆ ಏರಿಕೆಯಾಗಿದೆ
  • ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮ ತೈಲ ಕಂಪನಿಗಳಿಗೆ ಭಾರೀ ನಷ್ಟ
Petrol Diesel Price: 6 ದಿನಗಳಲ್ಲಿ 5 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಇಂದು ಎಷ್ಟು ಹೆಚ್ಚಳ ಗೊತ್ತಾ? title=
ಮತ್ತೆ ಪೆಟ್ರೋಲ್-ಡಿಸೇಲ್ ದರ ಹೆಚ್ಚಳ

ನವದೆಹಲಿ: ‘ಪಂಚ’ ರಾಜ್ಯಗಳ ವಿಧಾನಸಭಾ ಚುನಾವಣೆ(5 State Election) ಮುಗಿದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಕೇಂದ್ರ ಸರ್ಕಾರ ಸತತ 5ನೇ ಬಾರಿಗೆ ತೈಲ ಬೆಲೆಯಲ್ಲಿ ಹೆಚ್ಚಳ ಘೋಷಿಸಿದೆ. ಈ ಏರಿಕೆ ಇಂದು ಬೆಳಗ್ಗೆಯಿಂದಲೇ ಜಾರಿಗೆ ಬಂದಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

ಭಾನುವಾರ ಬೆಳಗ್ಗೆ ತೈಲ ಬೆಲೆ ಮತ್ತೆ ಏರಿಕೆ

ಮಾಹಿತಿ ಪ್ರಕಾರ ಇಂದು ಬೆಳಗ್ಗಿನಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 50 ಪೈಸೆ ಹಾಗೂ ಡೀಸೆಲ್ ಬೆಲೆ(Petrol Diesel Price) 55 ಪೈಸೆಯಷ್ಟು ಏರಿಕೆಯಾಗಿದೆ. ಈ ಹೆಚ್ಚಳ ಭಾನುವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿದೆ. ಇದರೊಂದಿಗೆ ಪ್ರಸ್ತುತ ಪೆಟ್ರೋಲ್ ದರ ಲೀಟರ್‌ಗೆ 99.11 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 90.42 ರೂ.ಗೆ ಏರಿಕೆಯಾಗಿದೆ.

ಇದನ್ನೂ ಓದಿ: 26-03-2022 Gold Price Today:ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ

ಮಾರ್ಚ್ 22ರಿಂದ ತೈಲಬೆಲೆ ಏರಿಕೆ  

ಮಾರ್ಚ್ 22ರಿಂದ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Fuel Price Hike)ಗಳನ್ನು ಹೆಚ್ಚಿಸುವ ಪ್ರಕ್ರಿಯೆ ಪ್ರಾರಂಭವಾಯ್ತು. ಈವರೆಗೆ ತೈಲ ಬೆಲೆ 3.70 ರೂ.ನಷ್ಟು ಏರಿಕೆ ಕಂಡಿದೆ. ರುಷ್ಯಾ-ಉಕ್ರೇನ್ ಯುದ್ಧವು ಕೊನೆಗೊಳ್ಳುವವರೆಗೂ ಇದೇ ರೀತಿ ತೈಲಬೆಲೆ ಏರಿಕೆ ಮುಂದುವರಿಯುತ್ತದೆ ಎಂದು ಹೇಳಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನರು ಹೆಚ್ಚಿನ ಹಣದುಬ್ಬರದ ಹೊಡೆತಕ್ಕೆ ಸಿದ್ಧರಾಗಬೇಕಾಗಿದೆ.

ತೈಲ ಕಂಪನಿಗಳಿಗೆ ನಷ್ಟ  

ಮೂಡೀಸ್ ನ ವರದಿಯ ಪ್ರಕಾರ ಕಳೆದ ಹಲವು ದಿನಗಳಿಂದ ತೈಲ ಕಂಪನಿಗಳು(Fuel Price) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಿಲ್ಲ, ಇದರಿಂದಾಗಿ ಸುಮಾರು 19 ಸಾವಿರ ಕೋಟಿ ರೂ.ನಷ್ಟ ನಷ್ಟ ಅನುಭವಿಸಬೇಕಾಯಿತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪ್ರತಿದಿನ ₹74 ಹೂಡಿಕೆ ಮಾಡಿ, ಪ್ರತಿ ತಿಂಗಳು ₹27,500 ಪಿಂಚಣಿ ಪಡೆಯಿರಿ!

ಜನಸಾಮಾನ್ಯರಿಗೆ ಆರ್ಥಿಕ ಹೊರೆ

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ ತೈಲಬೆಲೆ ಏರಿಕೆಯಿಂದ ಮತ್ತಷ್ಟು ಹೊಡೆತ ಬಿದ್ದಂತಾಗಿದೆ. ಜನಸಾಮಾನ್ಯರಿಗೆ ಇದರಿಂದ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದೆ. ಹಣದುಬ್ಬರ(Inflation)ದ ಪರಿಣಾಮ ನೇರವಾಗಿ ಜನಸಾಮಾನ್ಯರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News