Gold Price Today : ಮತ್ತೆ ಏರಿಕೆಯಾಯಿತು ಚಿನ್ನದ ಬೆಲೆ, ಬೆಲೆಯಲ್ಲಿ ಕೊಂಚ ಇಳಿಕೆ

Gold Price Today : ಚಿನ್ನದ  ಬೆಲೆಯಲ್ಲಿ ಇಳಿಕೆಯಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಬಂಗಾರದ ಬೆಲೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಇಂದು ಕೂಡಾ ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. 

Written by - Ranjitha R K | Last Updated : Oct 7, 2022, 07:45 AM IST
  • ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
  • ಬೆಳ್ಳಿ ಬೆಲೆಯಲ್ಲಿ ಇಳಿಕೆ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಮತ್ತೆ ಏರಿಕೆಯಾಯಿತು ಚಿನ್ನದ ಬೆಲೆ, ಬೆಲೆಯಲ್ಲಿ ಕೊಂಚ ಇಳಿಕೆ  title=
Gold Silver Price Today

ಬೆಂಗಳೂರು : Gold Price Today : ದಿನೇ ದಿನೇ ಬಂಗಾರದ ಬೆಲೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಇಂದು ಕೂಡಾ ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ.  ಅಂದರೆ ಸತತ ನಾಲ್ಕು ದಿನಗಳಿಂದ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಮಾರುಕಟ್ಟೆ ಪ್ರಕಾರ, 24 ಕ್ಯಾರೆಟ್ ಚಿನ್ನದ ಬೆಲೆ 52,200   ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ.ಗೆ 47,850 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,400 52,800
 ಮುಂಬಯಿ 47,850 52,200
ದೆಹಲಿ 48,000 52,360
ಕೋಲ್ಕತ್ತಾ 47,850 52,200
ಬೆಂಗಳೂರು 47,900 52,250
ಹೈದರಾಬಾದ್ 47,850 52,200
ಕೇರಳ 47,850 52,200

ಇದನ್ನೂ ಓದಿ : LIC ಈ ಪ್ಲಾನ್​​ನಲ್ಲಿ ₹150 ಠೇವಣಿ ಮಾಡಿ, 25 ವರ್ಷಕ್ಕೆ ನಿಮ್ಮ ಮಗುವನ್ನು ಮಿಲಿಯನೇರ್ ಮಾಡಿ 

ಇನ್ನು ಮೂರು ದಿನಗಳಿಂದ ಏರಿಕೆ ಕಂಡಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 500 ರೂಪಾಯಿಯಷ್ಟು ಇಳಿಕೆ ದಾಖಲಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 66,500
 ಮುಂಬಯಿ 61,500
ದೆಹಲಿ 61,500
ಕೋಲ್ಕತ್ತಾ 61,500
ಬೆಂಗಳೂರು 66,500
ಹೈದರಾಬಾದ್ 66,500
ಕೇರಳ 66,500

ಇದನ್ನೂ ಓದಿ : 7th Pay Commission : ಕೇಂದ್ರ ನೌಕರರಿಗೆ ಸಿಹಿ ಸುದ್ದಿ : ಹೆಚ್ಚಾಗಲಿವೆ ಈ 4 ಭತ್ಯೆಗಳು, ಸಂಬಳದಲ್ಲಿ ಭಾರಿ ಹೆಚ್ಚಳ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News