Gold Price Today : ಇಳಿಕೆಯಾಗುತ್ತಲೇ ಇದೆ ಬಂಗಾರದ ಬೆಲೆ.! ಇಂದಿನ ಬೆಲೆ ಎಷ್ಟು ಗೊತ್ತಾ ?

Gold Price Today :ಸತತ ಮೂರನೇ ದಿನವೂ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

Written by - Ranjitha R K | Last Updated : Nov 24, 2022, 09:26 AM IST
  • ಚಿನ್ನದ ಬೆಲೆಯಲ್ಲಿ ಇಂದು ಕೂಡಾ ಇಳಿಕೆ
  • ಬೆಳ್ಳಿ ಬೆಲೆ ಯಲ್ಲಿಯೂ ಇಳಿಮುಖ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಇಳಿಕೆಯಾಗುತ್ತಲೇ ಇದೆ ಬಂಗಾರದ ಬೆಲೆ.! ಇಂದಿನ ಬೆಲೆ ಎಷ್ಟು ಗೊತ್ತಾ ?   title=
Gold price today

ಬೆಂಗಳೂರು : Gold Price Today : ಸತತ ಮೂರನೇ ದಿನವೂ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.  ಈ ವಾರದ  ಆರಂಭದಿಂದಲೂ ಚಿನ್ನದ ಬೆಲೆಯಲ್ಲಿ ಇಳಿಮುಖವಾಗುತ್ತಲೇ ಇದೆ.  ನಿನ್ನೆ ಕೂಡಾ ಹಳದಿ ಲೋಹದ ಬೆಲೆಯಲ್ಲಿ 170 ರೂಪಾಯಿಗಳ ಇಳಿಕೆ ದಾಖಲಾಗಿತ್ತು. ಇಂದು ಮತ್ತೆ ಹಳದಿ ಲೋಹ 110 ರೂಪಾಯಿಗಳಷ್ಟು ಅಗ್ಗವಾಗಿದೆ. ಇದರೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 52,640 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ  48250 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ಚೆನ್ನೈಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 53,410 ರೂಪಾಯಿ ಆಗಿದ್ದು,  ಮುಂಬಯಿಯಲ್ಲಿ 52, 640, ದೆಹಲಿಯಲ್ಲಿ 52,800 ರೂ.   
ಕೋಲ್ಕತ್ತಾದಲ್ಲಿ  52, 640ರೂಪಾಯಿ ಆಗಿದೆ. ಇನ್ನು ಬೆಂಗಳೂರಿನಲ್ಲಿ 52, 700 ರೂಪಾಯಿ ಆಗಿದ್ದರೆ,  ಹೈದರಾಬಾದ್ ನಲ್ಲಿ  52, 640ರೂಪಾಯಿ ಆಗಿದೆ.  ಕೇರಳದಲ್ಲಿಯೂ 10 ಗ್ರಾಂ ಚಿನ್ನದ ಬೆಲೆ  52, 640ರೂಪಾಯಿ ಆಗಿದೆ. 

ಇದನ್ನೂ ಓದಿ : Milk Price Hike: ಗ್ರಾಹಕರಿಗೆ ಬೆಳ್ಳಂಬೆಳಗ್ಗೆ ಶಾಕ್: ಇಂದಿನಿಂದ ಹಾಲು-ಮೊಸರು ಬೆಲೆಯಲ್ಲಿ 2 ರೂ. ಹೆಚ್ಚಳ!

ಇನ್ನು  ನಿನ್ನೆ ಏರಿಕೆ ಕಂಡಿದ್ದ ಬೆಳ್ಳಿ ಬೆಲೆಯಲ್ಲಿ ಕೂಡಾ ಇಂದು ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ನಿನ್ನೆ ಮಾತ್ರ 600 ರೂಪಾಯಿಗಳಷ್ಟು ಹೆಚ್ಚಳ ಹೆಚ್ಚಳ ಕಂಡು ಬಂದಿತ್ತು. ಇದಕ್ಕೂ ಮೊದಲು ಸತತ ಎರಡು ದಿನಗಳವರೆಗೆ ಬೆಳ್ಳಿ ಬೆಲೆಯಲ್ಲಿ ಕೂಡಾ ಇಳಿಕೆ ದಾಖಲಾಗಿತ್ತು. ಇಂದು ಕೂಡಾ ಬೆಳ್ಳಿ ಕೆ.ಜಿ ಗೆ 200 ರೂಪಾಯಿಗಳಷ್ಟು ಅಗ್ಗವಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ಚೆನ್ನೈಯಲ್ಲಿ 67,500 ರೂಪಾಯಿ ಆಗಿದ್ದರೆ,  ಮುಂಬಯಿಯಲ್ಲಿ  61,000 ರೂಪಾಯಿ ಆಗಿದೆ. ಇನ್ನು ದೆಹಲಿಯಲ್ಲಿ  67,500 ರೂಪಾಯಿ, 
ಕೋಲ್ಕತ್ತಾದಲ್ಲಿಯೂ   67,500 ರೂಪಾಯಿ ಆಗಿದೆ. ಬೆಂಗಳೂರಿನ ಬೆಲೆ ನೋಡುವುದಾದರೆ 67,500 ರೂಪಾಯಿ, ಹೈದರಾಬಾದ್ ನಲ್ಲಿ  67,500 ರೂಪಾಯಿ, ಕೇರಳದಲ್ಲಿಯೂ 67,500 ರೂಪಾಯಿ ಆಗಿದೆ. 

ಇದನ್ನೂ ಓದಿ : LIC ಯ ಈ ಯೋಜನೆಯಲ್ಲಿ ₹44 ಠೇವಣಿ ಮಾಡಿದ್ರೆ, ಸಿಗಲಿದೆ ₹27 ಲಕ್ಷ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News