Gold Price Today : ಭಾರೀ ಅಗ್ಗವಾಯಿತು ಚಿನ್ನ ಮತ್ತು ಬೆಳ್ಳಿ, ಖರೀದಿಗೆ ಉತ್ತಮ ಸಮಯ

Gold Price Today : ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

Written by - Ranjitha R K | Last Updated : Oct 11, 2022, 08:19 AM IST
  • ಚಿನ್ನದ ಬೆಲೆಯಲ್ಲಿ ಇಳಿಕೆ
  • ಬೆಳ್ಳಿ ಬೆಲೆಯಲ್ಲಿ ಕೂಡಾ ಇಳಿಕೆ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಭಾರೀ ಅಗ್ಗವಾಯಿತು ಚಿನ್ನ ಮತ್ತು ಬೆಳ್ಳಿ, ಖರೀದಿಗೆ ಉತ್ತಮ ಸಮಯ  title=
Gold Silver price (file photo)

ಬೆಂಗಳೂರು : Gold Price Today : ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಹಳದಿ ಲೋಹದ ಬೆಲೆಯಲ್ಲಿ 270 ರೂಪಾಯಿಗಳಷ್ಟು ಇಳಿಕೆ ದಾಖಲಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,930 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ.ಗೆ 47,600 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,050 52,420
 ಮುಂಬಯಿ 47,600 51,930
ದೆಹಲಿ 47,750 52,100
ಕೋಲ್ಕತ್ತಾ 47,600 51,930
ಬೆಂಗಳೂರು 47,650 51.980
ಹೈದರಾಬಾದ್ 47,600 51,930
ಕೇರಳ 47,600 51,930

ಇದನ್ನೂ ಓದಿ : 7th Pay Commission: DA ಹೆಚ್ಚಳದ ಬಳಿಕ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಮತ್ತೊಂದು ಗಿಫ್ಟ್ ನೀಡಿದ ಸರ್ಕಾರ

ಇನ್ನು ಬೆಳ್ಳಿ ಬೆಲೆಯಲ್ಲಿ ಕೂಡಾ ಇಂದು ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 1,300 ರೂಪಾಯಿಯಷ್ಟು ಇಳಿಕೆ ದಾಖಲಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 64,800
 ಮುಂಬಯಿ 59,500
ದೆಹಲಿ 59,500
ಕೋಲ್ಕತ್ತಾ 59,500
ಬೆಂಗಳೂರು 64,800
ಹೈದರಾಬಾದ್ 64,800
ಕೇರಳ 64,800

ಇದನ್ನೂ ಓದಿ : Bank FD: ಸರ್ಕಾರಿ ಹಾಗೂ ಖಾಸಗಿ ಬ್ಯಾಂಕುಗಳಲ್ಲಿ FD ಮಾಡುವವರಿಗೆ RBI ನೀಡಿದೆ ಮಹತ್ವದ ಮಾಹಿತಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News