Gold Price Today : ಇಂದು ಕೂಡಾ ಬಂಗಾರದ ಬೆಲೆಯಲ್ಲಿ ಇಳಿಕೆ ಬೆಳ್ಳಿ ಮಾತ್ರ ದುಬಾರಿ
Gold Price Today : ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.
ಬೆಂಗಳೂರು : Gold Price Today : ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ನಿನ್ನೆ ಕೂಡಾ 360 ರೂಪಾಯಿಗಳಷ್ಟು ಇಳಿಕೆ ಕಂಡು ಬಂದಿತ್ತು. ಇಂದು ಮತ್ತೆ ಹಳದಿ ಲೋಹದ ಬೆಲೆಯಲ್ಲಿ 220 ರೂಪಾಯಿಗಳಷ್ಟು ಇಳಿಕೆ ದಾಖಲಾಗಿದೆ. ಈ ಇಳಿಕೆಯೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 50,400 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,200 ರೂ. ಆಗಿದೆ.
ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.
ನಗರ | 22 ಕ್ಯಾರೆಟ್ ಚಿನ್ನದ ಬೆಲೆ | 24 ಕ್ಯಾರೆಟ್ ಚಿನ್ನದ ಬೆಲೆ |
ಚೆನ್ನೈ | 46,800 | 51,050 |
ಮುಂಬಯಿ | 46,200 | 50,400 |
ದೆಹಲಿ | 46,350 | 50,560 |
ಕೋಲ್ಕತ್ತಾ | 46,200 | 50,400 |
ಬೆಂಗಳೂರು | 46,250 | 50,450 |
ಹೈದರಾಬಾದ್ | 46,200 | 50,400 |
ಕೇರಳ | 46,200 | 50,400 |
ಇದನ್ನೂ ಓದಿ : ಸುಕನ್ಯಾ ಸಮೃದ್ಧಿ ಅಥವಾ PPF ಹೂಡಿಕೆದಾರರಿಗೆ ಭರ್ಜರಿ ಸಿಹಿ ಸುದ್ದಿ..!
ನಿನ್ನೆ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದೆ. ನಿನ್ನೆ ಬೆಳ್ಳಿ ದರದಲ್ಲಿ 600 ರೂಪಾಯಿ ಇಳಿಕೆಯಾಗಿತ್ತು. ಇಂದು ಮತ್ತೆ 600 ರೂಪಾಯಿ ಏರಿಕೆಯಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.
ನಗರ | ಇಂದಿನ ಬೆಳ್ಳಿ ಬೆಲೆ |
ಚೆನ್ನೈ | 61,100 |
ಮುಂಬಯಿ | 57,000 |
ದೆಹಲಿ | 57,000 |
ಕೋಲ್ಕತ್ತಾ | 57,000 |
ಬೆಂಗಳೂರು | 61,100 |
ಹೈದರಾಬಾದ್ | 61,100 |
ಕೇರಳ | 61,100 |
ಇದನ್ನೂ ಓದಿ : 7th Pay Commission : ಕೇಂದ್ರ ನೌಕರರಿಗೆ ಭರ್ಜರಿ ಸಿಹಿ ಸುದ್ದಿ : ನಿಮಗೆ ದೀಪಾವಳಿ ಮೊದಲೆ ಸಿಗಲಿವೆ ಈ 3 ಉಡುಗೊರೆಗಳು!
ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.