Gold-Silver Price: ಚಿನ್ನ ಪ್ರಿಯರಿಗೆ ಶಾಕ್‌: ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ

ಮೇಕಿಂಗ್ ಚಾರ್ಜ್‌ಗಳು, ರಾಜ್ಯ ತೆರಿಗೆಗಳು ಮತ್ತು ಅಬಕಾರಿ ಸುಂಕದಂತಹ ಅಂಶಗಳಿಂದಾಗಿ ಹಳದಿ ಲೋಹದ ದರವು ಪ್ರತಿದಿನ ಭಿನ್ನವಾಗಿರುತ್ತದೆ. 

Written by - Bhavishya Shetty | Last Updated : Apr 30, 2022, 07:49 AM IST
  • ಮತ್ತೆ ಏರಿಕೆ ಕಂಡ ಹಳದಿಲೋಹದ ಬೆಲೆ
  • ಗ್ರಾಂ ಬೆಲೆಯಲ್ಲಿ 59 ರೂ. ಹೆಚ್ಚಳ
  • ಸಂತೋಷದಲ್ಲಿದ್ದ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ
Gold-Silver Price: ಚಿನ್ನ ಪ್ರಿಯರಿಗೆ ಶಾಕ್‌: ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ title=
Gold price

ನವದೆಹಲಿ: ದೇಶದಲ್ಲಿ ಕಳೆದ ಕೆಲ ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇದೀಗ ದಿಢೀರ್‌ ಏರಿಕೆ ಕಂಡುಬಂದಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಇಂದು (ಏಪ್ರಿಲ್‌ 30) 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ 52,370 ರೂ. ಆಗಿದ್ದು, ಬೆಲೆಯಲ್ಲಿ 59 ರೂ.(ಒಂದು ಗ್ರಾಂ.ಗೆ) ಹೆಚ್ಚಳ ಕಂಡುಬಂದಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿಯೂ 200 ರೂ. ಏರಿಕೆಯಾಗಿದ್ದು ಕೆಜಿ ಬೆಳ್ಳಿಯ ಬೆಲೆ 64,000 ರೂ. ಆಗಿದೆ. ಕಳೆದ ದಿನ 63,800 ರೂ.ಗೆ ಬೆಳ್ಳಿ ಮಾರಾಟವಾಗುತ್ತಿತ್ತು. 

ಇದನ್ನು ಓದಿ: Vegetable price: ಗ್ರಾಹಕರೇ ಗಮನಿಸಿ: ಇಲ್ಲಿದೆ ಇಂದಿನ ತರಕಾರಿಗಳ ಬೆಲೆ

ಮೇಕಿಂಗ್ ಚಾರ್ಜ್‌ಗಳು, ರಾಜ್ಯ ತೆರಿಗೆಗಳು ಮತ್ತು ಅಬಕಾರಿ ಸುಂಕದಂತಹ ಅಂಶಗಳಿಂದಾಗಿ ಹಳದಿ ಲೋಹದ ದರವು ಪ್ರತಿದಿನ ಭಿನ್ನವಾಗಿರುತ್ತದೆ. ಇಂದು ದೇಶಾದ್ಯಂತ ಕೆಲವು ನಗರಗಳ ಚಿನ್ನದ ದರಗಳು ಇಲ್ಲಿವೆ:

ಗುಡ್ ರಿಟರ್ನ್ಸ್ ವೆಬ್‌ಸೈಟ್ ಪ್ರಕಾರ, ಬೆಂಗಳೂರು, ಹೈದರಾಬಾದ್‌ ಕೇರಳ, ಮುಂಬೈ, ನವದೆಹಲಿ ಮತ್ತು ಕೋಲ್ಕತ್ತಾದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನವನ್ನು 48,550 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಚೆನ್ನೈನಲ್ಲಿ 48,970 ರೂ.ಗೆ ಹಳದಿ ಲೋಹ ಮಾರಾಟವಾಗುತ್ತಿದೆ. ಇನ್ನು 24 ಗ್ರಾಂ ಚಿನ್ನದ ಬೆಲೆ ಬೆಂಗಳೂರು, ಹೈದರಾಬಾದ್‌ ಕೇರಳ, ಮುಂಬೈ, ನವದೆಹಲಿ ಮತ್ತು ಕೋಲ್ಕತ್ತಾದಲ್ಲಿ 52,960 ರೂ. ಇದ್ದು, ಚೆನ್ನೈನಲ್ಲಿ 53,420 ರೂ. ಇದೆ. 

ಇದನ್ನು ಓದಿ: ‘ಆರೋಗ್ಯ ಕೆಟ್ಟರೆ ಬಡವರು ಬದುಕಲೇಬಾರದಾ? ಹಸಿವಿನಿಂದಲೇ ಸಾಯಬೇಕಾ?’

ಮಧುರೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,970 ರೂ. ಇದ್ದು, 24 ಕ್ಯಾರೆಟ್‌ ಚಿನ್ನದ ಬೆಲೆ 53,420 ರೂ. ಇದೆ. ಇನ್ನು ಪಾಟ್ನಾದಲ್ಲಿ 24-ಕ್ಯಾರೆಟ್ ಶುದ್ಧತೆಯ ಚಿನ್ನಕ್ಕೆ 53,010 ರೂ. ಇದ್ದರೆ, 22 ಕ್ಯಾರೆಟ್‌ ಚಿನ್ನದ ಬೆಲೆ 48,610 ರೂ. ಇದೆ. ಮೈಸೂರು, ಮಂಗಳೂರು, ವಿಜಯವಾಡದಲ್ಲಿ ಇದೇ ಪ್ರಮಾಣದ 22 ಕ್ಯಾರೆಟ್ ಶುದ್ಧತೆ 48,550 ರೂ.ಗೆ ಮಾರಾಟವಾಗುತ್ತಿದೆ. 24 ಕ್ಯಾರೆಟ್‌ ಚಿನ್ನದ ಬೆಲೆ 52,960 ರೂ. ಇದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News