Gold Price Today : ಎಷ್ಟಿದೆ ಚಿನ್ನ ಬೆಳ್ಳಿ ಬೆಲೆ? ಖರೀದಿಗೆ ಮುನ್ನ ನಿಮ್ಮ ನಗರದ ಬೆಲೆ ತಿಳಿಯಿರಿ

Gold Price Today :ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆ ಕೂಡಾ ಸ್ಥಿರವಾಗಿದೆ.

Written by - Ranjitha R K | Last Updated : Dec 14, 2022, 10:49 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಬೆಲೆ ಕೂಡಾ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಎಷ್ಟಿದೆ ಚಿನ್ನ ಬೆಳ್ಳಿ ಬೆಲೆ?  ಖರೀದಿಗೆ ಮುನ್ನ ನಿಮ್ಮ ನಗರದ ಬೆಲೆ ತಿಳಿಯಿರಿ  title=
Gold silver price today

ಬೆಂಗಳೂರು : Gold Price Today : ಸದಾ ಏರಿಳಿತ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಆಗಿಲ್ಲ. ಚಿನ್ನದ ಬೆಲೆ ಸ್ಥಿರವಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 54,330 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ  49,800 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್  ಚಿನ್ನದ ಬೆಲೆ ಹೀಗಿದೆ.

ಚೆನ್ನೈಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 54,980 ರೂಪಾಯಿ ಆಗಿದ್ದು, ಮುಂಬಯಿಯಲ್ಲಿ 54,330  ದೆಹಲಿಯಲ್ಲಿ 54,490 ರೂ., ಕೋಲ್ಕತ್ತಾದಲ್ಲಿ  54,330 ರೂಪಾಯಿ ಆಗಿದೆ. ಇನ್ನು ಬೆಂಗಳೂರಿನಲ್ಲಿ 54,390 ರೂಪಾಯಿ ಆಗಿದ್ದರೆ,  ಹೈದರಾಬಾದ್ ನಲ್ಲಿ 54,330 ರೂಪಾಯಿ ಆಗಿದೆ. ಕೇರಳದಲ್ಲಿಯೂ 10 ಗ್ರಾಂ ಚಿನ್ನದ ಬೆಲೆ  54,330 ರೂಪಾಯಿ ಆಗಿದೆ. 

ಇದನ್ನೂ ಓದಿ : Gas Cylinder Booking: ಹೊಸ ವರ್ಷಕ್ಕೂ ಮೊದಲೇ ಗುಡ್ ನ್ಯೂಸ್, 1000 ರೂ. ಕಡಿಮೆ ಬೆಲೆಯಲ್ಲಿ ಬುಕ್ ಮಾಡಿ ಗ್ಯಾಸ್ ಸಿಲಿಂಡರ್

ಚಿನ್ನದಂತೆ ಬೆಳ್ಳಿ ಬೆಲೆಯಲ್ಲಿ ಕೂಡಾ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಕೂಡಾ ಸ್ಥಿರವಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ಚೆನ್ನೈಯಲ್ಲಿ 73,000 ರೂಪಾಯಿ ಆಗಿದ್ದರೆ,  ಮುಂಬಯಿಯಲ್ಲಿ 69,000 ರೂಪಾಯಿ ಆಗಿದೆ. ಇನ್ನು ದೆಹಲಿಯಲ್ಲಿ 69,000  ರೂಪಾಯಿ, ಕೋಲ್ಕತ್ತಾದಲ್ಲಿಯೂ 69,000  ರೂಪಾಯಿ ಆಗಿದೆ. ಬೆಂಗಳೂರಿನ ಬೆಲೆ ನೋಡುವುದಾದರೆ 73,000 ರೂಪಾಯಿ, ಹೈದರಾಬಾದ್ ನಲ್ಲಿ 73,000ರೂಪಾಯಿ, ಕೇರಳದಲ್ಲಿಯೂ 73,000 ರೂಪಾಯಿ ಆಗಿದೆ. 

ಇದನ್ನೂ ಓದಿ : Income Tax ಪಾವತಿದಾರರಿಗೊಂದು ಬಂಬಾಟ್ ಸುದ್ದಿ, ಶೀಘ್ರದಲ್ಲಿಯೇ ವಿತ್ತ ಸಚಿವರಿಂದ ಘೋಷಣೆ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News