Gold Price Today : ಗಗನ ಮುಖಿಯಾದ ಚಿನ್ನ, ಬೆಳ್ಳಿ .! ಖರೀದಿಸುವ ಮೊದಲು ತಿಳಿದುಕೊಳ್ಳಿ ಇಂದಿನ ಬೆಲೆ

Gold Price Today : ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ.  ಬೆಳ್ಳಿ ಕೂಡಾ ಬಲು ದುಬಾರಿಯಾಗಿದೆ.  ಚಿನ್ನ ಬೆಳ್ಳಿ ಖರೀದಿಸುವುದಾದರೆ, ನಿಮ್ಮ ನಗರದಲ್ಲಿ ಬೆಲೆ ಎಷ್ಟಿದೆ ಎನ್ನುವುದರ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.   

Written by - Ranjitha R K | Last Updated : Dec 15, 2022, 11:26 AM IST
  • ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
  • ಬೆಳ್ಳಿ ಬೆಲೆ ಕೂಡಾ ದುಬಾರಿ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today :  ಗಗನ ಮುಖಿಯಾದ ಚಿನ್ನ, ಬೆಳ್ಳಿ .! ಖರೀದಿಸುವ ಮೊದಲು ತಿಳಿದುಕೊಳ್ಳಿ ಇಂದಿನ ಬೆಲೆ  title=
Gold Silver Price today

ಬೆಂಗಳೂರು : Gold Price Today : ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಬಂಗಾರದ ಬೆಲೆಯಲ್ಲಿ 550 ರೂಪಾಯಿಗಳಷ್ಟು  ಏರಿಕೆಯಾಗಿದೆ. ಈ ಏರಿಕೆಯೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 54,880 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ  50,300  ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್  ಚಿನ್ನದ ಬೆಲೆ ಹೀಗಿದೆ.

ಚೆನ್ನೈಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 55,640 ರೂಪಾಯಿ ಆಗಿದ್ದು, ಮುಂಬಯಿಯಲ್ಲಿ 54,880  ದೆಹಲಿಯಲ್ಲಿ 55,040 ರೂ. ಬೆಂಗಳೂರಿನಲ್ಲಿ 54,930 ರೂಪಾಯಿ ಆಗಿದ್ದರೆ,  ಹೈದರಾಬಾದ್ ನಲ್ಲಿ54,880  ರೂಪಾಯಿ ಆಗಿದೆ. ಕೇರಳದಲ್ಲಿಯೂ 10 ಗ್ರಾಂ ಚಿನ್ನದ ಬೆಲೆ  54,880 ರೂಪಾಯಿ ಆಗಿದೆ. 

ಇದನ್ನೂ ಓದಿ : SBI: ಕೋಟ್ಯಾಂತರ ಎಸ್‌ಬಿಐ ಗ್ರಾಹಕರಿಗೆ ಬಿಗ್ ಶಾಕ್, ಇಂದಿನಿಂದ ಈ ಕೆಲಸಕ್ಕೆ ಶುಲ್ಕ ಹೆಚ್ಚಳ

ಇನ್ನು ಬೆಳ್ಳಿ ಬೆಲೆಯಲ್ಲಿ ಕೂಡಾ ಭಾರೀ ಏರಿಕೆ ಕಂಡು ಬಂದಿದೆ.  ಬೆಳ್ಳಿ ಬೆಲೆಯಲ್ಲಿ 2,000  ರೂಪಾಯಿಗಳಷ್ಟು ಏರಿಕೆ ಕಂಡು ಬಂದಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ಚೆನ್ನೈಯಲ್ಲಿ 74,000 ರೂಪಾಯಿ ಆಗಿದ್ದರೆ,  ಮುಂಬಯಿಯಲ್ಲಿ 71,000 ರೂಪಾಯಿ ಆಗಿದೆ. ಇನ್ನು ದೆಹಲಿಯಲ್ಲಿ  71,000   ರೂಪಾಯಿ, ಕೋಲ್ಕತ್ತಾದಲ್ಲಿಯೂ  71,000   ರೂಪಾಯಿ ಆಗಿದೆ. ಬೆಂಗಳೂರಿನ ಬೆಲೆ ನೋಡುವುದಾದರೆ 74,000  ರೂಪಾಯಿ, ಹೈದರಾಬಾದ್ ನಲ್ಲಿ 74,000 ರೂಪಾಯಿ, ಕೇರಳದಲ್ಲಿಯೂ 74,000  ರೂಪಾಯಿ ಆಗಿದೆ. 

ಇದನ್ನೂ ಓದಿ : Indian Railways : ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ ಏರಿಕೆ? ಹಿರಿಯ ನಾಗರಿಕರಿಗೆ ವಿನಾಯಿತಿ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?:
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News