Gold Price Today : ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ, ಬೆಳ್ಳಿ ಬೆಲೆ ಸ್ಥಿರ

Gold Price Today : ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

Written by - Ranjitha R K | Last Updated : Nov 14, 2022, 10:04 AM IST
  • ಚಿನ್ನದ ಬೆಲೆಯಲ್ಲಿ ಏರಿಕೆ
  • ಬೆಳ್ಳಿ ಬೆಲೆ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ, ಬೆಳ್ಳಿ ಬೆಲೆ ಸ್ಥಿರ  title=
Gold price today (file photo)

ಬೆಂಗಳೂರು : Gold Price Today : ಕಳೆದ ವಾರದ ಏರಿಳಿತದ ನಂತರ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಹಳದಿ ಲೋಹದ ಬೆಲೆಯಲ್ಲಿ ಕೊಂಚ ಮಟ್ಟದ ಏರಿಕೆ ದಾಖಲಾಗಿದೆ. ಇದರೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 52, 640 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ.ಗೆ  47, 260  ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,930 53,380
 ಮುಂಬಯಿ 48,260 52,640
ದೆಹಲಿ 48,360 52,760
ಕೋಲ್ಕತ್ತಾ 48,260 52,640
ಬೆಂಗಳೂರು 48,260 52,640
ಹೈದರಾಬಾದ್ 48,260 52,640
ಕೇರಳ 48,260 52,640

ಇದನ್ನೂ ಓದಿ :  ಎಲ್ ಪಿಜಿ ಬೆಲೆಗೆ ಸಂಬಂಧಿಸಿದಂತೆ ಸರ್ಕಾರದ ಈ ನಿರ್ಧಾರದಿಂದ ಕೋಟ್ಯಂತರ ಗ್ರಾಹಕರಿಗೆ ಬಿಗ್ ಶಾಕ್ .!

ಇನ್ನು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

 

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 67,500
 ಮುಂಬಯಿ 61,700
ದೆಹಲಿ 61,700
ಕೋಲ್ಕತ್ತಾ 61,700
ಬೆಂಗಳೂರು 67,500
ಹೈದರಾಬಾದ್ 67,500
ಕೇರಳ 67,500

ಇದನ್ನೂ ಓದಿ : PPF vs SSY : PPF ಅಥವಾ ಸುಕನ್ಯಾ ಸಮೃದ್ಧಿ ಯಾವುದು ಬೆಸ್ಟ್? ಇಲ್ಲಿದೆ ಲೆಕ್ಕಾಚಾರ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News