ನವದೆಹಲಿ: ಕಳೆದ ಕೆಲದಿನಗಳಿಂದ ಚಿನ್ನ ದರದಲ್ಲಿ ಭರ್ಜರಿ ಇಳಿಕೆ ಕಂಡುಬರುತ್ತಿದ್ದು ಗ್ರಾಹಕರಿಗೆ ಶುಭಸುದ್ದಿ ಸಿಕ್ಕಿದೆ. ಅಂತೆಯೇ ಇಂದು ಸಹ ಚಿನ್ನ ದರದಲ್ಲಿ 200 ರೂ. ಇಳಿಕೆಯಾಗಿದ್ದು, ಚಿನ್ನ ಖರೀದಿಸುವವರಿಗೆ ಇದು ಶುಭದಿನವಾಗಿ ಪರಿವರ್ತನೆಯಾಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿಏರಿಕೆ ಕಂಡುಬಂದಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: Gemology: ಈ ರತ್ನವನ್ನು ಧರಿಸುವುದರಿಂದ ಅದೃಷ್ಟದ ಜೊತೆಗೆ ಧನಲಾಭ ಗ್ಯಾರಂಟಿ!


ಇಂದು 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ 4̧6250 ರೂ. ಆಗಿದೆ. ಆದರೆ ಕೆಜಿ ಬೆಳ್ಳಿ ಬೆಲೆಯಲ್ಲಿ 700 ರೂ, ಏರಿಕೆ ಕಂಡು ಗ್ರಾಹಕರಿಗೆ ಶಾಕ್‌ ಸುದ್ದಿ ನೀಡಿದೆ. ಇಂದು ಬೆಳ್ಳಿಯು 59,400 ರೂ.ಗೆ ಮಾರಾಟವಾಗುತ್ತಿದೆ. 


ಮೇಕಿಂಗ್ ಚಾರ್ಜ್‌ಗಳು, ರಾಜ್ಯ ತೆರಿಗೆಗಳು ಮತ್ತು ಅಬಕಾರಿ ಸುಂಕದಂತಹ ಅಂಶಗಳಿಂದಾಗಿ ಹಳದಿ ಲೋಹದ ದರವು ಪ್ರತಿದಿನ ಭಿನ್ನವಾಗಿರುತ್ತದೆ. ಇಂದು ದೇಶಾದ್ಯಂತ ಕೆಲವು ನಗರಗಳ ಚಿನ್ನದ ದರಗಳು ಇಲ್ಲಿವೆ:


ಗುಡ್ ರಿಟರ್ನ್ಸ್ ವೆಬ್‌ಸೈಟ್ ಪ್ರಕಾರ, ಬೆಂಗಳೂರು, ಹೈದರಾಬಾದ್‌ ಕೇರಳ, ಮುಂಬೈ, ನವದೆಹಲಿ ಮತ್ತು ಕೋಲ್ಕತ್ತಾದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನವನ್ನು 46,250 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಚೆನ್ನೈನಲ್ಲಿ 47,370 ರೂ.ಗೆ ಹಳದಿ ಲೋಹ ಮಾರಾಟವಾಗುತ್ತಿದೆ. ಇನ್ನು 24 ಗ್ರಾಂ ಚಿನ್ನದ ಬೆಲೆ ಬೆಂಗಳೂರು, ಹೈದರಾಬಾದ್‌ ಕೇರಳ, ಮುಂಬೈ, ನವದೆಹಲಿ ಮತ್ತು ಕೋಲ್ಕತ್ತಾದಲ್ಲಿ 50,450 ರೂ. ಇದ್ದು, ಚೆನ್ನೈನಲ್ಲಿ 51,670 ರೂ. ಇದೆ. 


ಮಧುರೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,370 ರೂ. ಇದ್ದು, 24 ಕ್ಯಾರೆಟ್‌ ಚಿನ್ನದ ಬೆಲೆ 51,670 ರೂ. ಇದೆ. ಇನ್ನು ಪಾಟ್ನಾದಲ್ಲಿ 24-ಕ್ಯಾರೆಟ್ ಶುದ್ಧತೆಯ ಚಿನ್ನಕ್ಕೆ 50,520 ರೂ. ಇದ್ದರೆ, 22 ಕ್ಯಾರೆಟ್‌ ಚಿನ್ನದ ಬೆಲೆ 46,320 ರೂ. ಇದೆ. ಮೈಸೂರು, ಮಂಗಳೂರು, ವಿಜಯವಾಡದಲ್ಲಿ ಇದೇ ಪ್ರಮಾಣದ 22 ಕ್ಯಾರೆಟ್ ಶುದ್ಧತೆ 46,250 ರೂ.ಗೆ ಮಾರಾಟವಾಗುತ್ತಿದೆ. 24 ಕ್ಯಾರೆಟ್‌ ಚಿನ್ನದ ಬೆಲೆ 50,450 ರೂ. ಇದೆ. 


ಇದನ್ನು ಓದಿ: Arecanut Today Price: ಇಂದಿನ ರಾಶಿಅಡಿಕೆ ಬೆಲೆ ಧಾರಣೆ ಎಷ್ಟಿದೆ ನೋಡಿ


ಇನ್ನು ಒಡಿಶಾದ ಭುವನೇಶ್ವರ ಮತ್ತು ಆಂಧ್ರಪ್ರದೇಶ ವಿಶಾಖಪಟ್ಟಣಂನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 46,250 ರೂ.ಆದರೆ, 24 ಕ್ಯಾರೆಟ್‌ ಚಿನ್ನದ ಬೆಲೆ 50,450 ರೂ. ಇದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.