ಬೆಂಗಳೂರು : Gold Price Today :  ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡು ಬಂದಿದೆ. ಬಂಗಾರದ ಬೆಲೆಯಲ್ಲಿ 350  ರೂಪಾಯಿಗಳಷ್ಟು ಇಳಿಕೆ ದಾಖಲಾಗಿದೆ. ಈ ಇಳಿಕೆಯೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 54,430 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ  49,990 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್  ಚಿನ್ನದ ಬೆಲೆ ಹೀಗಿದೆ.


ಚೆನ್ನೈಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 55,200 ರೂಪಾಯಿ ಆಗಿದ್ದು, ಮುಂಬಯಿಯಲ್ಲಿ 54,530  ದೆಹಲಿಯಲ್ಲಿ 55,670 ರೂ. ಬೆಂಗಳೂರಿನಲ್ಲಿ 54,530 ರೂಪಾಯಿ ಆಗಿದ್ದರೆ,  ಹೈದರಾಬಾದ್ ನಲ್ಲಿ54,530  ರೂಪಾಯಿ ಆಗಿದೆ. ಕೇರಳದಲ್ಲಿಯೂ 10 ಗ್ರಾಂ ಚಿನ್ನದ ಬೆಲೆ  54,530 ರೂಪಾಯಿ ಆಗಿದೆ. 


ಇದನ್ನೂ ಓದಿ : ಸರ್ಕಾರದಿಂದ ಅಗ್ಗದಬೆಲೆಗೆ ಚಿನ್ನದ ಮಾರಾಟ! ಈ ದಿನದಿಂದ ಖರೀದಿ ಸಾಧ್ಯ


ಇನ್ನು ಬೆಳ್ಳಿ ಬೆಲೆಯಲ್ಲಿ ಕೂಡಾ ನಿನ್ನೆ ಭಾರೀ ಏರಿಕೆ ಕಂಡು ಬಂದಿತ್ತು. ಆದರೆ ಇಂದು ಬೆಳ್ಳಿ ಬೆಲೆಯಲ್ಲಿ 500  ರೂಪಾಯಿಗಳಷ್ಟು ಇಳಿಕೆಯಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ಚೆನ್ನೈಯಲ್ಲಿ 72, 700 ರೂಪಾಯಿ ಆಗಿದ್ದರೆ,  ಮುಂಬಯಿಯಲ್ಲಿ 70,500 ರೂಪಾಯಿ ಆಗಿದೆ. ಇನ್ನು ದೆಹಲಿಯಲ್ಲಿ  70,500  ರೂಪಾಯಿ, ಕೋಲ್ಕತ್ತಾದಲ್ಲಿಯೂ  70,500 ರೂಪಾಯಿ ಆಗಿದೆ. ಬೆಂಗಳೂರಿನ ಬೆಲೆ ನೋಡುವುದಾದರೆ 72, 700  ರೂಪಾಯಿ, ಹೈದರಾಬಾದ್ ನಲ್ಲಿ 72, 700  ರೂಪಾಯಿ, ಕೇರಳದಲ್ಲಿಯೂ 72, 700  ರೂಪಾಯಿ ಆಗಿದೆ. 


ಇದನ್ನೂ ಓದಿ : 500 ರೂಪಾಯಿ ನೋಟ್ ಬಗ್ಗೆ ಸರ್ಕಾರ ನೀಡಿದೆ ಮಹತ್ವದ ಮಾಹಿತಿ .!


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.