ಬೆಂಗಳೂರು : Gold Price Today : ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ನಿನ್ನೆ 320 ರೂಪಾಯಿಗಳ ಏರಿಕೆ ಕಂಡಿದ್ದ ಹಳದಿ ಲೋಹದ ಬೆಲೆಯಲ್ಲಿ ಇಂದು ಮತ್ತೆ 250 ರೂಪಾಯಿಗಳ ಹೆಚ್ಚಳವಾಗಿದೆ. ಈ ಬೆಲೆ ಏರಿಕೆಯೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 51,820 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,500 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ        22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,300 52,690
 ಮುಂಬಯಿ 47,500 51,820
ದೆಹಲಿ 47,650 51,980
ಕೋಲ್ಕತ್ತಾ 47,500 51,820
ಬೆಂಗಳೂರು 47,550 51,870
ಹೈದರಾಬಾದ್ 47,500 51,820
ಕೇರಳ 47,500 51,820

ಇದನ್ನೂ ಓದಿ : ಕಚ್ಚಾ ತೈಲದ ಏರಿಕೆಯ ನಡುವೆ ಪೆಟ್ರೋಲ್-ಡೀಸೆಲ್ ದುಬಾರಿ


ಬೆಳ್ಳಿ ಬೆಲೆಯಲ್ಲಿ ಕೂಡಾ ಮತ್ತೆ ಹೆಚ್ಚಳ ಕಂಡು ಬಂದಿದೆ. ನಿನ್ನೆ ಕೂಡಾ ಬೆಳ್ಳಿ ಬೆಲೆಯಲ್ಲಿ ಏರಿಕೆ ದಾಖಲಾಗಿತ್ತು. ನಿನ್ನೆ 100 ರೂಪಾಯಿಗಳಷ್ಟು ಏರಿಕೆಯಾಗಿದ್ದ ಬೆಳ್ಳಿ ಬೆಲೆಯಲ್ಲಿ, ಇಂದು ಮತ್ತೆ 400 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 61,100
 ಮುಂಬಯಿ 55,400
ದೆಹಲಿ 55,400
ಕೋಲ್ಕತ್ತಾ 55,400
ಬೆಂಗಳೂರು 61,100
ಹೈದರಾಬಾದ್ 61,100
ಕೇರಳ
 
61,100

ಇದನ್ನೂ ಓದಿ : ಡ್ರೈವಿಂಗ್ ಲೈಸೆನ್ಸ್ ಕಳೆದು ಹೋಗಿದೆಯೇ? ನಿಮಿಷಗಳಲ್ಲಿ ನಕಲಿ ಡಿಎಲ್‌ಗೆ ಈ ರೀತಿ ಅರ್ಜಿ ಸಲ್ಲಿಸಿ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.