ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ! ಖರೀದಿಗೆ ಇದೇ ಬೆಸ್ಟ್ ಟೈಮ್
Gold Price Today : ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಲೋಹಗಳ ಬೆಲೆಯಲ್ಲಿ ಇಳಿಕೆಯಾಗಿದೆ.
Gold Price Today : ಚಿನ್ನ ಖರೀದಿಸುವವರಿಗೆ ಭರ್ಜರಿ ಸುದ್ದಿ ಇದು. ನೀವು ಕೂಡಾ ಚಿನ್ನವನ್ನು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಬಂಗಾರ ಖರೀದಿಗೆ ಇದೇ ಸರಿಯಾದ ಸಮಯ. ಹಳದಿ ಲೋಹದ ಬೆಲೆಯಲ್ಲಿ ದೊಡ್ಡ ಮಟ್ಟದ ಇಳಿಕೆ ಕಂಡುಬಂದಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಲೋಹಗಳ ಬೆಲೆಯಲ್ಲಿ ಇಳಿಕೆಯಾಗಿದೆ.
ಚಿನ್ನದ ಬೆಲೆಯಲ್ಲಿ ಕುಸಿತ :
ಇಂದು MCX ನಲ್ಲಿ ಚಿನ್ನದ ಬೆಲೆ ಕುಸಿಯುತ್ತಿದೆ. ಇಂದು ಪ್ರತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಶೇ.0.44 ಇಳಿಕೆ ಕಂಡು ಬಂದಿದೆ. ಈ ಇಳಿಕೆಯೊಂದಿಗೆ ಬಂಗಾರ 59,010 ರೂ.ನಲ್ಲಿ ವಹಿವಾಟು ನಡೆಸುತ್ತಿದೆ.
ಇದನ್ನೂ ಓದಿ : ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಬಡ್ಡಿ ದರ ಮತ್ತಷ್ಟು ಹೆಚ್ಚಳ ಸಾಧ್ಯತೆ!
ಬೆಳ್ಳಿಯೂ ಅಗ್ಗ :
ಇದಲ್ಲದೇ ಬೆಳ್ಳಿಯ ಬೆಲೆಯಲ್ಲಿ ಕೂಡಾ ಇಂದು ಶೇಕಡಾ 0.31 ರಷ್ಟು ಇಳಿಕೆ ಕಂಡು ಬಂದಿದೆ. ಇಂದು ಬೆಳ್ಳಿ ಪ್ರತಿ ಕೆಜಿಗೆ 70,192 ರೂ. ಯಷ್ಟಾಗಿದೆ.
ಕಳೆದ ವಾರಕ್ಕಿಂತ 1200 ರೂಪಾಯಿ ಅಗ್ಗ :
ಕಳೆದ ವಾರ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿತ್ತು. ಕಳೆದ ಇಡೀ ವಾರದಲ್ಲಿ ಚಿನ್ನದ ಬೆಲೆ 1200 ರೂ.ಗೂ ಹೆಚ್ಚು ಏರಿಕೆಯಾಗಿದೆ. ಇನ್ನೊಂದೆಡೆ, ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಕಾಣುತ್ತಿದೆ.
ಖರೀದಿಸುವ ಮುನ್ನ ಈ ವಿಷಯವನ್ನು ಪರಿಶೀಲಿಸಿ :
ನೀವು ಕೂಡಾ ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. 'ಬಿಐಎಸ್ ಕೇರ್ ಆ್ಯಪ್' ಮೂಲಕ ಚಿನ್ನದ ಶುದ್ಧತೆಯನ್ನು ಪರಿಶೀಲಿಸಬಹುದು.
ಇದನ್ನೂ ಓದಿ : Nirmala Sitharaman : ಹಳೆಯ ಪಿಂಚಣಿ ವ್ಯವಸ್ಥೆ ಕುರಿತು ವಿತ್ತ ಸಚಿವರಿಂದ ಮಹತ್ವದ ಮಾಹಿತಿ!
ದರಗಳನ್ನು ಹೀಗೆ ಪರಿಶೀಲಿಸಿ :
ನೀವು ನಿಮ್ಮ ಮನೆಯಲ್ಲಿ ಕುಳಿತು ಚಿನ್ನದ ಬೆಲೆಯನ್ನು ಪರಿಶೀಲಿಸಬಹುದು. ಇಂಡಿಯನ್ ಬುಲಿಯನ್ ಮತ್ತು ಜ್ಯುವೆಲರ್ಸ್ ಅಸೋಸಿಯೇಷನ್ ಪ್ರಕಾರ, 8955664433 ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಬೆಲೆಯನ್ನು ಪರಿಶೀಲಿಸಬಹುದು. ಯಾವ ಸಂಖ್ಯೆಯಿಂದ ಸಂದೇಶ ಕಳುಹಿಸುತ್ತೀರೋ ಅದೇ ಸಂಖ್ಯೆಗೆ ನಿಮಗೆ ಚಿನ್ನದ ಬೆಲೆಯನ್ನು ಕಳುಹಿಸಲಾಗುತ್ತದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.