Gold Price Today : ಸತತ ಎರಡನೇ ದಿನವೂ ಚಿನ್ನ ಬೆಳ್ಳಿ ದರದಲ್ಲಿ ಏರಿಕೆ

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

Written by - Ranjitha R K | Last Updated : Sep 7, 2022, 08:34 AM IST
  • ಚಿನ್ನದ ಬೆಲೆಯಲ್ಲಿ ಏರಿಕೆ
  • ಬೆಳ್ಳಿ ಕೂಡಾ ದುಬಾರಿ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಸತತ ಎರಡನೇ ದಿನವೂ ಚಿನ್ನ ಬೆಳ್ಳಿ ದರದಲ್ಲಿ ಏರಿಕೆ  title=
Gild price today (file photo)

ಬೆಂಗಳೂರು : Gold Price Today : ಸತತ ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ನಿನ್ನೆ ಚಿನ್ನದ ಬೆಲೆಯಲ್ಲಿ 110 ರೂಪಾಯಿಗಳಷ್ಟು  ಏರಿಕೆ ಕಂಡಿತ್ತು. ಇಂದು ಮತ್ತೆ 160 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಈ ಏರಿಕೆಯೊಂದಿಗೆ  24 ಕ್ಯಾರೆಟ್ ಚಿನ್ನದ ಬೆಲೆ 51,160 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,900 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,500 51,820
 ಮುಂಬಯಿ 46,900 51,160
ದೆಹಲಿ 46,050 51,320
ಕೋಲ್ಕತ್ತಾ 46,900 51,160
ಬೆಂಗಳೂರು 46,950 51,200
ಹೈದರಾಬಾದ್ 46,900 51,160
ಕೇರಳ 46,900 51,160

ಇದನ್ನೂ ಓದಿ : Insurance Agents: ಲಕ್ಷಾಂತರ ವಿಮಾ ಏಜೆಂಟರ ಪಾಲಿಗೊಂದು ಭಾರಿ ಸಂತಸದ ಸುದ್ದಿ

ಇನ್ನು ಬೆಳ್ಳಿ ಬೆಲೆಯಲ್ಲಿ ಕೂಡಾ ಭಾರೀ ಏರಿಕೆ ಕಂಡು ಬಂದಿದೆ.  ಬೆಳ್ಳಿ ಬೆಲೆಯಲ್ಲಿ 680 ರೂಪಾಯಿಗಳಷ್ಟು ಏರಿಕೆಯಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 59,000
 ಮುಂಬಯಿ 53,900
ದೆಹಲಿ 53,900
ಕೋಲ್ಕತ್ತಾ 53,900
ಬೆಂಗಳೂರು 59,000
ಹೈದರಾಬಾದ್ 59,000
ಕೇರಳ 59,000

ಇದನ್ನೂ ಓದಿ SBI Digital Banking: ಎಸ್‌ಬಿಐ ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
.

Trending News