Gold Price Today : ನಿಮ್ಮ ನಗರದಲ್ಲಿ ಎಷ್ಟಿದೆ ಚಿನ್ನ ಬೆಳ್ಳಿ ಬೆಲೆ ?

Gold Price Today : ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ.

Written by - Ranjitha R K | Last Updated : Nov 29, 2022, 09:22 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಬೆಲೆ ಅಗ್ಗ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ನಿಮ್ಮ ನಗರದಲ್ಲಿ ಎಷ್ಟಿದೆ ಚಿನ್ನ ಬೆಳ್ಳಿ ಬೆಲೆ ?  title=
Gold Silver price Today

ಬೆಂಗಳೂರು : Gold Price Today : ನಿನ್ನೆ ಸ್ವಲ್ಪ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಇಂದು ಚಿನ್ನದ ಬೆಲೆ ಸ್ಥಿರವಾಗಿದೆ.  ಇದರೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 52,980 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ  48,560 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್  ಚಿನ್ನದ ಬೆಲೆ ಹೀಗಿದೆ.

ಚೆನ್ನೈಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 53,970 ರೂಪಾಯಿ ಆಗಿದ್ದು,  ಮುಂಬಯಿಯಲ್ಲಿ 52, 980, ದೆಹಲಿಯಲ್ಲಿ 53,140 ರೂ. ಕೋಲ್ಕತ್ತಾದಲ್ಲಿ  52,980 ರೂಪಾಯಿ ಆಗಿದೆ. ಇನ್ನು ಬೆಂಗಳೂರಿನಲ್ಲಿ 53,030 ರೂಪಾಯಿ ಆಗಿದ್ದರೆ,  ಹೈದರಾಬಾದ್ ನಲ್ಲಿ  52, 980ರೂಪಾಯಿ ಆಗಿದೆ.  ಕೇರಳದಲ್ಲಿಯೂ 10 ಗ್ರಾಂ ಚಿನ್ನದ ಬೆಲೆ  52, 980ರೂಪಾಯಿ ಆಗಿದೆ. 

ಇದನ್ನೂ ಓದಿ : Vegetable Price Today: ಇಂದು ತರಕಾರಿ ಬೆಲೆ ಹೇಗಿದೆ ಎಂದು ಈಗಲೇ ತಿಳಿದುಕೊಳ್ಳಿ

 ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 400 ರೂಪಾಯಿಯಷ್ಟು ಇಳಿಕೆ ದಾಖಲಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ಚೆನ್ನೈಯಲ್ಲಿ 68,100 ರೂಪಾಯಿ ಆಗಿದ್ದರೆ,  ಮುಂಬಯಿಯಲ್ಲಿ  61,400 ರೂಪಾಯಿ ಆಗಿದೆ. ಇನ್ನು ದೆಹಲಿಯಲ್ಲಿ  61,400  ರೂಪಾಯಿ, ಕೋಲ್ಕತ್ತಾದಲ್ಲಿಯೂ   61,400 ರೂಪಾಯಿ ಆಗಿದೆ. ಬೆಂಗಳೂರಿನ ಬೆಲೆ ನೋಡುವುದಾದರೆ 68,100 ರೂಪಾಯಿ, ಹೈದರಾಬಾದ್ ನಲ್ಲಿ  68,100 ರೂಪಾಯಿ, ಕೇರಳದಲ್ಲಿಯೂ 68,100 ರೂಪಾಯಿ ಆಗಿದೆ. 

ಇದನ್ನೂ ಓದಿ : RBI Imposes Penalty: ಈ ಬ್ಯಾಂಕ್ ಗೆ ಬರೋಬ್ಬರಿ 1.25 ಕೋಟಿ ದಂಡ ವಿಧಿಸಿದ RBI: ನಿಮ್ಮ ಖಾತೆ ಇದೆಯೇ?

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News