Gold Price Today : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ , ಬೆಳ್ಳಿ ಕೂಡಾ ಭಾರೀ ಅಗ್ಗ

Gold Price Today : 380 ರೂಪಾಯಿ ಇಳಿಕೆಯೊಂದಿಗೆ ಇಂದು 24 ಕ್ಯಾರೆಟ್ ಚಿನ್ನದ ಬೆಲೆ 50,780  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,580 ರೂ. ಆಗಿದೆ.

Written by - Ranjitha R K | Last Updated : Jul 27, 2022, 08:03 AM IST
  • ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
  • ಬೆಳ್ಳಿ ಬೆಲೆ ಕೂಡಾ ಅಗ್ಗ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ , ಬೆಳ್ಳಿ ಕೂಡಾ ಭಾರೀ ಅಗ್ಗ   title=
gold price today (file photo)

ಬೆಂಗಳೂರು : Gold Price Today : ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಯಾಗಿರಲಿಲ್ಲ. ಆದರೆ ಇಂದು ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡು ಬಂದಿದೆ. 380 ರೂಪಾಯಿ ಇಳಿಕೆಯೊಂದಿಗೆ ಇಂದು 24 ಕ್ಯಾರೆಟ್ ಚಿನ್ನದ ಬೆಲೆ 50,780  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,580 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ    22 ಕ್ಯಾರೆಟ್ ಚಿನ್ನದ ಬೆಲೆ      24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,280 51,580
ದೆಹಲಿ 47,580 50,780
ಮುಂಬಯಿ 47,580 50,780
ಕೋಲ್ಕತ್ತಾ 47,580 50,780
ಬೆಂಗಳೂರು 47,580 50,780
ಹೈದರಾಬಾದ್ 47,580 50,780
ಕೇರಳ 47,580 50,780

ಇದನ್ನೂ ಓದಿ : LPG ಬಳಕೆದಾರರಿಗೆ ಸಿಹಿ ಸುದ್ದಿ : ನಿಮ್ಮ ಸಬ್ಸಿಡಿ ಬಗ್ಗೆ ಸರ್ಕಾರದಿಂದ ಭರ್ಜರಿ ಪ್ಲಾನ್! 

ನಿನ್ನೆ ಬೆಳ್ಳಿ ಬೆಲೆಯಲ್ಲಿ 200 ರೂಪಾಯಿಯಷ್ಟು ಇಳಿಕೆ ದಾಖಲಾಗಿತ್ತು. ಇಂದು ಬೆಳ್ಳಿ ಬೆಲೆಯಲ್ಲಿ ಕೂಡಾ ಭಾರೀ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 400 ರೂಪಾಯಿಯಷ್ಟು ಇಳಿಕೆ ದಾಖಲಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 60,800
ದೆಹಲಿ 54,500
ಮುಂಬಯಿ 54,500
ಕೋಲ್ಕತ್ತಾ 54,500
ಬೆಂಗಳೂರು 60,800
ಹೈದರಾಬಾದ್ 60,800
ಕೇರಳ 60,800

ಇದನ್ನೂ ಓದಿ : IOCL: ಪೆಟ್ರೋಲ್-ಡಿಸೇಲ್ ಮೇಲೆ 6000 ರೂ.ಗಳ ಸಬ್ಸಿಡಿ! ಸರ್ಕಾರದ ಯೋಜನೆಯಾದರೂ ಏನು?

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News