Gold Price Today : ಅಗ್ಗವಾಯಿತು ಬೆಳ್ಳಿ, ಬಂಗಾರದ ಬೆಲೆ ಎಷ್ಟು ತಿಳಿಯಿರಿ

Gold Price Today:ನಿನ್ನೆ ಕೇವಲ 10 ರೂಪಾಯಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆಯಲ್ಲಿ ಮಾತ್ರ ಇಳಿಕೆಯಾಗಿದೆ. 

Written by - Ranjitha R K | Last Updated : Jun 14, 2022, 07:57 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಅಗ್ಗವಾಯಿತು ಬೆಳ್ಳಿ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಅಗ್ಗವಾಯಿತು ಬೆಳ್ಳಿ, ಬಂಗಾರದ ಬೆಲೆ ಎಷ್ಟು ತಿಳಿಯಿರಿ  title=
Gold Price Today (file photo)

ಬೆಂಗಳೂರು : Gold Price Today : ನಿನ್ನೆ 10 ರೂಪಾಯಿ ಏರಿಕೆಯಾಗಿದ್ದ ಬಂಗಾರದ ಬೆಲೆಯಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಅಂದರೆ ಚಿನ್ನದ ಬೆಲೆ ಸ್ಥಿರವಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಇಂದು ಕೂಡಾ 52,760  ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 48,360  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ    22 ಕ್ಯಾರೆಟ್ ಚಿನ್ನದ ಬೆಲೆ   24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 48,430 52,830
ದೆಹಲಿ 48,360 52,760
ಮುಂಬಯಿ     48,360 52,760
ಕೋಲ್ಕತ್ತಾ  48,360 52,760
ಬೆಂಗಳೂರು      48,360 52,760
ಹೈದರಾಬಾದ್      48,360 52,760
ಕೇರಳ 48,360 52,760

ಇದನ್ನೂ ಓದಿ NPS ಹೂಡಿಕೆದಾರರಿಗೊಂದು ಭಾರಿ ಸಂತಸದ ಸುದ್ದಿ, ಇನ್ಮುಂದೆ ಚಂದಾದಾರರಿಗೆ ಸಿಗಲಿದೆ ಈ ಅದ್ಭುತ ಸೌಕರ್ಯ

ಗುಡ್ ರಿಟರ್ನ್ ಮಾಹಿತಿ ಪ್ರಕಾರ ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ಬೆಲೆಯಲ್ಲಿ ಇಂದು 500 ರೂಪಾಯಿ ಇಳಿಕೆ ಕಂಡು ಬಂದಿದೆ. ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

ನಗರ ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 67,300
ದೆಹಲಿ 61,500
ಮುಂಬಯಿ 61,500
ಕೋಲ್ಕತ್ತಾ  61,500
ಬೆಂಗಳೂರು      67,300
ಹೈದರಾಬಾದ್  67,300
ಕೇರಳ  67,300

ಇದನ್ನೂ ಓದಿ : Post Office ನ ಈ ಯೋಜನೆಯಲ್ಲಿ 7500 ರೂ.ಮೂಲಕ ಹೂಡಿಕೆ ಆರಂಭಿಸಿ, ಕೋಟ್ಯಾಧೀಶರಾಗಿ ನಿವೃತ್ತಿ ಹೊಂದುವ ಟ್ರಿಕ್ ಇಲ್ಲಿದೆ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News