ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ: ಭಾರೀ ಇಳಿಕೆ ಕಂಡ ಬಂಗಾರದ ಬೆಲೆ
ಮೇಕಿಂಗ್ ಚಾರ್ಜ್‌ಗಳು, ರಾಜ್ಯ ತೆರಿಗೆಗಳು ಮತ್ತು ಅಬಕಾರಿ ಸುಂಕದಂತಹ ಅಂಶಗಳಿಂದಾಗಿ ಹಳದಿ ಲೋಹದ ದರವು ಪ್ರತಿದಿನ ಭಿನ್ನವಾಗಿರುತ್ತದೆ.
ನವದೆಹಲಿ: ದೇಶದಲ್ಲಿ ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದ್ದು, ಗ್ರಾಹಕರಿಗೆ ಖುಷಿ ನೀಡಿದೆ. ಇಂದು (ಏಪ್ರಿಲ್ 27) 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ 48,990 ರೂ. ಆಗಿದೆ. ಬೆಲೆಯಲ್ಲಿ ಮತ್ತೆ 54 ರೂ.(ಒಂದು ಗ್ರಾಂ.ಗೆ) ಇಳಿಕೆ ಕಂಡುಬಂದಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿಯೂ 250 ರೂ. ಇಳಿಕೆಯಾಗಿದ್ದು ಕೆಜಿ ಬೆಳ್ಳಿಯ ಬೆಲೆ 65,450 ರೂ. ಆಗಿದೆ. ಕಳೆದ ದಿನ 65,700 ರೂ.ಗೆ ಬೆಳ್ಳಿ ಮಾರಾಟವಾಗುತ್ತಿತ್ತು.
ಇದನ್ನು ಓದಿ: ಮತ್ತೆ ಹುಳಿ ಅನಿಸುತ್ತಿದೆ ನಿಂಬೆ ದರ ಏರಿಕೆ: ಇಲ್ಲಿದೆ ಇಂದಿನ ತರಕಾರಿಗಳ ಬೆಲೆ
ಮೇಕಿಂಗ್ ಚಾರ್ಜ್‌ಗಳು, ರಾಜ್ಯ ತೆರಿಗೆಗಳು ಮತ್ತು ಅಬಕಾರಿ ಸುಂಕದಂತಹ ಅಂಶಗಳಿಂದಾಗಿ ಹಳದಿ ಲೋಹದ ದರವು ಪ್ರತಿದಿನ ಭಿನ್ನವಾಗಿರುತ್ತದೆ. ಇಂದು ದೇಶಾದ್ಯಂತ ಕೆಲವು ನಗರಗಳ ಚಿನ್ನದ ದರಗಳು ಇಲ್ಲಿವೆ:
ಗುಡ್ ರಿಟರ್ನ್ಸ್ ವೆಬ್‌ಸೈಟ್ ಪ್ರಕಾರ, ಬೆಂಗಳೂರು, ಹೈದರಾಬಾದ್ ಕೇರಳ, ಮುಂಬೈ ಮತ್ತು ಕೋಲ್ಕತ್ತಾದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನವನ್ನು 48,450 ರೂ.ಗೆ ಮಾರಾಟ ಮಾಡಲಾಗುತ್ತಿದೆ. ನವದೆಹಲಿಯಲ್ಲಿ 48,400 ರೂ. ಇದ್ದರೆ, ಚೆನ್ನೈನಲ್ಲಿ 48,810 ರೂ.ಗೆ ಹಳದಿ ಲೋಹ ಮಾರಾಟವಾಗುತ್ತಿದೆ. ಇನ್ನು 24 ಗ್ರಾಂ ಚಿನ್ನದ ಬೆಲೆ ಬೆಂಗಳೂರು, ಹೈದರಾಬಾದ್ ಕೇರಳ, ಮುಂಬೈ ಮತ್ತು ಕೋಲ್ಕತ್ತಾದಲ್ಲಿ 52,860 ರೂ. ಇದ್ದು, ಚೆನ್ನೈನಲ್ಲಿ 53,250 ರೂ. ಇದೆ.
ಇದನ್ನು ಓದಿ: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ ಕನಿಷ್ಠ 3 ರೂ. ಹೆಚ್ಚಳಕ್ಕೆ ಸಿಎಂಗೆ ಮನವಿ
ಮಧುರೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,810 ರೂ. ಇದ್ದು, 24 ಕ್ಯಾರೆಟ್ ಚಿನ್ನದ ಬೆಲೆ 53,250 ರೂ. ಇದೆ. ಇನ್ನು ಪಾಟ್ನಾದಲ್ಲಿ 24-ಕ್ಯಾರೆಟ್ ಶುದ್ಧತೆಯ ಚಿನ್ನಕ್ಕೆ 52,910 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 48,500 ರೂ. ಇದೆ. ಮೈಸೂರು, ಮಂಗಳೂರು, ವಿಜಯವಾಡದಲ್ಲಿ ಇದೇ ಪ್ರಮಾಣದ 22 ಕ್ಯಾರೆಟ್ ಶುದ್ಧತೆ 48,450 ರೂ.ಗೆ ಮಾರಾಟವಾಗುತ್ತಿದೆ. 24 ಕ್ಯಾರೆಟ್ ಚಿನ್ನದ ಬೆಲೆ 52,860 ರೂ. ಇದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.