Gold Price Today : ಇಳಿಕೆ ಕಂಡಿದ್ದ ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ , ಬೆಳ್ಳಿ ಕೂಡಾ ಬಲು ದುಬಾರಿ

Gold Price Today:ಕಳೆದ ಕೆಲವು ದಿನಗಳಿಂದ ಇಳಿಕೆ ಕಂಡಿದ್ದ ಬಂಗಾರದ ಬೆಲೆಯಲ್ಲಿ ಇಂದು ಮತ್ತೆ ಭರ್ಜರಿ ಏರಿಕೆಯಾಗಿದೆ.  ಗುಡ್ ರಿಟರ್ನ್ ಮಾಹಿತಿ ಪ್ರಕಾರ  ಚಿನ್ನದ ಬೆಲೆಯಲ್ಲಿ 430   ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿಯೂ ಭಾರೀ ಹೆಚ್ಚಳ ಕಂಡು ಬಂದಿದೆ. 

Written by - Ranjitha R K | Last Updated : Jun 17, 2022, 07:59 AM IST
  • ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
  • ಬೆಳ್ಳಿ ಬೆಲೆಯಲ್ಲಿಯೂ ಭರ್ಜರಿ ಹೆಚ್ಚಳ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಇಳಿಕೆ ಕಂಡಿದ್ದ ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ , ಬೆಳ್ಳಿ ಕೂಡಾ ಬಲು ದುಬಾರಿ  title=
Gold Price Today (file photo)

ಬೆಂಗಳೂರು : Gold Price Today : ಕಳೆದ ಕೆಲವು ದಿನಗಗಳಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ದಾಖಲಾಗಿತ್ತು. ಆದರೆ ಇಂದು ಒಂದೇ ದಿನಕ್ಕೆ ಬಂಗಾರದ ಬೆಲೆಯಲ್ಲಿ 430 ರೂ. ಗಳ ಏರಿಕೆ ಕಂಡು ಬಂದಿದೆ.   24 ಕ್ಯಾರೆಟ್ ಚಿನ್ನದ ಬೆಲೆ ಇಂದು ಕೂಡಾ  51,870  ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,550  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ    22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,650 51,980
ದೆಹಲಿ 47,550 51,870
ಮುಂಬಯಿ     47,580 51,900
ಕೋಲ್ಕತ್ತಾ 47,580 51,900
ಬೆಂಗಳೂರು      47,580 51,900
ಹೈದರಾಬಾದ್  47,580 51,900
ಕೇರಳ 47,580 51,900

ಇದನ್ನೂ ಓದಿ : ಎಟಿಎಫ್ ದರದಲ್ಲಿ ದಾಖಲೆ ಹೆಚ್ಚಳ; ವಿಮಾನ ಪ್ರಯಾಣ ಇನ್ನು ಬಲು ದುಬಾರಿ

ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆಯಲ್ಲಿ ಕೂಡಾ ಭರ್ಜರಿ ಏರಿಕೆಯಾಗಿದೆ. ನಿನ್ನೆ ಕೇವಲ 20 ರೂಪಾಯಿ ಏರಿಕೆಯಾಗಿದ್ದ ಬೆಳ್ಳಿ ಬೆಲೆಯಲ್ಲಿ ಇಂದು 1,150  ರೂ.ಗಳಷ್ಟು ಏರಿಕೆ ಕಂಡು ಬಂದಿದೆ. ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

ನಗರ ಇಂದಿನ ಬೆಳ್ಳಿ ದರ 
 ಚೆನ್ನೈ 66,000
ದೆಹಲಿ 61,150
ಮುಂಬಯಿ 61,150
ಕೋಲ್ಕತ್ತಾ      61,150
ಬೆಂಗಳೂರು 61,150
ಹೈದರಾಬಾದ್ 61,150
ಕೇರಳ 61,150

ಇದನ್ನೂ ಓದಿ ಎಟಿಎಫ್ ದರದಲ್ಲಿ ದಾಖಲೆ ಹೆಚ್ಚಳ; ವಿಮಾನ ಪ್ರಯಾಣ ಇನ್ನು ಬಲು ದುಬಾರಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News