ಬೆಂಗಳೂರು : Gold Price Today : ಸತತ ಮೂರು ದಿನಗಳ ನಂತರ ಇಂದು ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಅಗ್ಗವಾಗಿದ್ದ ಚಿನ್ನ ಇಂದು ಒಮ್ಮೆಲೇ 330 ರೂಪಾಯಿಯಷ್ಟು ದುಬಾರಿಯಾಗಿದೆ. ಇದರೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 52,920 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ  48,550 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ಚೆನ್ನೈಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 53,780 ರೂಪಾಯಿ ಆಗಿದ್ದು, ಮುಂಬಯಿಯಲ್ಲಿ 52, 970, ದೆಹಲಿಯಲ್ಲಿ 53,120 ರೂ.  ಕೋಲ್ಕತ್ತಾದಲ್ಲಿ  52,970 ರೂಪಾಯಿ ಆಗಿದೆ. ಇನ್ನು ಬೆಂಗಳೂರಿನಲ್ಲಿ 53,020 ರೂಪಾಯಿ ಆಗಿದ್ದರೆ,  ಹೈದರಾಬಾದ್ ನಲ್ಲಿ  52, 970ರೂಪಾಯಿ ಆಗಿದೆ.  ಕೇರಳದಲ್ಲಿಯೂ 10 ಗ್ರಾಂ ಚಿನ್ನದ ಬೆಲೆ  52, 970ರೂಪಾಯಿ ಆಗಿದೆ. 


ಇದನ್ನೂ ಓದಿ : Today Vegetable Price: ಮಾರುಕಟ್ಟೆಗೆ ತೆರಳುವ ಮುನ್ನ ಪರಿಶೀಲಿಸಿ ಇಂದಿನ ತರಕಾರಿ ಬೆಲೆ


ಇನ್ನು ನಿನ್ನೆ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆಯಲ್ಲಿ ಕೂಡಾ ಇಂದು ಏರಿಕೆ ಕಂಡು ಬಂದಿದೆ.  ಬೆಳ್ಳಿ ಬೆಲ್ಯಲ್ಲಿ ಕೂಡಾ ಇಂದು ಭಾರೀ ಏರಿಕೆಯಾಗಿದೆ. ಕೆ.ಜಿ ಬೆಳ್ಳಿಗೆ 1,200 ರೂಪಾಯಿಯಷ್ಟು ಹೆಚ್ಚಳವಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ಚೆನ್ನೈಯಲ್ಲಿ 68,200 ರೂಪಾಯಿ ಆಗಿದ್ದರೆ, ಮುಂಬಯಿಯಲ್ಲಿ  62,200 ರೂಪಾಯಿ ಆಗಿದೆ. ಇನ್ನು ದೆಹಲಿಯಲ್ಲಿ  62,200  ರೂಪಾಯಿ, ಕೋಲ್ಕತ್ತಾದಲ್ಲಿಯೂ 62,200 ರೂಪಾಯಿ ಆಗಿದೆ. ಬೆಂಗಳೂರಿನ ಬೆಲೆ ನೋಡುವುದಾದರೆ 68,200 ರೂಪಾಯಿ, ಹೈದರಾಬಾದ್ ನಲ್ಲಿ  68,200ರೂಪಾಯಿ, ಕೇರಳದಲ್ಲಿಯೂ 68,200 ರೂಪಾಯಿ ಆಗಿದೆ. 


ಇದನ್ನೂ ಓದಿ : ರೈತರಿಗೆ ಭರ್ಜರಿ ಸಿಹಿ ಸುದ್ದಿ : PM Kisan 13ನೇ ಕಂತಿನ ಪಡೆಯಲು ಈ 2 ಕೆಲಸ ಮಾಡಿ 


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.