ಬೆಂಗಳೂರು : Gold Price Today : ಕಳೆದ ಎರಡು ದಿನಗಳಿಂದ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಬಂಗಾರದ ಬೆಲೆ ಯಲ್ಲಿ ಇಂದು 170 ರೂಪಾಯಿಯಷ್ಟು ಇಳಿಕೆ ದಾಖಲಾಗಿದೆ.  ಈ ಇಳಿಕೆಯ ನಂತರ 24 ಕ್ಯಾರೆಟ್ ಚಿನ್ನದ ಬೆಲೆ 52,360  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 48,000 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ 22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,550 52,960
ಮುಂಬಯಿ 48,000 52,360
ದೆಹಲಿ 48,150 52,530
ಕೋಲ್ಕತ್ತಾ 48,000 52,360
ಬೆಂಗಳೂರು 48,050 52,420
ಹೈದರಾಬಾದ್ 48,000 52,360
ಕೇರಳ 48,000 52,360

ಇದನ್ನೂ ಓದಿ : Best Bikes: 100 ಕಿ.ಮೀಗೂ ಅಧಿಕ ಮೈಲೇಜ್ ನೀಡುವ ಈ ಬೈಕ್ ಖರೀದಿಸಿ ಮಜಾ ಮಾಡಿ!


ಎರಡು ದಿನಗಳಿಂದ ಬೆಳ್ಳಿ ಬೆಲೆಯಲ್ಲಿ ಕೂಡಾ ಯಾವುದೇ ರೀತಿಯ ಬದಲಾವಣೆಯಾಗಿರಲಿಲ್ಲ. ಆದರೆ ಇಂದು ಬೆಳ್ಳಿ ಬೆಲೆಯಲ್ಲಿ ಕೂಡಾ 1,500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 63,400
 ಮುಂಬಯಿ 57,800
ದೆಹಲಿ 57,800
ಕೋಲ್ಕತ್ತಾ 57,800
ಬೆಂಗಳೂರು 63,400
ಹೈದರಾಬಾದ್ 63,400
ಕೇರಳ 63,400

ಇದನ್ನೂ ಓದಿ : Good News! ಖಾಸಗಿ ನೌಕರರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ, ಮುಂದಿನ ವರ್ಷ ಎಷ್ಟು ಇನ್ಕ್ರಿಮೆಂಟ್ ಸಿಗಲಿದೆ ಗೊತ್ತಾ?


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.