ಬೆಂಗಳೂರು : Gold Price Today : ನಿನ್ನೆ ತಟಸ್ಥವಾಗಿದ್ದ ಬಂಗಾರದ ಬೆಲೆಯಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ.  ಚಿನ್ನದ ಬೆಲೆಯಲ್ಲಿ 540 ರೂಪಾಯಿಗಳಷ್ಟು ಏರಿಕೆಯಾಗಿದೆ. ಈ ಏರಿಕೆಯೊಂದಿಗೆ  24 ಕ್ಯಾರೆಟ್ ಚಿನ್ನದ ಬೆಲೆ 54,650 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ  50,100 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್  ಚಿನ್ನದ ಬೆಲೆ ಹೀಗಿದೆ.


ಚೆನ್ನೈಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 55,830 ರೂಪಾಯಿ ಆಗಿದ್ದು, ಮುಂಬಯಿಯಲ್ಲಿ 54,650  ದೆಹಲಿಯಲ್ಲಿ 54,820 ರೂ. ಬೆಂಗಳೂರಿನಲ್ಲಿ 54,700 ರೂಪಾಯಿ ಆಗಿದ್ದರೆ, ಹೈದರಾಬಾದ್ ನಲ್ಲಿ 54,650 ರೂಪಾಯಿ ಆಗಿದೆ. ಕೇರಳದಲ್ಲಿಯೂ 10 ಗ್ರಾಂ ಚಿನ್ನದ ಬೆಲೆ  54,650  ರೂಪಾಯಿ ಆಗಿದೆ. 


ಇದನ್ನೂ ಓದಿ : Cars 2022: ಭಾರತದಲ್ಲಿ ಅತಿಹೆಚ್ಚು ಮಾರಾಟವಾದ ಕಾರುಗಳು ಇವೇ ನೋಡಿ


 ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಕೂಡಾ ಏರಿಕೆ ಕಂಡು ಬಂದಿದೆ. ನಿನ್ನೆ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿತ್ತು. ಆದರೆ ಇಂದು ಬೆಳ್ಳಿ ಬೆಲೆಯಲ್ಲಿ 800 ರೂಪಾಯಿಗಳಷ್ಟು ಏರಿಕೆಯಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ಚೆನ್ನೈಯಲ್ಲಿ 74,700 ರೂಪಾಯಿ ಆಗಿದ್ದರೆ, ಮುಂಬಯಿಯಲ್ಲಿ 70,100 ರೂಪಾಯಿ ಆಗಿದೆ. ಇನ್ನು ದೆಹಲಿಯಲ್ಲಿ 70,100  ರೂಪಾಯಿ, ಕೋಲ್ಕತ್ತಾದಲ್ಲಿಯೂ 70,100 ರೂಪಾಯಿ ಆಗಿದೆ. ಬೆಂಗಳೂರಿನ ಬೆಲೆ ನೋಡುವುದಾದರೆ 74,700 ರೂಪಾಯಿ, ಹೈದರಾಬಾದ್ ನಲ್ಲಿ 74,700 ರೂಪಾಯಿ, ಕೇರಳದಲ್ಲಿಯೂ 74,700 ರೂಪಾಯಿ ಆಗಿದೆ. 


ಇದನ್ನೂ ಓದಿ : Government Scheme : ನವದಂಪತಿಗಳಿಗೆ ಕೇಂದ್ರದಿಂದ ಉಚಿತವಾಗಿ ಸಿಗಲಿದೆ 2.50 ಲಕ್ಷ : ಹೀಗೆ ಅರ್ಜಿ ಸಲ್ಲಿಸಿ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.